ಉತ್ತರ ಕರ್ನಾಟಕವನ್ನು ನಾವು ಕಡೆಗಣಿಸಿಲ್ಲ, ಬಂದ್ ಕರೆ ಹಿಂಪಡೆಯಿರಿ: ಸಿಎಂ ಮನವಿ
ಉತ್ತರ ಕರ್ನಾಟಕ ಬಂದ್ ಗೆ ನೀಡಲಾಗಿರುವ ಕರೆಯನ್ನು ಟೀಕಿಸಿರುವ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ...

ಬೆಂಗಳೂರು: ಉತ್ತರ ಕರ್ನಾಟಕ ಬಂದ್ ಗೆ ನೀಡಲಾಗಿರುವ ಕರೆಯನ್ನು ಟೀಕಿಸಿರುವ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ, ಉತ್ತರ ಕರ್ನಾಟಕಕ್ಕೆ ಪ್ರತ್ಯೇಕ ರಾಜ್ಯ ರಚನೆ ಕುರಿತು ಮತ್ತು ಅಲ್ಲಿನ ಭಾಗಗಳ ಅಭಿವೃದ್ಧಿ ಕುರಿತು ಮುಕ್ತ ಚರ್ಚೆಗೆ ಬನ್ನಿ ಎಂದು ಅಲ್ಲಿನ ಮತದಾರರಿಗೆ ಸವಾಲು ಹಾಕಿದ್ದಾರೆ.
ಹುಬ್ಬಳ್ಳಿ ಮೂಲದ ಸಂಘಟನೆಯಾಗಿರುವ ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯ ಹೋರಾಟ ಸಮಿತಿ ಆಗಸ್ಟ್ 2ರಂದು ಉತ್ತರ ಕರ್ನಾಟಕ ಬಂದ್ ಗೆ ಕರೆ ನೀಡಿದೆ. ಮುಖ್ಯಮಂತ್ರಿ ಕುಮಾರಸ್ವಾಮಿಯವರು ಬಜೆಟ್ ನಲ್ಲಿ ಉತ್ತರ ಕರ್ನಾಟಕ ಭಾಗವನ್ನು ನಿರ್ಲಕ್ಷಿಸಿದ್ದಾರೆ ಮತ್ತು ಸಚಿವ ಸಂಪುಟದಲ್ಲಿ ಈ ಭಾಗದ ಜನಪ್ರತಿನಿಧಿಗಳಿಗೆ ಸೂಕ್ತ ಪ್ರಾತಿನಿಧ್ಯ ನೀಡಿಲ್ಲವೆಂದು ಅವರ ಆರೋಪವಾಗಿದೆ.
ಉತ್ತರ ಕರ್ನಾಟಕ ಭಾಗದ ಅಭಿವೃದ್ಧಿ ಕುರಿತು ನಾವು ಏನು ಮಾಡಿದ್ದೇವೆ ಎಂದು ಚರ್ಚೆ ನಡೆಸಲು ನಾನು ಸಿದ್ಧನಿದ್ದೇನೆ. ಮುಕ್ತ ಮಾತುಕತೆಗೆ ಅವರು ಬರಲಿ ಎಂದ ಮುಖ್ಯಮಂತ್ರಿಗಳು ಸಮಿತಿ ಸದಸ್ಯರು ಕರೆ ನೀಡಿರುವ ಬಂದ್ ನ್ನು ಹಿಂತೆಗೆದುಕೊಳ್ಳಬೇಕೆಂದು ಮನವಿ ಮಾಡಿದ್ದಾರೆ.
ಈ ಸಂದರ್ಭದಲ್ಲಿ ಹೇಳಿಕೆ ನೀಡಿರುವ ಉಪ ಮುಖ್ಯಮಂತ್ರಿ ಡಾ ಜಿ ಪರಮೇಶ್ವರ್, ಉತ್ತರ ಕರ್ನಾಟಕ ಭಾಗವನ್ನು ಸರ್ಕಾರ ಕಡೆಗಣಿಸಿಲ್ಲ. ರೈತರ ಸಾಲಮನ್ನಾದಿಂದ ಇಡೀ ಕರ್ನಾಟಕಕ್ಕೆ ಅನುಕೂಲವಾಗಲಿದೆ. ಉತ್ತರ ಕರ್ನಾಟಕದ ಎಲ್ಲಾ ಬೇಡಿಕೆಗಳನ್ನು ಆಲಿಸಿ ಈಡೇರಿಸಲು ಸರ್ಕಾರ ಬದ್ಧವಾಗಿರುವುದರಿಂದ ಕರೆ ನೀಡಲಾಗಿರುವ ಬಂದ್ ನ್ನು ಹಿಂತೆಗೆದುಕೊಳ್ಳುವಂತೆ ಮನವಿ ಮಾಡಿದರು.
ಆದರೆ ಸಮಿತಿ ಬಂದ್ ನ್ನು ನಡೆಸಲು ನಿರ್ಧರಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


