ರಾಜ್ಯ

ಜೂ.4 ಅಥವಾ 5ಕ್ಕೆ ಸಂಪುಟ ವಿಸ್ತರಣೆ ಸಾಧ್ಯತೆ: ಸಿಎಂ ಕುಮಾರಸ್ವಾಮಿ

ಜೂನ್.4 ಅಥವಾ 5 ರಂದು ರಾಜ್ಯ ಸಂಪುಟ ವಿಸ್ತರಣೆಯಾಗುವ ಸಾಧ್ಯತೆಗಳಿವೆ ಎಂದು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರು ಶುಕ್ರವಾಹ ಹೇಳಿದ್ದಾರೆ...

ಜೂ.4 ಅಥವಾ 5ಕ್ಕೆ ಸಂಪುಟ ವಿಸ್ತರಣೆ ಸಾಧ್ಯತೆ: ಸಿಎಂ ಕುಮಾರಸ್ವಾಮಿ
ರಾಜ್ಯಪಾಲ ವಜುಭಾಯ್ ವಾಲಾ ಅವರೊಂದಿಗೆ ಮಾತುಕತೆ ನಡೆಸುತ್ತಿರುವ ಮುಖ್ಯಮಂತ್ರಿ ಕುಮಾರಸ್ವಾಮಿ ಹಾಗೂ ಉಪ ಮುಖ್ಯಮಂತ್ರಿ ಪರಮೇಶ್ವರ್
Published On :
ಬೆಂಗಳೂರು: ಜೂನ್.4 ಅಥವಾ 5 ರಂದು ರಾಜ್ಯ ಸಂಪುಟ ವಿಸ್ತರಣೆಯಾಗುವ ಸಾಧ್ಯತೆಗಳಿವೆ ಎಂದು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರು ಶುಕ್ರವಾಹ ಹೇಳಿದ್ದಾರೆ. 
ಉಪ ಮುಖ್ಯಮಂತ್ರಿ ಪರಮೇಶ್ವರ್ ಜೊತೆಗೆ ನಿನ್ನೆಯಷ್ಟೇ ರಾಜ್ಯಪಾಲ ವಜುಭಾಯ್ ವಾಲಾ ಅವರನ್ನು ರಾಜಭವನದಲ್ಲಿ ಭೇಟಿ ಮಾಡಿದ ಸಿಎಂ ಕುಮಾರಸ್ವಾಮಿಯವರು, ನೂತನ ಸಚಿವರ ಪದಗ್ರಹಣ ದಿನಾಂಕ ಕುರಿತಂತೆ ಚರ್ಚೆ ನಡೆಸಿದರು. 
ಬಳಿಕ ಮಾತನಾಡಿದ ಅವರು, ಭಾನುವಾರವೇ ಸಂಪುಟ ವಿಸ್ತರಣೆ ಮಾಡಲು ಚಿಂತನೆ ನಡೆಸಲಾಗಿತ್ತು. ಆದರೆ, ರಾಜ್ಯಪಾಲರಿಗೆ ಪೂರ್ವನಿಗದಿತ ಕಾರ್ಯಕ್ರಮಗಳಿದ್ದು, ದೆಹಲಿಗೆ ತೆರಳಬೇಕಿದೆ. ಪದಗ್ರಹಣ ದಿನಾಕ ಕುರಿತಂತೆ ರಾಜ್ಯಪಾಲರ ಬಳಿ ಮನವಿ ಮಾಡಿಕೊಳ್ಳಲಾಗುತ್ತದೆ ಎಂದು ಹೇಳಿದ್ದಾರೆ. 
ಜೂನ್.4 ಅಥವಾ 5 ರಂದು ಸಂಪುಟ ವಿಸ್ತರಣೆ ಕುರಿತು ರಾಜ್ಯಪಾಲರ ಬಳಿ ಚರ್ಚೆ ನಡೆಸಾಲಗುತ್ತಿದೆ. ಜೂನ್.5 ರ ಬೆಳಿಗ್ಗೆ ರಾಜ್ಯಪಾಲರು ನಗರಕ್ಕೆ ಆಗಮಿಸಲಿದ್ದಾರೆ. ಸಂಪುಟ ವಿಸ್ತರಣೆ ದಿನಾಂಕ ಈಗಲೂ ನಿಗದಿಯಾಗಿಲ್ಲ. ದಿನಾಂಕ ಕುರಿತಂತ ರಾಜ್ಯಪಾಲರ ಜೊತೆಗೆ ಮಾತುಕತೆ ನಡೆಸಿ, ಅಂತಿನ ನಿರ್ಧಾರಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.