ಸಚಿವಾಲಯದ ಸಿಬ್ಬಂದಿಗಳ ಆರ್ಥಿಕ ಅಧಿಕಾರ ಮೊಟಕುಗೊಳಿಸಿದ ಸ್ಪೀಕರ್!
ವಿಧಾನಸಭೆ ಸಚಿವಾಲಯದ ಅಧಿಕಾರಿಗಳ ಹಣಕಾಸಿನ ಅಧಿಕಾರವನ್ನು ಸ್ಪೀಕರ್ ರಮೇಶ್ ಕುಮಾರ್ ಮೊಟಕುಗೊಳಿಸಿದ್ದಾರೆ. ಶಾಸಕರ ಭವನದಲ್ಲಿ ವಿವಿಧ ...

Published On :
ಬೆಂಗಳೂರು: ವಿಧಾನಸಭೆ ಸಚಿವಾಲಯದ ಅಧಿಕಾರಿಗಳ ಹಣಕಾಸಿನ ಅಧಿಕಾರವನ್ನು ಸ್ಪೀಕರ್ ರಮೇಶ್ ಕುಮಾರ್ ಮೊಟಕುಗೊಳಿಸಿದ್ದಾರೆ. ಶಾಸಕರ ಭವನದಲ್ಲಿ ವಿವಿಧ ವಸ್ತುಗಳ ಖರೀದಿಯಲ್ಲಿ ಹಣ ದುರುಪಯೋಗವಾಗಿದೆ ಎಂಬ ಆರೋಪಗಳು ಕೇಳಿ ಬಂದ ಹಿನ್ನೆಲೆಯಲ್ಲಿ ಸ್ಪೀಕರ್ ಈ ನಿರ್ಧಾರ ಕೈಗೊಂಡಿದ್ದಾರೆ.
ಶಾಸಕರ ಭವನ ಮತ್ತು ವಿಧಾನಸಭೆ ಸಚಿವಾಲಯಗಳ ಸಂಬಂಧಿತ ಯಾವುದೇ ಖರೀದಿಗೆ ಮೊದಲು ಸ್ಪೀಕರ್ ಅನುಮೋದನೆ ಪಡೆಯುವುದು ಕಡ್ಡಾಯವಾಗಿದೆ.
ಈ ಮೊದಲು ಹಿಂದಿನ ಸ್ಪೀಕರ್ ಕೆ.ಬಿ ಕೋಳಿವಾಡ ಅವರ ಆದೇಶವನ್ನ ರಮೇಶ್ ಕುಮಾರ್ ಮೊಟಕುಗೊಳಿಸಿದ್ದಾರೆ. ವಿವಿಧ ಹಂತದಲ್ಲಿ ಹಣಕಾಸಿನ ಅಧಿಕಾರ ನೀಡಿದ್ದಾರೆ.
ಹಣ ಮತ್ತು ಅಧಿಕಾರದ ದುರುಪಯೋಗ ಕೇಳಿಬಂದ ಹಿನ್ನೆಲೆಯಲ್ಲಿ ರಮೇಶ್ ಕುಮಾರ್ ಈ ನಿರ್ಧಾರ ಕೈಗೊಂಡಿದ್ದಾರೆ ಎನ್ನಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಮೊಟಕುRamesh Kumarರಮೇಶ್ ಕುಮಾರ್financial powersAssembly Secretariat. scrapsಹಣಕಾಸಿನ ಅಧಿಕಾರವಿಧಾನಸಭೆ ಸಚಿವಾಲಯ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


