ಬೆಂಗಳೂರು: ಅಪಘಾತದಲ್ಲಿ ಹೆಡ್ ಕಾನ್ಸ್ ಟೇಬಲ್ ಸಾವು
ವೇಗವಾಗಿ ಬಂದ ಬಸ್ ವೊಂದು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮವಾಗಿ ಬೈಕ್ ಚಲಾಯಿಸುತ್ತಿದ್ದ ವೈಯಾಲಿಕಾವಲ್ ಪೊಲೀಸ್ ಠಾಣೆ ಹೆಡ್ ಕಾನ್ಸ್ ಟೇಬಲ್ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ನಿನ್ನೆ ಸಂಜೆ ಹೆಬ್ಬಾಳ ಮೇಲ್ಸುತುವೆ ಬಳಿ ನಡೆದಿದೆ.

ಬೆಂಗಳೂರು: ವೇಗವಾಗಿ ಬಂದ ಬಸ್ ವೊಂದು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮವಾಗಿ ಬೈಕ್ ಚಲಾಯಿಸುತ್ತಿದ್ದ ವೈಯಾಲಿಕಾವಲ್ ಪೊಲೀಸ್ ಠಾಣೆ ಹೆಡ್ ಕಾನ್ಸ್ ಟೇಬಲ್ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ನಿನ್ನೆ ಸಂಜೆ ಹೆಬ್ಬಾಳ ಮೇಲ್ಸುತುವೆ ಬಳಿ ನಡೆದಿದೆ.
ವಡ್ಡರಹಳ್ಳಿ ನಿವಾಸಿ ದಯಾನಂದ್ ವಿ. ಆರ್. ಮೃತಪಟ್ಟ ಹೆಡ್ ಕಾನ್ಸ್ ಟೇಬಲ್. ಕೆಲಸ ಮುಗಿಸಿಕೊಂಡು ದಯಾನಂದ್ ತನ್ನ ಮನೆಗೆ ಹೋಗುವ ಸಂದರ್ಭದಲ್ಲಿ ಸಂಜೆ 7-30 ರ ಸುಮಾರಿನಲ್ಲಿ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ವೇಗವಾಗಿ ಬಂದ ಬಸ್ ದಯಾನಂದ್ ಚಲಾಯಿಸುತ್ತಿದ್ದ ಬೈಕ್ ಗೆ ಡಿಕ್ಕಿ ಹೊಡೆದಿದೆ. ಇದರಿಂದಾಗಿ ದಯಾನಂದ್ ಸ್ವಲ್ಪ ದೂರ ಗಾಳಿಯಲ್ಲಿ ಹಾರಿಹೋಗಿದ್ದು, ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಹೆಬ್ಬಾಳ ಸಂಚಾರಿ ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆ ಸಾಗಿಸಿದ್ದರು.
ಈ ಘಟನೆಯಿಂದಾಗಿ ಮೇಲ್ಸುತುವೆ ಬಳಿ ಕೆಲ ಕಾಲ ಸಂಚಾರದಲ್ಲಿ ವ್ಯತ್ಯಯ ಉಂಟಾಗಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


