ರಾಜ್ಯ

ಸರ್ಕಾರಕ್ಕೆ ಹಗರಣಗಳು ಬಯಲಾಗುವ ಭಯ: ಮಾಧ್ಯಮಗಳಿಗೆ ನಿರ್ಬಂಧ ಕುರಿತು ಯಡಿಯೂರಪ್ಪ ಟೀಕೆ

ವಿಧಾನಸೌಧಕ್ಕೆ ಮಾಧ್ಯಮಗಳ ನಿರ್ಬಂಧ ಕುರಿತು ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಅವರ ಹೇಳಿಕೆ ವಿರುದ್ದ ವಿಧಾನಸಭೆ ವಿರೋಧ ಪಕ್ಷದ ನಾಯಕ ಬಿ. ಎಸ್. ಯಡಿಯೂರಪ್ಪ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸರ್ಕಾರಕ್ಕೆ ಹಗರಣಗಳು ಬಯಲಾಗುವ ಭಯ: ಮಾಧ್ಯಮಗಳಿಗೆ ನಿರ್ಬಂಧ ಕುರಿತು ಯಡಿಯೂರಪ್ಪ ಟೀಕೆ
ಬಿ.ಎಸ್. ಯಡಿಯೂರಪ್ಪ, ಅರವಿಂದ ಲಿಂಬಾವಳಿ
Published On :

ಬೆಂಗಳೂರು: ವಿಧಾನಸೌಧಕ್ಕೆ ಮಾಧ್ಯಮಗಳ ನಿರ್ಬಂಧ ಕುರಿತು ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಅವರ ಹೇಳಿಕೆ ವಿರುದ್ದ ವಿಧಾನಸಭೆ ವಿರೋಧ ಪಕ್ಷದ ನಾಯಕ ಬಿ. ಎಸ್. ಯಡಿಯೂರಪ್ಪ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸರ್ಕಾರಕ್ಕೆ ಹಗರಣಗಳು ಬಯಲಾಗುತ್ತವೆ ಎಂಬ ಭಯದಿಂದ ಕುಮಾರಸ್ವಾಮಿ ಈ ರೀತಿಯ ನಿರ್ಧಾರ ಕೈಗೊಳ್ಳಲು ಮುಂದಾಗುತ್ತಿದ್ದಾರೆ. ಮುಖ್ಯಮಂತ್ರಿ ಸರ್ವಾಧಿಕಾರಿಯ ಧೋರಣೆ ಅನುಸರಿಸುತ್ತಿದ್ದಾರೆ ಎಂದು ಯಡಿಯೂರಪ್ಪ ಆರೋಪಿಸಿದ್ದಾರೆ.

 ಬೆಂಗಳೂರಿನಲ್ಲಿಂದು ನಡೆದ ಬಿಜೆಪಿ ಕೋರ್ ಕಮಿಟಿ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರತ್ಯೇಕ ರಾಜ್ಯ ಸಂಬಂಧ ವಿವಾದ ಸೃಷ್ಟಿಸುವುದು ಬೇಡ ಯಾರೂ ಪ್ರತ್ಯೇಕ ರಾಜ್ಯದ ಬಗ್ಗೆ ಪ್ರಸ್ತಾಪಿಸಬಾರದು, ರಾಜ್ಯ ಅಖಂಡ ಕರ್ನಾಟಕವೇ ಆಗಿರಬೇಕು ಎಂದು ಸಭೆಯಲ್ಲಿ ನಿರ್ಧರಿಸಲಾಯಿತು ಎಂದು ಹೇಳಿದರು.
ರಾಜ್ಯ ಅಭಿವೃದ್ದಿಯೇ ನಮ್ಮ ಗುರಿಯಾಗಿದೆ. ಈ ನಿಟ್ಟಿನಲ್ಲಿ ವಿಕಾಸಸೌಧ ಸ್ಥಾಪನೆ ಸೇರಿದಂತೆ ಹಲವು ಅಭಿವೃದ್ದಿ ಕಾರ್ಯಗಳನ್ನು ಮಾಡಲಾಗಿದೆ. ಆದರೆ, ಅಧಿಕಾರದ ಸಲುವಾಗಿ  ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಹಾಗೂ ಅವರ ಕುಟುಂಬ ರಾಜ್ಯವನ್ನು ಹಾಳು ಮಾಡಲು ಪ್ರಯತ್ನಿಸುತ್ತಿದ್ದಾರೆ ಎಂದು ಯಡಿಯೂರಪ್ಪ ಆರೋಪಿಸಿದರು.
ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯ ಅಭಿವೃದ್ದಿಗೆ ಪರಿಹಾರವಲ್ಲಾ , ಅಭಿವೃದ್ದಿಗಾಗಿ ಎಲ್ಲರೂ ಒಟ್ಟಾಗಿ ಕಾರ್ಯನಿರ್ವಹಿಸುವವು. ಆ ಭಾಗದ ಜನತೆ ಪ್ರತ್ಯೇಕ ರಾಜ್ಯದ ಪರ ಧ್ವನಿ ಎತ್ತದಂತೆ ಯಡಿಯೂರಪ್ಪ ಮನವಿ ಮಾಡಿಕೊಂಡರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.