ರಾಜ್ಯ

ಆರು ಐಪಿಎಸ್ ಅಧಿಕಾರಿಗಳ ವರ್ಗಾವಣೆ

ಆರು ಮಂದಿ ಐಪಿಎಸ್ ಅಧಿಕಾರಿಗಳನ್ನು ವರ್ಗಾಯಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ...

ಆರು ಐಪಿಎಸ್ ಅಧಿಕಾರಿಗಳ ವರ್ಗಾವಣೆ
ಸಾಂದರ್ಭಿಕ ಚಿತ್ರ
Published On :

ಬೆಂಗಳೂರು: ಆರು ಮಂದಿ ಐಪಿಎಸ್ ಅಧಿಕಾರಿಗಳನ್ನು ವರ್ಗಾಯಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಡಿಜಿಪಿ ಆಶಿತ್ ಮೋಹನ್ ಪ್ರಸಾದ್ ಅವರನ್ನು ಆಂತರಿಕ ಭದ್ರತೆ ವಿಭಾಗಕ್ಕೆ ವರ್ಗಾಯಿಸಲಾಗಿದೆ. ಇವರು ಈ ಹಿಂದೆ ರಾಜ್ಯ ಗುಪ್ತಚರ ಇಲಾಖೆಯ ಮುಖ್ಯಸ್ಥರಾಗಿದ್ದರು. ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರು ಮುಖ್ಯಮಂತ್ರಿಯಾದ ಕೂಡಲೇ ಇವರನ್ನು ವರ್ಗಾವಣೆ ಮಾಡಿದ್ದರು. ಆದರೆ ಕುಮಾರಸ್ವಾಮಿಯವರು ಮುಖ್ಯಮಂತ್ರಿಯಾದ ನಂತರ ಯಡಿಯೂರಪ್ಪನವರ ಆದೇಶವನ್ನು ಹಿಂತೆಗೆದುಕೊಂಡಿದ್ದರು.

ಬೆಳಗಾವಿ ನಗರದ ಐಜಿಪಿ ಮತ್ತು ಪೊಲೀಸ್ ಆಯುಕ್ತ ಎಂ ಚಂದ್ರಶೇಖರ್ ಅವರನ್ನು ಬೆಂಗಳೂರಿನ ಎಸಿಬಿ ವಿಭಾಗಕ್ಕೆ ವರ್ಗಾಯಿಸಲಾಗಿದೆ. ಅವರು ಡಿ ಸಿ ರಾಜಪ್ಪ ಅವರ ಬದಲಿಗೆ ನೇಮಕಗೊಂಡಿದ್ದಾರೆ. ಮಂಗಳೂರು ನಗರದ ಪೊಲೀಸ್ ಆಯುಕ್ತರಾಗಿದ್ದ ಐಜಿಪಿ ವಿಪುಲ್ ಕುಮಾರ್ ಅವರನ್ನು ಮೈಸೂರಿನ ಕರ್ನಾಟಕ ಪೊಲೀಸ್ ಅಕಾಡೆಮಿಯ ನಿರ್ದೇಶಕರಾಗಿ ವರ್ಗಾವಣೆ ಮಾಡಲಾಗಿದೆ. ಅವರ ಸ್ಥಾನಕ್ಕೆ ಯಾವುದೇ ಅಧಿಕಾರಿಯನ್ನು ನೇಮಕ ಮಾಡಿಲ್ಲ. ಸದ್ಯಕ್ಕೆ ಮಂಗಳೂರು ಪೊಲೀಸ್ ಆಯುಕ್ತ ಹುದ್ದೆ ಖಾಲಿಯಿದೆ.

ಬಾಗಲಕೋಟೆ ಜಿಲ್ಲೆಯ ಎಸ್ಪಿ ಸಿ ವಾಮ್ಸಿ ಕೃಷ್ಣ ಅವರನ್ನು ದಾವಣಗೆರೆಯ ಎಸಿಬಿ ಎಸ್ಪಿಯಾಗಿ ವರ್ಗಾವಣೆ ಮಾಡಲಾಗಿದೆ. ಅವರ ಸ್ಥಾನಕ್ಕೆ ಬೆಂಗಳೂರಿನ ಸಿಐಡಿ ಮುಖ್ಯಸ್ಥರಾಗಿದ್ದ ಸಿ ಬಿ ರೈಶ್ಯಂತ್ ಅವರನ್ನು ನೇಮಕಗೊಳಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.