ಮುಂದಿನ ಸಂಪುಟ ವಿಸ್ತರಣೆಯಲ್ಲಿ ಉತ್ತರ ಕರ್ನಾಟಕಕ್ಕೆ ಸಿಂಹಪಾಲು!
ಉತ್ತರ ಕರ್ನಾಟಕವನ್ನು ಸರ್ಕಾರ ನಿರ್ಲಕ್ಷ್ಯಿಸಿದೆ ಹಾಗೂ ತಾರತಮ್ಯ ಧೋರಣೆ ಅನುಸರಿಸುತ್ತಿದೆ ಎಂದು ಆರೋಪಿಸಿ ಆಗಸ್ಟ್ 2ಕ್ಕೆ ಉತ್ತರ ಕರ್ನಾಟಕ ಹೋರಾಟ ...

Published On :
ಬೆಂಗಳೂರು: ಉತ್ತರ ಕರ್ನಾಟಕವನ್ನು ಸರ್ಕಾರ ನಿರ್ಲಕ್ಷ್ಯಿಸಿದೆ ಹಾಗೂ ತಾರತಮ್ಯ ಧೋರಣೆ ಅನುಸರಿಸುತ್ತಿದೆ ಎಂದು ಆರೋಪಿಸಿ ಆಗಸ್ಟ್ 2ಕ್ಕೆ ಉತ್ತರ ಕರ್ನಾಟಕ ಹೋರಾಟ ಸಮಿತಿ ಬಂದ್ ಗೆ ಕರೆ ನೀಡಿದೆ.
ಸರ್ಕಾರ ಉತ್ತರ ಕರ್ನಾಟಕವನ್ನು ನಿರ್ಲಕ್ಷ್ಯಿಸಿಲ್ಲ ಎಂದು ಸ್ಪಷ್ಟನೆ ನೀಡಿರುವ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಸಮ್ಮಿಶ್ರ ಸರ್ಕಾರ ದಕ್ಷಿಣ ಕರ್ನಾಟಕದ ಬಗ್ಗೆ ಹೆಚ್ಚಿನ ಒಲವು ತೋರುತ್ತಿದ್ದಾರೆ ಎಂಬ ಆರೋಪವನ್ನು ತಳ್ಳಿ ಹಾಕಿದ ದಿನೇಶ್ ಗುಂಡೂರಾವ್, ಮುಂದಿನ ಸಂಪುಟ ವಿಸ್ತರಣೆಯಲ್ಲಿ ಉತ್ತಕರ ಕರ್ನಾಟಕಕ್ಕೆ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದು ಹೇಳಿದ್ದಾರೆ, ಉತ್ತರ ಕರ್ನಾಟಕಕ್ಕೆ ಹೆಚ್ಚಿನ ಪ್ರಾತಿನಿಧ್ಯ ನೀಡಲಾಗುವುದು ಎಂದು ತಿಳಿಸಿದ್ದಾರೆ.
ಉತ್ತರ ಕರ್ನಾಟಕದ ಮೇಲೆ ನಾವು ನಿರ್ಲಕ್ಷ್ಯ ತೋರುತ್ತಿಲ್ಲ, ಸಂಪುಟ ವಿಸ್ತರಣೆಯಲ್ಲಿ ಉತ್ತಮ ಪ್ರಾತಿನಿಧ್ಯ ಸಿಗುತ್ತದೆ, ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾಗಿ ಇಡೀ ರಾಜ್ಯದ ಪ್ರತಿನಿಧಿಯಾಗಿದ್ದಾರೆ. ಹಾಗಾಗಿ ಮತ ಹಾಕುವುದಕ್ಕೂ ಆಡಳಿತ ನಡೆಸುವುದಕ್ಕೂ ಸಂಬಂಧವಿಲ್ಲ ಎಂದು ಗುಂಡೂರಾವ್ ಹೇಳಿದ್ದಾರೆ.
ಸಾಲ ಮನ್ನಾಕ್ಕೆ ಪ್ರತಿಭಟನೆ ಮಾಡುವ ಕೊಪ್ಪಳದ ರೈತರಿಗೆ ಮತ ಹಾಕುವಾಗ ನಮ್ಮ ನೆನಪು ಇರಲಿಲ್ಲವಾ? ಎಂದು ಇತ್ತೀಚೆಗೆ ರಾಮನಗರದಲ್ಲಿ ಎಚಡಿಕೆ ನೀಡಿದ ಹೇಳೀಕೆಗೆ ಪಕ್ಷದ ಕಚೇರಿಯಲ್ಲಿ ಗುರುವಾರ ನಡೆಸಿದ ಸುದ್ದಿಗೋಷ್ಠಿಯಲ್ಲಿ ಪ್ರತಿಕ್ರಿಯಿಸಿ,'ಉತ್ತರ ಕರ್ನಾಟಕದಲ್ಲಿ ಜೆಡಿಎಸ್ ಪಾತ್ರ ಜಾಸ್ತಿ ಇಲ್ಲದಿರಬಹುದು,'ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


