ರಾಜ್ಯ

ಬೆಳಗಾವಿ: ಸವದತ್ತಿ ಕಾಂಗ್ರೆಸ್ ಬಂಡಾಯ ಅಭ್ಯರ್ಥಿ ಆನಂದ್ ಚೋಪ್ರಾ ಕೊಲೆಗೆ ಯತ್ನ

ಬೆಳಗಾವಿ ಜಿಲ್ಲೆ ಸವದತ್ತಿ ಕ್ಷೇತ್ರದ ಕಾಂಗ್ರೆಸ್ ಬಂಡಾಯ ಅಭ್ಯರ್ಥಿಯಾಗಿದ್ದ ಆನಂದ್ ಚೋಪ್ರಾ ಹತ್ಯೆಗೆಯತ್ನಿಸಿರುವ ಘಟನೆ ಶನಿವಾರ ರಾತ್ರಿ ನಡೆದಿದೆ.

ಬೆಳಗಾವಿ: ಸವದತ್ತಿ ಕಾಂಗ್ರೆಸ್ ಬಂಡಾಯ ಅಭ್ಯರ್ಥಿ ಆನಂದ್ ಚೋಪ್ರಾ ಕೊಲೆಗೆ ಯತ್ನ
ಆನಂದ್ ಚೋಪ್ರಾ
Published On :
ಬೆಳಗಾವಿ: ಬೆಳಗಾವಿ ಜಿಲ್ಲೆ ಸವದತ್ತಿ ಕ್ಷೇತ್ರದ ಕಾಂಗ್ರೆಸ್ ಬಂಡಾಯ ಅಭ್ಯರ್ಥಿಯಾಗಿದ್ದ ಆನಂದ್ ಚೋಪ್ರಾ ಕೊಲೆಗೆ ಯತ್ನಿಸಿರುವ ಘಟನೆ ಶನಿವಾರ ರಾತ್ರಿ ನಡೆದಿದೆ.
ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯ ಎದುರು ಪರಾಜಿತಗೊಂಡಿದ್ದ ಆನಂದ್ ಚೋಪ್ರಾ ಶನಿವಾರ ರಾತ್ರಿ ತಮ್ಮ ದ್ವಿಚಕ್ರ ವಾಹನದಲ್ಲಿ ಮನೆಗೆ ತೆರಳುವಾಗ ಮಾರ್ಗ ಮಧ್ಯೆ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ್ದಾರೆ.
ಅನಿರೀಕ್ಷಿತವಾಗಿ ನಡೆದ ಹಲ್ಲೆಯಿಂದ ಆನಂದ್ ಚೋಪ್ರಾ ಅವರ ಕುತ್ತಿಗೆಗೆ ಹಾಗೂ ತಲೆಗೆ ಗಂಭೀರ ಗಾಯವಾಗಿದ್ದು, ಹುಬ್ಬಳ್ಳಿಯ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.
ಕಳೆದ ವಿಧಾನಸಭೆ ಚಿನಾವಣೆಯಲ್ಲಿ ಬಿಜೆಪಿಯ ಆನಂದ್​ ಮಾಮನಿ ವಿರುದ್ಧ ಆನಂದ್​ ಚೋಪ್ರಾ ಕೇವಲ 5 ಸಾವಿರ ಮತಗಳಿಂದ ಸೋತಿದ್ದರು 
ಇದೀಗ ನಡೆದಿರುವ ಕೊಲೆ ಯತ್ನಕ್ಕೆ ರಾಜಕೀಯ ವೈಶಮ್ಯವು ಕಾರಣವೇ ಅಥವಾ ಬೇರೇನಾದರೂ ವೈಯುಕ್ತಿಕ ಕಾರಣವಿದೆಯೆ ಎನ್ನುವುದು ಪೋಲೀಸ್ ತನಿಖೆ ಬಳಿಕವೇ ತಿಳಿಯಬೇಕಿದೆ.
ಸಧ್ಯ ಸ್ಥಳಕ್ಕೆ ಭೇಟಿ ನೀಡಿದ ಎಸ್‍ಪಿ ಸುಧೀರ್ ಕುಮಾರ್ ರೆಡ್ಡಿ ಪರಿಶೀಲನೆ ನಡೆಸಿದ್ದು ತನಿಖೆ ಕೈಗೊಂಡಿದ್ದಾರೆ. ಸವದತ್ತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.