ದಿನೇಶ್ ಅಮೀನ್ ಮಟ್ಟು ಕೊಲೆ ಸುಪಾರಿ ಆರೋಪ: ಬಿಆರ್ ಭಾಸ್ಕರ್ ಪ್ರಸಾದ್ ಬಂಧನ!
ಅಂಕಣಕಾರ ರೋಹಿತ್ ಚಕ್ರತೀರ್ಥ ಹಾಗೂ ತನ್ನನ್ನು ಕೊಲೆ ಮಾಡಲು ಹಿರಿಯ ಪತ್ರಕರ್ತ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯರ ಮಾಧ್ಯಮ ಸಲಹೆಗಾರ ದಿನೇಶ್...

Published On :
ಬೆಂಗಳೂರು: ಅಂಕಣಕಾರ ರೋಹಿತ್ ಚಕ್ರತೀರ್ಥ ಹಾಗೂ ತನ್ನನ್ನು ಕೊಲೆ ಮಾಡಲು ಹಿರಿಯ ಪತ್ರಕರ್ತ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯರ ಮಾಧ್ಯಮ ಸಲಹೆಗಾರ ದಿನೇಶ್ ಅಮೀನ್ ಮಟ್ಟು ಸುಪಾರಿ ನೀಡಿದ್ದಾರೆ ಎಂದು ಆರೋಪಿಸಿ ಸಾಮಾಜಿಕ ಜಾಲತಾಣಗಳಲ್ಲಿ ಬಿತ್ತರಿಸಿದ್ದ ಬಿಆರ್ ಭಾಸ್ಕರ್ ಪ್ರಸಾದ್ ಅವರನ್ನು ಡಿಜೆ ಹಳ್ಳಿ ಪೊಲೀಸರು ಬಂಧಿಸಿದ್ದಾರೆ.
ಭಾಸ್ಕರ್ ಪ್ರಸಾದ್ ಫೇಸ್ ಬುಕ್ ನಲ್ಲಿ ಸುಪಾರಿ ಕುರಿತಂತೆ ಸುಮಾರು 40 ನಿಮಿಷಗಳ ವಿಡಿಯೋವನ್ನೂ ಹರಿಬಿಟ್ಟಿದ್ದರು. ಈ ಸಂಬಂಧ ದಿನೇಶ್ ಅಮೀನ್ ಮಟ್ಟು ಅವರು ಡಿಜೆ ಹಳ್ಳಿ ಪೊಲೀಸರಿಗೆ ದೂರು ನೀಡಿದ್ದರು.
ಈ ದೂರಿನನ್ವಯ ಭಾಸ್ಕರ್ ಪ್ರಸಾದ್ ಅವರನ್ನು ಬುಧವಾರ ಬೆಳಗ್ಗೆ ಬಂಧಿಸಿದ್ದಾರೆ. ಭಾಸ್ಕರ್ ಪ್ರಸಾದ್ ರನ್ನು ಬಂಧಿಸಲು ಪೊಲೀಸರು ಮಂಗಳವಾರ ತಡರಾತ್ರಿ 2 ಗಂಟೆಯಿಂದ ಬೆಳಗ್ಗೆವರೆಗೂ ಮನೆ ಬಳಿಯೇ ಕಾದು ನಿಂತಿದ್ದು ಬುಧವಾರ ಬೆಳಗ್ಗೆ ಭಾಸ್ಕರ್ ರನ್ನು ಬಂಧಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Siddaramaiahಸಿದ್ದರಾಮಯ್ಯDJ HalliDinesh Amin Mattuದಿನೇಶ್ ಅಮೀನ್ ಮಟ್ಟುBR Bhaskar Prasadಬಿಆರ್ ಭಾಸ್ಕರ್ ಪ್ರಸಾದ್ಡಿಜೆ ಹಳ್ಳಿ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


