ರಾಜ್ಯ

ಬೆಂಗಳೂರು: ರಸ್ತೆ ವಿಭಜಕಕ್ಕೆ ಬೈಕ್ ಡಿಕ್ಕಿ, ಜಾಲಿ ರೈಡ್ ಗೆ ತೆರಳಿದ್ದ ಯುವಕ ಸಾವು

ನಂದಿಬೆಟ್ಟಕ್ಕೆ ಜಾಲಿ ರೈಡ್ ಹೊರಟಿದ್ದ ಬೈಕ್ ಸವಾರನೊಬ್ಬ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ಒಬ್ಬ ಸ್ಥಳದಲ್ಲೇ ಸಾವನ್ನಪ್ಪಿದರೆ ಇನ್ನೊಬ್ಬ ಮಾರಣಾಂತಿಕವಾಗಿ ಗಾಯಗೊಂಡಿರುವ ಘಟನೆ....

ಬೆಂಗಳೂರು: ರಸ್ತೆ ವಿಭಜಕಕ್ಕೆ ಬೈಕ್ ಡಿಕ್ಕಿ, ಜಾಲಿ ರೈಡ್ ಗೆ ತೆರಳಿದ್ದ ಯುವಕ ಸಾವು
ಬೆಂಗಳೂರು: ರಸ್ತೆ ವಿಭಜಕಕ್ಕೆ ಬೈಕ್ ಡಿಕ್ಕಿ, ಜಾಲಿ ರೈಡ್ ಗೆ ತೆರಳಿದ್ದ ಯುವಕ ಸಾವು
Published On :
ಬೆಂಗಳೂರು: ನಂದಿಬೆಟ್ಟಕ್ಕೆ ಜಾಲಿ ರೈಡ್ ಹೊರಟಿದ್ದ ಬೈಕ್ ಸವಾರನೊಬ್ಬ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ಒಬ್ಬ ಸ್ಥಳದಲ್ಲೇ ಸಾವನ್ನಪ್ಪಿದರೆ ಇನ್ನೊಬ್ಬ ಮಾರಣಾಂತಿಕವಾಗಿ ಗಾಯಗೊಂಡಿರುವ ಘಟನೆ ಬೆಂಗಳೂರು ಹೆಬ್ಬಾಳ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಭಾನುವಾರ ಬೆಳಿಗ್ಗೆ ನಡೆದ ಘಟನೆಯಲ್ಲಿ ಕೇರಳ ಮೂಲದ ಇರ್ಷಾದ್ ಮೃತಪಟ್ಟಿದ್ದಾನೆ. 100ಕ್ಕೂ ಅಧಿಕ ಯುವಕರ ತಂಡ ಇಂದು ನಂದಿ ಬೆಟ್ಟಕ್ಕೆ ಜಾಲಿ ರೈಡ್ ಹೊರಟಿತ್ತು. ಅವರೊಡನೆ ಇರ್ಷಾದ್ ಸಹ ತನ್ನ ದುಬಾರಿ ಬೈಕ್  ನಲ್ಲಿ ತೆರಳುತ್ತಿದ್ದ. ಆದರೆ ಬೈಕ್‌ ಏರ್‌ಪೋರ್ಟ್‌ ರಸ್ತೆಯ ಕೊಡಿಗೆ ಹಳ್ಳಿ ಬಳಿ ಫ್ಲೈ ಓವರ್‌ ಬಂದಾಗ ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದಿದೆ. 
ಡಿಕ್ಕಿಯ ರಭಸಕ್ಕೆ ಇರ್ಷಾದ್ ರಸ್ತೆ ಮೇಲೆ ಉರುಳಿದ್ದಾನೆ. ತಲೆಗೆ ತೀವ್ರ ಸ್ವರೂಪದ ಗಾಯವಾಗಿದ್ದ ಅವನನ್ನು ತಕ್ಷಣ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತಾದರೂ ಬದುಕುಳಿಯಲಿಲ್ಲ. ಬೈಕ್ ನಲ್ಲಿದ್ದ ಸಹ ಸ್ನೇಹಿತನ ಸ್ಥಿತಿ ಚಿಂತಾಜನಕವಾಗಿದೆ.
ಮೃತ ಇರ್ಷಾದ್ ವೈದ್ಯಕೀಯ ಕೋರ್ಸ್ ಮುಗಿಸಿದ್ದ ಎನ್ನಲಾಗಿದೆ.
ಘಟನೆ ಸಂಬಂಧ ಹೆಬ್ಬಾಳ ಸಂಚಾರ ಪೊಲೀಸ್ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ, ತನಿಖೆ ಕೈಗೊಂಡಿದ್ದಾರೆ

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.