ಮುಚ್ಚಲಿವೆ 3,450 ಏಕೋಪಾಧ್ಯಾಯ ಶಾಲೆಗಳು: ಸಮೀಪದ ಶಾಲೆಯೊಂದಿಗೆ ವಿಲೀನ?
ರಾಜ್ಯಾದ್ಯಂತ 3,450 ಸರ್ಕಾರಿ ಕನ್ನಡ ಪ್ರಾಥಮಿಕ ಶಾಲೆಗಳು ಶಾಶ್ವತವಾಗಿ ಮುಚ್ಚಲಿವೆ. 10ಕ್ಕಿಂತ ಕಡಿಮೆ ಸಂಖ್ಯೆಯಲ್ಲಿ ಮಕ್ಕಳಿರುವ 3,450 ...

Published On :
ಬೆಂಗಳೂರು: ರಾಜ್ಯಾದ್ಯಂತ 3,450 ಸರ್ಕಾರಿ ಕನ್ನಡ ಪ್ರಾಥಮಿಕ ಶಾಲೆಗಳು ಶಾಶ್ವತವಾಗಿ ಮುಚ್ಚಲಿವೆ. 10ಕ್ಕಿಂತ ಕಡಿಮೆ ಸಂಖ್ಯೆಯಲ್ಲಿ ಮಕ್ಕಳಿರುವ 3,450 ಏಕೋಪಾಧ್ಯಾಯ ಶಾಲೆಗಳನ್ನು ಸಮೀಪದ ಶಾಲೆಯೊಂದಿಗೆ ವಿಲೀನಗೊಳಿಸುವ ಬಗ್ಗೆ ಚಿಂತನೆ ನಡೆಸಲಾಗುತ್ತಿದೆ ಎಂದು ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಎನ್. ಮಹೇಶ್ ಹೇಳಿದ್ದಾರೆ.
ಇಲಾಖೆ ಅಧಿಕಾರಿಗಳೊಂದಿಗೆ ಸಮಾಲೋಚನಾ ಸಭೆ ನಡೆಸಿದ ನಂತರ ಮಾತನಾಡಿದ ಅವರು, ರಾಜ್ಯದಲ್ಲಿ 21,225 ಪ್ರಾಥಮಿಕ ಶಾಲೆ, 22,487 ಹಿರಿಯ ಪ್ರಾಥಮಿಕ ಸೇರಿ 43,712 ಸರ್ಕಾರಿ ಶಾಲೆಗಳಿವೆ. ಪ್ರಾಥಮಿಕ ವಿಭಾಗದಲ್ಲಿ 3,372 ಹಾಗೂ ಹಿರಿಯ ಪ್ರಾಥಮಿಕ ವಿಭಾಗದಲ್ಲಿ 78 ಸೇರಿ 3,450 ಏಕೋಪಾಧ್ಯಾಯ ಶಾಲೆಗಳಿವೆ. ಈ ಶಾಲೆಯ ಮಕ್ಕಳಿಗೆ ಉತ್ತಮ ವಿದ್ಯಾಭ್ಯಾಸ ಒದಗಿಸುವ ಉದ್ದೇಶದಿಂದ ಸಮೀಪದ ಶಾಲೆಯೊಂದಿಗೆ ವಿಲೀನಗೊಳಿಸುವ ಬಗ್ಗೆ ಚಿಂತನೆ ನಡೆಸಲಾಗುತ್ತಿದೆ. ಆದರೆ, ಯಾವುದೇ ಸರ್ಕಾರಿ ಶಾಲೆಯನ್ನು ಮುಚ್ಚುವುದಿಲ್ಲ. ಇರುವ ವ್ಯವಸ್ಥೆಯನ್ನು ಸರಿಯಾಗಿ ಬಳಸಿಕೊಳ್ಳಲಿದ್ದೇವೆ ಎಂದು ಸ್ಪಷ್ಟಪಡಿಸಿದರು.
ಸಮೀಪದಲ್ಲಿರುವ ಶಾಲೆಗಳೊಂದಿಗೆ ಏಕೋಪಾದ್ಯಾಯ ಶಾಲೆಯನ್ನು ವಿಲೀನಗೊಳಿಸಿದ ನಂತರ ಪ್ರತಿಯೊಬ್ಬ ವಿದ್ಯಾರ್ಥಿಗೆ ವರ್ಷಕ್ಕೆ 700 ರೂ. ಪ್ರಯಾಣ ವೆಚ್ಚ ಭರಿಸುವ ಜೊತೆಗೆ ವಿದ್ಯಾರ್ಥಿಗಳನ್ನು ಕರೆದೊಯ್ಯುಪವ ಹಾಗೂ ಮನೆಗೆ ಬಿಡಲು ವಾಹನ ಸೌಕರ್ಯ ಒದಗಿಸಲಾಗುವುದು ಎಂದು ಹೇಳಿದ್ದಾರೆ.
ಮಕ್ಕಳಿಗೆ ಏಕೋಪಾಧ್ಯಾಯ ಶಾಲೆಗಿಂತ ಎಲ್ಲ ಸೌಲಭ್ಯ ಇರುವ ಶಾಲೆಗಳಲ್ಲಿ ಪರಿಣಾಮಕಾರಿ ಶಿಕ್ಷಣ ನೀಡಬಹುದು. ಸುಮಾರು 30 ಸಾವಿರ ಮಕ್ಕಳನ್ನು ಸ್ಥಳಾಂತರಿಸಬೇಕಾಗುತ್ತದೆ ಎಂದು ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Karnataka Governmentಕರ್ನಾಟಕ ಸರ್ಕಾರವಿಲೀನmergesingle teacher SchoolN Maheshಏಕೋಪಾಧ್ಯಾಯ ಶಾಲೆಗಳುಎನ್.ಮಹೇಶ್
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


