ಪ್ರತ್ಯೇಕ ರಾಜ್ಯಕ್ಕೆ ಆಗ್ರಹಿಸಿ ಆಗಸ್ಟ್ 2ರಂದು ಉತ್ತರ ಕರ್ನಾಟಕ ಬಂದ್!
ಪ್ರತ್ಯೇಕ ರಾಜ್ಯಕ್ಕೆ ಆಗ್ರಹಿಸಿ ಉತ್ತರ ಕರ್ನಾಟಕ ಹೋರಾಟ ಸಮಿತಿ ಆಗಸ್ಟ್ 2 ರಂದು ಬಂದ್‌ಗೆ ಕರೆ ನೀಡಿದೆ.

Published On :
ಬೆಂಗಳೂರು: ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯದ ಹೋರಾಟ ಮತ್ತೆ ಕಾವು ಪಡೆದುಕೊಂಡಿದೆ. ಪ್ರತ್ಯೇಕ ರಾಜ್ಯಕ್ಕೆ ಆಗ್ರಹಿಸಿ ಉತ್ತರ ಕರ್ನಾಟಕ ಹೋರಾಟ ಸಮಿತಿ ಆಗಸ್ಟ್ 2 ರಂದು ಬಂದ್‌ಗೆ ಕರೆ ನೀಡಿದೆ.
ಉತ್ತರ ಕರ್ನಾಟಕದ 13 ಜಿಲ್ಲೆಗಳಲ್ಲೂ ಬಂದ್ ನಡೆಯಲಿದ್ದು ಈ ಸಂಬಂಧ ಸಾರ್ವಜನಿಕರಿಂದ ಸಹಿ ಸಂಗ್ರಹಿಸಲಾಗುವುದು ಎಂದು ಒಕ್ಕೂಟದ ನಾಯಕ ಸೋಮಶೇಖರ್ ಕೊತ್ತಂಬರಿ ತಿಳಿಸಿದ್ದಾರೆ.
ಸಿಎಂ ಕುಮಾರಸ್ವಾಮಿ ನೇತೃತ್ವದ ಸರ್ಕಾರ, ಬಜೆಟ್‌ನಲ್ಲಿ ಉತ್ತರ ಕರ್ನಾಟಕ ಪ್ರದೇಶಕ್ಕೆ ಅನ್ಯಾಯ ಮಾಡಿದ್ದಾರೆ ಎಂದು ಸಮಿತಿ ಆರೋಪಿಸಿದೆ.
ಬೆಳಗಾವಿಯ ಸುವರ್ಣ ವಿಧಾನ ಸೌಧದಲ್ಲಿ ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯ ಹೋರಾಟ ಸಮಿತಿ ರ್ಯಾಲಿ ಆಯೋಜನೆ ಮಾಡಿದ್ದು, ಉತ್ತರ ಕರ್ನಾಟಕ ಪ್ರದೇಶದ ನಾಯಕರು ರ್ಯಾಲಿಯಲ್ಲಿ ಭಾಗಿಯಾಗಲಿದ್ದಾರೆ. ಜತೆಗೆ, ಸುವರ್ಣ ಸೌಧದ ಬಳಿ ಭಾಷಣ ಮಾಡಲಿದ್ದಾರೆ.
ಕಳೆದ 7 ದಶಕಗಳಿಂದ ಎಲ್ಲ ರಾಜಕೀಯ ಪಕ್ಷಗಳು ಉತ್ತರ ಕರ್ನಾಟಕವನ್ನು ನಿರ್ಲಕ್ಷ್ಯ ಮಾಡಿದ್ದು, ಮಲತಾಯಿ ಧೋರಣೆ ತೋರುತ್ತಿದೆ. ರಾಜ್ಯ ಸರಕಾರಗಳು ಈ ಪ್ರದೇಶವನ್ನು ಅಭಿವೃದ್ಧಿ ಮಾಡಿಲ್ಲ ಎಂದು ಕೊತ್ತಂಬರಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಬಂದ್bandhSeparate statehoodUttar Karnataka Horata SamithiAugust 2ಉತ್ತರ ಕರ್ನಾಟಕ ಹೋರಾಟ ಸಮಿತಿಆಗಸ್ಟ್-2ಪ್ರತ್ಯೇತ ರಾಜ್ಯ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


