ಶಿಮ್ಲಾದಲ್ಲಿ ಸಿಲುಕಿದ್ದ ಕರ್ನಾಟಕದ ಮಹಿಳೆಗೆ ವಾಪಸ್ಸಾಗಲು ರಾಜ್ಯ ಸರ್ಕಾರ ನೆರವು
ಹಿಮಾಚಲ ಪ್ರದೇಶದ ಶಿಮ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮೈಸೂರು ಮೂಲದ ಮಹಿಳೆ ತವರಿಗೆ ವಾಪಸ್ಸಾಗಲು ರಾಜ್ಯ ಸರ್ಕಾರ ನೆರವು ನೀಡಿದೆ.

Published On :
ಬೆಂಗಳೂರು: ಹಿಮಾಚಲ ಪ್ರದೇಶದ ಶಿಮ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮೈಸೂರು ಮೂಲದ ಮಹಿಳೆ ತವರಿಗೆ ವಾಪಸ್ಸಾಗಲು ರಾಜ್ಯ ಸರ್ಕಾರ ನೆರವು ನೀಡಿದೆ.
ಮೈಸೂರು ಮೂಲದ ಮಹಿಳೆಯನ್ನು ವಾಪಸ್ ರಾಜ್ಯಕ್ಕೆ ಕರೆತರಲು ಸಿಎಂ ಕುಮಾರಸ್ವಾಮಿ ಮೈಸೂರಿನ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಪತಿಯಿಂದ ಪರಿತ್ಯಕ್ತಳಾಗಿದ್ದ ಮೈಸೂರಿನ ಮಹಿಳೆ ಮಾನಸಿಕ ಅಸ್ವಸ್ಥತೆಗೀಡಾಗಿದ್ದು, ಶಿಮ್ಲಾದ ಆಸ್ಪತ್ರೆಯಲ್ಲಿ ಕಳೆದ ಎರಡು ವರ್ಷಗಳಿಂದ ಚಿಕಿತ್ಸೆ ಪಡೆಯುತ್ತಿದ್ದ ವರದಿ ಪ್ರಕಟವಾಗಿತ್ತು.
ಈ ಬಗ್ಗೆ ಟಿವಿ 5 ಸುದ್ದಿ ವಾಹಿನಿಯ ದೆಹಲಿ ವಿಭಾಗದ ಮುಖ್ಯಸ್ಥರಾಗಿರುವ ಸ್ವಾತಿ ಚಂದ್ರಶೇಖರ್ ವಿಶೇಷ ವರದಿ ಪ್ರಕಟಿಸಿ ಮಹಿಳೆಯ ಪರಿಸ್ಥಿತಿಯನ್ನು ಶಿಮ್ಲಾ ಸರ್ಕಾರ ಹಾಗೂ ಕರ್ನಾಟಕ ಸರ್ಕಾರಗಳ ಗಮನಕ್ಕೆ ತಂದಿದ್ದರು.
ಈ ನಡುವೆ ರಾಜ್ಯದಲ್ಲಿ ವಿಧಾನಸಭೆಗೆ ಚುನಾವಣೆ ನಡೆದು ಹೊಸ ಸರ್ಕಾರ ಅಸ್ತಿತ್ವಕ್ಕೆ ಬರುವ ಪ್ರಕ್ರಿಯೆಗಳಲ್ಲಿ ಆಡಳಿತ ಯಂತ್ರ ನಿರತವಾಗಿತ್ತು. ಆದರೆ ಸಿಎಂ ಹೆಚ್ ಡಿ ಕುಮಾರಸ್ವಾಮಿ ದೆಹಲಿಗೆ ಭೇಟಿ ನೀಡಿದ್ದಾಗ ಶಿಮ್ಲಾದಲ್ಲಿದ್ದ ಮಹಿಳೆಯ ಪರಿಸ್ಥಿತಿಯ ಕುರಿತು ವಿಶೇಷ ವರದಿ ಪ್ರಕಟಿಸಿದ್ದ ಪತ್ರಕರ್ತೆ ಸ್ವಾತಿ ಚಂದ್ರಶೇಖರ್ ಮುಖ್ಯಮಂತ್ರಿಗಳಿಗೆ ಮಾಹಿತಿ ನೀಡಿದ್ದರು. ಈಗ ಮೈಸೂರು ಮೂಲದ ಮಹಿಳೆ ತವರಿಗೆ ವಾಪಸ್ಸಾಗಲು ರಾಜ್ಯ ಸರ್ಕಾರ ನೆರವು ನೀಡಿದೆ.
ರಾಜ್ಯದ ಅಧಿಕಾರಿಗಳು ಹಿಮಾಚಲ ಪ್ರದೇಶದ ಆಸ್ಪತ್ರೆಯ ಅಧಿಕಾರಿಗಳೊಂದಿಗೆ ಸಂಪರ್ಕದಲ್ಲಿದ್ದು, ಮಹಿಳೆಯ ಚಿಕಿತ್ಸೆಗೆ ವ್ಯವಸ್ಥೆ ಮಾಡಲಾಗಿದೆ, ಚಿಕಿತ್ಸೆಯ ನಂತರ ಆಕೆಗೆ ಆಶ್ರಯ ನೀಡಲು ವ್ಯವಸ್ಥೆ ಮಾಡಲಾಗಿದೆ ಎಂದು ಮುಖ್ಯಮಂತ್ರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.
ಬ್ರೇಕಿಂಗ್ ನ್ಯೂಸ್
ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಹೆಚ್ಚಿದ ಒತ್ತಡ: ಮುಖ್ಯ ಚುನಾವಣಾ ಆಯುಕ್ತರನ್ನ ವಜಾ ಮಾಡೊದು ಅಷ್ಟು ಸುಲಭನಾ? ಯಾರಿಗಿದೆ ಆ ಪವರ್? ಸಂವಿಧಾನ ಹೇಳುವುದೇನು?ರಾಹುಕಾಲ ಎಂದರೇನು? ಮದುವೆಗೆ ಅನ್ವಯಿಸುತ್ತದೆಯೇ? ರಾಹು ಶಾಂತಿಗಾಗಿ ನಿಂಬೆ ಹಣ್ಣು ದೀಪ ಹಚ್ಚುವುದು ಸೂಕ್ತವೇ?ಗೌರಿಬಿದನೂರಿನ ಮಣ್ಣಲ್ಲಿ ಅರಳಿದ ಮರುಭೂಮಿ ಹಣ್ಣು: ಅಸಾಧ್ಯವನ್ನು ಸಾಧ್ಯವಾಗಿಸಿದ ಹಠವಾದಿ; ಸ್ವಾವಲಂಬಿ ಕೃಷಿಗೆ ಹೊಸ ಭಾಷ್ಯ ಬರೆದ ದಿವಾಕರ್ ಚನ್ನಪ್ಪ..!ಕರ್ನಾಟಕದ ನಂ.1 ಶ್ರೀಮಂತ ಯಾರು ಗೊತ್ತಾ? ಅಂಬಾನಿ, ಅದಾನಿ ಬಿಡಿ; ಇಲ್ಲಿದೆ ನಮ್ಮ ಕರುನಾಡ ಸಿರಿವಂತರ ಟಾಪ್ ಲಿಸ್ಟ್!ಫ್ಯಾಟ್ ನಿಂದ ಫಿಟ್ ವರೆಗೆ: ಸಾಹೇಬಲಾಲ್ ಛಪ್ಪರ್ಬಂದ್ ಸ್ಫೂರ್ತಿದಾಯಕ ಪಯಣವಿದೇಶಿ ಪ್ರವಾಸದ ಪ್ಲ್ಯಾನ್ ಇದೆಯೇ? ಒಂದು ಸಣ್ಣ ತಪ್ಪು ಭಾರೀ ದಂಡಕ್ಕೆ ಕಾರಣವಾಗಬಹುದು; ಪ್ರವಾಸಿಗರು ತಿಳಿದಿರಲೇಬೇಕಾದ ನಿಯಮಗಳಿವು...!ಮನಸ್ಸಿದ್ದರೆ ಮಾರ್ಗ ಎಂಬುದನ್ನು ರುಜುವಾತು ಮಾಡಿದ ಛಲವಾದಿ; 27 ವರ್ಷಗಳ ಹೋರಾಟದಲ್ಲಿ 26 ಬಾರಿ ಸೋತು 59ನೇ ವಯಸ್ಸಿನಲ್ಲಿ ಸರ್ಕಾರಿ ಶಿಕ್ಷಕರಾದ ವಿಜಯ್ಪಶ್ಚಿಮ ಘಟ್ಟಗಳ ESA - ಕಸ್ತೂರಿರಂಗನ್ ವರದಿ ಇನ್ನೂ ಏಕೆ ಜಾರಿಗೆ ಬಂದಿಲ್ಲ?


