ಅಕ್ರಮ ಮತದಾನ : ಜೆಡಿಎಸ್ ಶಾಸಕ ಹೆಚ್. ಕೆ. ಕುಮಾರಸ್ವಾಮಿಗೆ ಹೈಕೋರ್ಟ್ ನೋಟಿಸ್
ವಿಧಾನಸಭಾ ಚುನಾವಣೆಯಲ್ಲಿ ಅಕ್ರಮ ಮತದಾನ ಆರೋಪಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ಹೈಕೋರ್ಟ್ ಸಕಲಶಪುರ ಜೆಡಿಎಸ್ ಶಾಸಕ ಹೆಚ್. ಕೆ. ಕುಮಾರಸ್ವಾಮಿಗೆ ನೋಟಿಸ್ ಜಾರಿಗೊಳಿಸಿದೆ.

ಬೆಂಗಳೂರು : ವಿಧಾನಸಭಾ ಚುನಾವಣೆಯಲ್ಲಿ ಅಕ್ರಮ ಮತದಾನ ಆರೋಪಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ಹೈಕೋರ್ಟ್ ಸಕಲಶಪುರ ಜೆಡಿಎಸ್ ಶಾಸಕ ಹೆಚ್. ಕೆ. ಕುಮಾರಸ್ವಾಮಿಗೆ ನೋಟಿಸ್ ಜಾರಿಗೊಳಿಸಿದೆ.
ಅಕ್ರಮ ಮತದಾನದಿಂದ ಹೆಚ್. ಕೆ. ಕುಮಾರಸ್ವಾಮಿ ಗೆದ್ದಿದ್ದಾರೆ ಎಂದು ಆರೋಪಿಸಿ ಅವರ ವಿರುದ್ಧ ಸ್ಪರ್ಧಿಸಿದ್ದ ಪರಾಜಿತ ಬಿಜೆಪಿ ಅಭ್ಯರ್ಥಿ ಸೋಮಶೇಖರ್ ಜಯರಾಜ್ ಅವರ ಬೆಂಬಲಿಗರು ಹೈಕೋರ್ಟ್ ನಲ್ಲಿ ದೂರು ಸಲ್ಲಿಸಿದ್ದಾರೆ.
ಈ ದೂರಿನ ವಿಚಾರಣೆ ನಡೆಸಿದ ನ್ಯಾಯಾಧೀಶೆ ಎಸ್. ಸುಜಾತ, ಆಗಸ್ಟ್ 31 ರಂದು ನಡೆಯಲಿರುವ ವಿಚಾರಣೆ ವೇಳೆಯಲ್ಲಿ ಹಾಜರಾಗುವಂತೆ ಹೆಚ್. ಕೆ. ಕುಮಾರಸ್ವಾಮಿ ಅವರಿಗೆ ನೋಟಿಸ್ ಜಾರಿ ಮಾಡಿದ್ದಾರೆ.
ಮತ ಎಣಿಕೆ ಪ್ರಕ್ರಿಯೆಯಲ್ಲಿ ಅಕ್ರಮವಾಗಿದ್ದರಿಂದ ಹೆಚ್ .ಕೆ. ಕುಮಾರಸ್ವಾಮಿ ಗೆಲುವು ಸಾಧಿಸಿದ್ದಾರೆ ಎಂದು ಸೋಮಶೇಖರ್ ಜಯರಾಜ್ ಅವರ ಬೆಂಬಲಿಗ ಎ ವಿ ನರೇಶ್ ದೂರಿನಲ್ಲಿ ಆರೋಪಿಸಿದ್ದು , ಎಲ್ಲಾ 283 ಮತಗಟ್ಟೆಗಳಲ್ಲೂ ಮರುಎಣಿಕೆಗೆ ನಿರ್ದೇಶಿಸಬೇಕು ಹಾಗೂ ಕುಮಾರಸ್ವಾಮಿ ಅವರ ಸದಸ್ಯತ್ವವನ್ನು ರದ್ದುಪಡಿಸಬೇಕೆಂದು ಅವರು ನ್ಯಾಯಾಲಯದಲ್ಲಿ ಮನವಿ ಮಾಡಿಕೊಂಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


