ರಾಜ್ಯ

ಗೌರಿ ಲಂಕೇಶ್ ಹತ್ಯೆ ಪ್ರಕರಣ: ಬಂಧಿತ 4 ಆರೋಪಿಗಳು ಎಸ್ಐಟಿ ವಶಕ್ಕೆ

ಇತ್ತೀಚೆಗೆ ಪ್ರಗತಿಪರ ಚಿಂತಕ ಪ್ರೊ.ಕೆ.ಎಸ್.ಭಗವಾನ್ ಹತ್ಯೆ ಯತ್ನದ ಸಂಚಿನಲ್ಲಿ ಬಂಧನಕ್ಕೊಳಗಾಗಿರುವ ನಾಲ್ವರು ಆರೋಪಿಗಳು, ಹಿರಿಯ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದಲ್ಲಿ ಪಾತ್ರವಹಿಸಿರುವ ಶಂಕೆಗಳು...

ಗೌರಿ ಲಂಕೇಶ್ ಹತ್ಯೆ ಪ್ರಕರಣ: ಬಂಧಿತ 4 ಆರೋಪಿಗಳು ಎಸ್ಐಟಿ ವಶಕ್ಕೆ
ಗೌರಿ ಲಂಕೇಶ್
Published On :
ಬೆಂಗಳೂರು; ಇತ್ತೀಚೆಗೆ ಪ್ರಗತಿಪರ ಚಿಂತಕ ಪ್ರೊ.ಕೆ.ಎಸ್.ಭಗವಾನ್ ಹತ್ಯೆ ಯತ್ನದ ಸಂಚಿನಲ್ಲಿ ಬಂಧನಕ್ಕೊಳಗಾಗಿರುವ ನಾಲ್ವರು ಆರೋಪಿಗಳು, ಹಿರಿಯ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದಲ್ಲಿ ಪಾತ್ರವಹಿಸಿರುವ ಶಂಕೆಗಳು ವ್ಯಕ್ತವಾಗಿದ್ದು, ಈ ಹಿನ್ನಲೆಯಲ್ಲಿ ಪ್ರಕರಣದ ವಿಚಾರಣೆಗಾಗಿ 10 ದಿನಗಳ ಕಾಲ ಎಸ್ಐಟಿ ವಶಕ್ಕೆ ನೀಡಲಾಗಿದೆ. 
ಬಂಧನಕ್ಕೊಳಗಾಗಿರುವ ನಾಲ್ವರು ಆರೋಪಿಗಳು ಪತ್ರಕರ್ತೆ ಗೌರಿ ಹತ್ಯೆ ಕೃತ್ಯದಲ್ಲಿ ಕೂಡ ಪಾತ್ರವಹಿಸಿರುವುದನ್ನು ನ್ಯಾಯಾಲಯದಲ್ಲಿ ಎಸ್ಐಟಿ ಅಧಿಕೃತಗೊಳಿಸಿತ್ತು. 
ಭಗವಾನ್ ಅವರ ಕೊಲೆ ಸಂಚು ಆರೋಪದಡಿ ಶಿಕಾಪುರಿದ ಕಪ್ಪನಹಳ್ಳಿ ಗ್ರಾಮದ ಸುಜಿತ್ ಕುಮಾರ್ ಅಲಿಯಾಸ್ ಪ್ರವೀಣ್, ಮಹಾರಾಷ್ಟ್ರದ ಅಮೋಲ್ ಕಾಳೆ ಅಲಿಯಾಸ್ ಬಾಯ್ ಸಾಬ್, ಅಮಿತ್ ದೆಗ್ವೇಕರ್ ಅಲಿಯಾಸ್  ಪ್ರದೀಪ್ ಹಾಗೂ ವಿಜಯಪುರ ಜಿಲ್ಲೆ ರತ್ನಾಪುರ ಗ್ರಾಮದ ಮನೋಹರ್ ದುಂಡಪ್ಪ ಯಡವೆ ಅಲಿಯಾಸ್ ಮನೋಜ್ ಅವರನ್ನು ಉಪ್ಪಾರಪೇಟೆ ಪೊಲೀಸರು ಬಂಧನಕ್ಕೊಳಪಡಿಸಿದ್ದರು. 
ಇದಕ್ಕೂ ಮುನ್ನ ಮದ್ದೂರು ತಾಲೂಕಿನ ಹಿಂದೂ ಪರ ಸಂಘಟನೆ ಕಾರ್ಯಕರ್ತ ಕೆ.ಟಿ.ನವೀನ್ ಕುಮಾರ್ ಬಂಧನವಾಗಿತ್ತು. 
ನಗರದ 1ನೇ ಎಸಿಎಂಎಂ ನ್ಯಾಯಾಲಯದ ಅನುಮತಿ ಪಡೆದು ಭಗವಾನ್ ಸಂಚು ಪ್ರಕರಣದ ಆರೋಪಗಳನ್ನು 11 ದನಗಳ ಕಾಲ ವಶಕ್ಕೆ ಪಡೆದ ಎಸ್ಐಟಿ, ಈ ನಾಲ್ವರನ್ನು ಗೌರಿ ಹತ್ಯೆ ಪ್ರಕರಣದಲ್ಲೂ ಸಹ ಆರೋಪಿಗಳಾಗಿದ್ದಾರೆಂದು ಘೋಷಣೆ ಮಾಡಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.