ರಾಜ್ಯ

ಬಿಎಂಟಿಸಿ ವಿದ್ಯಾರ್ಥಿ ಪಾಸ್ ಗೆ ನೇರವಾಗಿ ಶಾಲಾ, ಕಾಲೇಜುಗಳಿಂದ ಅರ್ಜಿ ಸಲ್ಲಿಸಿ

ನಗರದ ವಿದ್ಯಾರ್ಥಿಗಳಿಗೆ ರಿಯಾಯಿತಿ ಬಸ್ ಪಾಸುಗಳ ಸಂಗ್ರಹಣೆ ಸುಗಮವಾಗಲು ಬೆಂಗಳೂರು ...

ಬಿಎಂಟಿಸಿ ವಿದ್ಯಾರ್ಥಿ ಪಾಸ್ ಗೆ ನೇರವಾಗಿ ಶಾಲಾ, ಕಾಲೇಜುಗಳಿಂದ ಅರ್ಜಿ ಸಲ್ಲಿಸಿ
ಸಾಂದರ್ಭಿಕ ಚಿತ್ರ
Published On :

ಬೆಂಗಳೂರು: ನಗರದ ವಿದ್ಯಾರ್ಥಿಗಳಿಗೆ ರಿಯಾಯಿತಿ ಬಸ್ ಪಾಸುಗಳ ಸಂಗ್ರಹಣೆ ಸುಗಮವಾಗಲು ಬೆಂಗಳೂರು ಮಹಾನಗರ ಸಾರಿಗೆ ನಿಗಮ, ಶಾಲಾ ಕಾಲೇಜು ಮಕ್ಕಳು ತಮ್ಮ ಶಾಲೆಗಳು ಮತ್ತು ಕಾಲೇಜುಗಳಿಂದ ನೇರವಾಗಿ ಬಸ್ ಪಾಸ್ ಗಳಿಗೆ ಅರ್ಜಿ ಸಲ್ಲಿಸುವ ವ್ಯವಸ್ಥೆಯನ್ನು ಜಾರಿಗೆ ತಂದಿದೆ. ಅಲ್ಲದೆ ಹಿಂದಿನ ವರ್ಷದ ಬಸ್ ಪಾಸ್ ಮೂಲಕ ಬಿಎಂಟಿಸಿಯ ಸಾಮಾನ್ಯ ಬಸ್ ಗಳಲ್ಲಿ ಜೂನ್ 30ರವರೆಗೆ ಪ್ರಯಾಣಿಸಲು ಕೂಡ ಅವಕಾಶ ಮಾಡಿಕೊಟ್ಟಿದೆ.

ಈ ಬಗ್ಗೆ ಬಿಎಂಟಿಸಿ ಅಧಿಕೃತ ಹೇಳಿಕೆ ಬಿಡುಗಡೆ ಮಾಡಿದ್ದು, ಬಸ್ ನಿಲ್ದಾಣಗಳಿಗೆ ಹೋಗಿ ವಿದ್ಯಾರ್ಥಿಗಳು ಸಾಲಿನಲ್ಲಿ ನಿಂತು ಅರ್ಜಿ ಸಲ್ಲಿಸಬೇಕಾಗಿಲ್ಲ. ತಮಗೆ ಬಸ್ ಪಾಸ್ ಬೇಕೆಂದು ವಿದ್ಯಾರ್ಥಿಗಳು ತಮ್ಮ ಶಾಲೆ ಅಥವಾ ಕಾಲೇಜುಗಳಲ್ಲಿ ಮಾಹಿತಿ ನೀಡಬೇಕು. ಸಂಸ್ಥೆಯ ನೋಡಲ್ ಅಧಿಕಾರಿ ವಿದ್ಯಾರ್ಥಿಯ ಪ್ರಯಾಣ ವಿವರಗಳನ್ನು ವಿದ್ಯಾರ್ಥಿ ಸಾಧನೆ ಟ್ರಾಕಿಂಗ್ ಸಾಫ್ಟ್ ವೇರ್ ಗೆ ಅಪ್ ಲೋಡ್ ಮಾಡಿ ಅರ್ಜಿಯನ್ನು ಆನ್ ಲೈನ್ ನಲ್ಲಿ ಸಲ್ಲಿಸಬೇಕು. ಬಿಎಂಟಿಸಿ ವಿವರಗಳನ್ನು ಪರಿಶೀಲನೆ ನಡೆಸಿ ವಿದ್ಯಾರ್ಥಿಗಳಿಗೆ ಬಸ್ ಪಾಸ್ ವಿತರಣೆ ಮಾಡುತ್ತದೆ.

ಬಸ್ ಪಾಸ್ ಕಳೆದುಕೊಂಡ ವಿದ್ಯಾರ್ಥಿಗಳು ಮತ್ತು ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಹೊಸ ಪಾಸ್ ಗಳನ್ನು ಪಡೆಯಬೇಕಾದ ವಿದ್ಯಾರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ನಿಗದಿತ ಶುಲ್ಕವನ್ನು ಕೆಂಪೇಗೌಡ ಬಸ್ ನಿಲ್ದಾಣದಲ್ಲಿ ಸಲ್ಲಿಸಬಹುದು.

ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ವಿದ್ಯಾರ್ಥಿಗಳು ನಾಳೆಯಿಂದ ಮತ್ತು ಪ್ರಥಮ ಪಿಯುಸಿ ವಿದ್ಯಾರ್ಥಿಗಳು ಇದೇ 11ರಿಂದ ಬಸ್ ಪಾಸಿಗೆ ಅರ್ಜಿ ಸಲ್ಲಿಸಬಹುದು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.