ನಾವು ಸಾಯಬೇಕೆ ಇಲ್ಲ ಬದುಕಬೇಕೆ?; ಸಿಎಂ ಕುಮಾರಸ್ವಾಮಿಗೆ ನೊಂದ ರೈತನ ಪ್ರಶ್ನೆ
ಸಾಲ ಮರುಪಾವತಿಸುವಂತೆ ಸಹಕಾರಿ ಬ್ಯಾಂಕ್‍ನಿಂದ ಬಂದ ನೊಟೀಸ್ ನಿಂದ ನೊಂದ ರೈತ ಸಾಮಾಜಿಕ ...

ಮಂಡ್ಯ: ಸಾಲ ಮರುಪಾವತಿಸುವಂತೆ ಸಹಕಾರಿ ಬ್ಯಾಂಕ್‍ನಿಂದ ಬಂದ ನೊಟೀಸ್ ನಿಂದ ನೊಂದ ರೈತ ಸಾಮಾಜಿಕ ಜಾಲತಾಣದಲ್ಲಿ ಮುಖ್ಯಮಂತ್ರಿ ಕುಮಾರಸ್ವಾಮಿ ವಿರುದ್ಧ ಆಕ್ರೋಶ ಹೊರಹಾಕಿರುವ ಘಟನೆ ನಡೆದಿದೆ. ತಮ್ಮ ಸಮಸ್ಯೆಗಳನ್ನು ಸಾಮಾಜಿಕ ಮಾಧ್ಯಮ ಮೂಲಕ ಹೊರಹಾಕುವವರ ಸಂಖ್ಯೆ ಇತ್ತೀಚೆಗೆ ಹೆಚ್ಚಾಗುತ್ತಿದೆ.
ಮಂಡ್ಯ ಜಿಲ್ಲೆಯ ಕೆಆರ್ ಪೇಟೆ ತಾಲೂಕಿನ ಹಕ್ಕಿಮಂಚನಹಳ್ಳಿ ಗ್ರಾಮದ ರೈತ ಹೊನ್ನೇಗೌಡ ಶೀಳನೆರೆ ಸಾಮಾಜಿಕ ಮಾಧ್ಯಮ ಮೂಲಕ ಆಕ್ರೋಶ ಹೊರಹಾಕಿದ ರೈತ. ಗ್ರಾಮದಲ್ಲಿರುವ ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘದಲ್ಲಿ ಕಳೆದ ವರ್ಷ ಆಗಸ್ಟ್ 9ರಂದು 60 ಸಾವಿರ ಬೆಳೆ ಸಾಲ ಪಡೆದಿದ್ದರು. ಇದೀಗ ರೈತ ಪಡೆದ ಸಾಲಕ್ಕೆ ನೋಟಿಸ್ ನೀಡಲಾಗಿದ್ದು, ಇದೇ ಆಗಸ್ಟ್ 9ರೊಳಗೆ ಸಾಲ ಮರುಪಾವತಿಸಿ ಮುಂದೆ ಸಾಲ ಪಡೆಯಲು ಅರ್ಹತೆ ಪಡೆಯಿರಿ. ತಪ್ಪಿದರೆ ನಿಯಮದ ಪ್ರಕಾರ ಕ್ರಮ ಕೈಗೊಳ್ಳುವುದಾಗಿ ನೋಟಿಸ್‍ನಲ್ಲಿ ಸೂಚಿಸಲಾಗಿದೆ.
ರಾಜ್ಯ ಸರ್ಕಾರ ರೈತರ ಸಾಲಮನ್ನಾ ಮಾಡುತ್ತದೆ ಎಂದು ಮೀನಮೇಷ ಎಣಿಸುತ್ತಲೇ ಇದೆ. ಮುಖ್ಯಮಂತ್ರಿ ಕುಮಾರಸ್ವಾಮಿಯವರು 2018 ಜುಲೈ 10ರವರೆಗೆ ರೈತರ ಸಾಲಮನ್ನಾ ಎಂದಿದ್ದಾರೆ. ಆದರೆ ಸಾಲ ಕಟ್ಟಿ, ಇಲ್ಲದಿದರೆ ಕಾನೂನಿನ ರೀತಿ ಕ್ರಮ ಕೈಗೊಳ್ಳುತ್ತೇನೆ ಎಂದು ನೋಟಿಸ್ ನೀಡಿದ್ದಾರೆ. ಈ ಸಂಕಷ್ಟದಲ್ಲಿ ರೈತ ಸಾಯಬೇಕ? ಬದುಕಬೇಕ? ರೈತನ ಬದುಕು ಅತಂತ್ರ ಮಾಡಿರುವ ಕುಮಾರಸ್ವಾಮಿಯವರೇ ಇದರ ಬಗ್ಗೆ ಯೋಚಿಸಬೇಕು ಎಂದು ಸಾಮಾಜಿಕ ಮಾಧ್ಯಮದಲ್ಲಿ ತಮ್ಮ ನೋವು, ಆಕ್ರೋಶಗಳನ್ನು ಹೊರಹಾಕಿದ್ದಾರೆ.

Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


