ರಾಜ್ಯ

ಜೂ.6 ಮಧ್ಯಾಹ್ನ 2ಕ್ಕೆ ಸಂಪುಟ ವಿಸ್ತರಣೆ, ಖಾತೆ ಹಂಚಿಕೆ: ಉಪ ಮುಖ್ಯಮಂತ್ರಿ ಪರಮೇಶ್ವರ್

ಜೂ.6ರಂದು ಮಧ್ಯಾಹ್ನ 2ಕ್ಕೆ ಸಂಪುಟ ವಿಸ್ತರಣೆ ಮಾಡಿ, ಅಂದೇ ಖಾತೆಗಳನ್ನು ಹಂಚಲಾಗುತ್ತದೆ ಎಂದು ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಅವರು ಮಂಗಳವಾರ ಹೇಳಿದ್ದಾರೆ...

ಜೂ.6 ಮಧ್ಯಾಹ್ನ 2ಕ್ಕೆ ಸಂಪುಟ ವಿಸ್ತರಣೆ, ಖಾತೆ ಹಂಚಿಕೆ: ಉಪ ಮುಖ್ಯಮಂತ್ರಿ ಪರಮೇಶ್ವರ್
ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್
Published On :
ಬೆಂಗಳೂರು; ಜೂ.6ರಂದು ಮಧ್ಯಾಹ್ನ 2ಕ್ಕೆ ಸಂಪುಟ ವಿಸ್ತರಣೆ ಮಾಡಿ, ಅಂದೇ ಖಾತೆಗಳನ್ನು ಹಂಚಲಾಗುತ್ತದೆ ಎಂದು ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಅವರು ಮಂಗಳವಾರ ಹೇಳಿದ್ದಾರೆ. 
ಸುದ್ದಿಗೋಷ್ಠಿಯಲ್ಲಿ ಮಾತನಾಡಿರುವ ಅವರು, ಯಾರಿಗೆ ಸಚಿವ ಸ್ಥಾನ ನೀಡಲಾಗುವುದು ಎಂಬುದು ಅಂದೇ ತಿಳಿಯುತ್ತದೆ. ಪ್ರತಿಯೊಂದು ಜಿಲ್ಲೆಗೆ ಸಚಿವರನ್ನು ನೇಮಕ ಮಾಡಲಾಗುವುದು ಎಂದು ಹೇಳಿದ್ದಾರೆ. 
ಡಿ.ಕೆ.ಶಿವಕುಮಾರ್ ಪಕ್ಷ ಒಬ್ಬ ಪ್ರಾಮಾಣಿಕ ಶಿಸ್ತಿನ ಸಿಪಾಯಿ. ಅವರಿಗೆ ಯಾವುದೇ ರೀತಿಯ ಅಸಮಾಧಾನವಿಲ್ಲ. ಪಕ್ಷ ಯಾವುದೇ ಜವಾಬ್ದಾರಿ ನೀಡಿದರೂ ಅದನ್ನು ನಿಭಾಯಿಸಲು ಅವರು ಸಿದ್ಧರಿದ್ದಾರೆಂದು ತಿಳಿಸಿದ್ದಾರೆ. 
ಎಸ್.ಆರ್.ಪಾಟೀಲ್ ರಾಜೀನಾಮೆ ನೀಡುವುದರ ಕಾರಣ ತಿಳಿದುಬಂದಿಲ್ಲ. ಅವರು ನೇರವಾಗಿ ಎಐಸಿಸಿ ಅಧ್ಯಕ್ಷರಿಗೇ ರಾಜೀನಾಮೆ ನೀಡಿದ್ದಾರೆ. ಬಹುಶಃ ಇತ್ತೀಚೆಗೆ ಅವರ ಬಾಗಲಕೋಟೆ ನಿವಾಸದ ಮುಂದೆ ಪ್ರತಿಭಟನೆಯೊಂದು ನಡೆದಿತ್ತು. ಇದರಿಂದ ಬೇಸತ್ತು ರಾಜೀನಾಮೆ ನೀಡಿರಬಹುದು ಎಂದಿದ್ದಾರೆ. 
ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ಒಟ್ಟಿಗೆ ಸ್ಪರ್ಧೆ ನಡೆಸಲಿದೆ. ಆದರೆ, ಸೀಟುಗಳ ಬಗ್ಗೆ ಇನ್ನೂ ತೀರ್ಮಾನವಾಗಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ, 
ಕಾನೂನು ಚೌಕಟ್ಟಿನಲ್ಲಿ ಸಮ್ಮಿಶ್ರ ಸರ್ಕಾರಕ್ಕೆ ಅವಕಾಶವಿದೆ. ರಾಜ್ಯದಲ್ಲಿ ಈಗಾಗಲೇ ನಾವು ಸಮ್ಮಿಶ್ರ ಸರ್ಕಾರ ಮಾಡಿದ್ದೇವೆಂದು ಹೇಳಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.