ಜಯನಗರ ವಿಧಾನಸಭಾ ಕ್ಷೇತ್ರದ ಚುನಾವಣೆಗಾಗಿ ಸಕಲ ಸಿದ್ಧತೆ
ಜಯನಗರ ವಿಧಾನಸಭಾ ಕ್ಷೇತ್ರದ ಚುನಾವಣೆಯನ್ನು ಮುಕ್ತ ಹಾಗೂ ನ್ಯಾಯಸಮ್ಮತ ರೀತಿಯಲ್ಲಿ ನಡೆಸಲು ರಾಜ್ಯ ಚುನಾವಣಾ ಆಯೋಗ ಹಾಗೂ ಪೊಲೀಸರು ಸಕಲ ಸಿದ್ಧತೆ ಮಾಡಿಕೊಂಡಿದ್ದಾರೆ.

ಬೆಂಗಳೂರು: ಜಯನಗರ ವಿಧಾನಸಭಾ ಕ್ಷೇತ್ರದ ಚುನಾವಣೆಯನ್ನು ಮುಕ್ತ ಹಾಗೂ ನ್ಯಾಯಸಮ್ಮತ ರೀತಿಯಲ್ಲಿ ನಡೆಸಲು ರಾಜ್ಯ ಚುನಾವಣಾ ಆಯೋಗ ಹಾಗೂ ಪೊಲೀಸರು ಸಕಲ ಸಿದ್ಧತೆ ಮಾಡಿಕೊಂಡಿದ್ದಾರೆ.
ಚುನಾವಣೆ ಕುರಿತಂತೆ ನಿನ್ನೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜಿಲ್ಲಾ ಚುನಾವಣಾಧಿಕಾರಿ ಹಾಗೂ ಬಿಬಿಎಂಪಿ ಆಯುಕ್ತ ಎಂ. ಮಹೇಶ್ವರ್ ರಾವ್, ಮತದಾನ ಜಾಗೃತಿ ಮೂಡಿಸಲು ಅನೇಕ ಕ್ರಮಗಳನ್ನು ಕೈಗೊಳ್ಳಲಾಗಿದೆ. ವಾರ್ಡ್ ವಾರು ಆಟೋದೊಂದಿಗೆ ಸಾರ್ವಜನಿಕರಿಗೆ ಅರಿವು ಮೂಡಿಸುವ ವ್ಯವಸ್ಥೆ ಮಾಡಲಾಗಿತ್ತು ಎಂದರು.
ಇವಿಎಂ ಮತ್ತು ವಿವಿಪ್ಯಾಟ್ ವ್ಯವಸ್ಥೆ ಕುರಿತಂತೆ ಮತದಾರರಿಗೆ ಶಿಕ್ಷಣ ನೀಡಲಾಗಿದೆ. ಇವುಗಳ ಬಳಕೆ ಕುರಿತಂತೆ ಸ್ವೀಪ್, ಹಾಗೂ ತರಬೇತುದಾರರು ಸಾರ್ವಜನಿಕರಿಗೆ ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು.ಮತದಾನದ ದಿನವೂ ಸಹ ಆಟೋದೊಂದಿಗೆ ಸಾರ್ವಜನಿಕರಿಗೆ ಅರಿವು ಮೂಡಿಸುವ ಕಾರ್ಯಕ್ರಮ ಆಯೋಜಿಸಲು ಚಿಂತನೆ ನಡೆಸಲಾಗಿದೆ ಎಂದು ತಿಳಿಸಿದರು.
ಸೋಮವಾರ ಬೆಳ್ಳಿಗೆ 7 ರಿಂದ ಸಂಜೆ 6 ರವರೆಗೂ ಮತದಾನ ನಡೆಯಲಿದ್ದು, ಬುಧವಾರ ಎಸ್ ಎಸ್ ಎಂ ಆರ್ ವಿ ಕಾಲೇಜಿನಲ್ಲಿ ಮತ ಎಣಿಕೆ ನಡೆಯಲಿದೆ. 19 ಅಭ್ಯರ್ಥಿಗಳು ಕಣದಲ್ಲಿದ್ದು, 216 ಮತಗಟ್ಟೆಗಳ ಪೈಕಿ ಐದು ಮತಗಟ್ಟೆಗಳನ್ನು ಸಖಿ ಪಿಂಕ್ ಮತಗಟ್ಟೆಗಳೆಂದು ಪರಿಗಣಿಸಲಾಗಿದ್ದು, ಅದರಲ್ಲಿ ಮಹಿಳಾ ಸಿಬ್ಬಂದಿ ಮಾತ್ರ ಇರಲಿದ್ದು, ಮಹಿಳೆಯರು ಮಾತ್ರ ಮತ ಚಲಾಯಿಸುವಂತೆ ಅವಕಾಶ ಮಾಡಿಕೊಡಲಾಗುವುದು ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


