ತ್ಯಾಜ್ಯದಿಂದ ವಿದ್ಯುತ್ ತಯಾರಿಕಾ ಘಟಕ: ರಾಮನಗರದಿಂದ ಸ್ಥಳಾಂತರಕ್ಕೆ ಸರ್ಕಾರ ಒಪ್ಪಿಗೆ
ರಾಮನಗರ ಜಿಲ್ಲೆಯ ಮಾಗಡಿ ತಾಲ್ಲೂಕಿನ ಗೊರೂರಿನಲ್ಲಿ ತ್ಯಾಜ್ಯಗಳಿಂದ ಇಂಧನ ಉತ್ಪತ್ತಿ ...

ಬೆಂಗಳೂರು: ರಾಮನಗರ ಜಿಲ್ಲೆಯ ಮಾಗಡಿ ತಾಲ್ಲೂಕಿನ ಗೊರೂರಿನಲ್ಲಿ ತ್ಯಾಜ್ಯಗಳಿಂದ ಇಂಧನ ಉತ್ಪತ್ತಿ ಮಾಡುವುದಕ್ಕೆ ದೀರ್ಘಕಾಲದಿಂದ ವಿರೋಧ ಕೇಳಿಬರುತ್ತಿರುವುದರಿಂದ ಅದನ್ನು ಮುಚ್ಚಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಅದನ್ನು ಬೇರೆಡೆಗೆ ಸ್ಥಳಾಂತರಿಸಲು ಮುಂದಾಗಿದೆ.
ಸ್ಥಳೀಯ ಜನಪ್ರತಿನಿಧಿಗಳು ಮತ್ತು ಸರ್ಕಾರದ ಅಧಿಕಾರಿಗಳು ಪ್ರಾಥಮಿಕ ಚರ್ಚೆಗಳನ್ನು ನಡೆಸಿ ಘಟಕವನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆ ಅಥವಾ ಬೆಂಗಳೂರು ನಗರ ಜಿಲ್ಲೆಗೆ ವರ್ಗಾಯಿಸುವ ಸಂಬಂಧ ಮಾತುಕತೆಗಳು ನಡೆದವು.
ಸರ್ಕಾರದ ಈ ನಿರ್ಧಾರ ಗೊರೂರಿನ ಸ್ಥಳೀಯ ಜನತೆಗೆ ನಿರಾಳತೆ ತಂದಿದೆ. ಸತೆರಮ್ ಎಂಟರ್ ಪ್ರೈಸಸ್ ಸ್ಥಾಪಿಸಲು ಉದ್ದೇಶಿಸಿದ್ದ ತ್ಯಾಜ್ಯದಿಂದ ಇಂಧನ ತಯಾರಿಸುವ ಘಟಕಕ್ಕೆ ಸ್ಥಳೀಯರು ಹಲವು ವರ್ಷಗಳಿಂದ ವಿರೋಧ ವ್ಯಕ್ತಪಡಿಸುತ್ತಾ ಬಂದಿದ್ದರು. ಸುಮಾರು 287 ಕೋಟಿ ರೂಪಾಯಿ ವೆಚ್ಚದಲ್ಲಿ 84 ದಶಲಕ್ಷ ಯೂನಿಟ್ ವಿದ್ಯುತ್ ಉತ್ಪಾದನೆಯನ್ನು ಮಾಡುವ ಉದ್ದೇಶ ಸರ್ಕಾರದ್ದಾಗಿತ್ತು. ಬೆಂಗಳೂರು ನಗರದ ತ್ಯಾಜ್ಯಗಳನ್ನು ಇಲ್ಲಿಗೆ ಪೂರೈಸುವ ಯೋಜನೆಯಿತ್ತು.
ಈ ಬಗ್ಗೆ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಗೆ ಪ್ರತಿಕ್ರಿಯೆ ನೀಡಿದ ರೇಣುಕಾ ಪ್ರಸಾದ್, ರಾಮನಗರ ಜಿಲ್ಲೆಯ ಗೊರೂರಿನಿಂದ ಘಟಕವನ್ನು ಸ್ಥಳಾಂತರಿಸುವ ಕುರಿತು ನಿಯೋಗ ಮುಖ್ಯಮಂತ್ರಿ ಕುಮಾರಸ್ವಾಮಿಯವರನ್ನು ಭೇಟಿ ಮಾಡಿ ಚರ್ಚೆ ನಡೆಸಿದೆ. ರಾಜ್ಯ ಸರ್ಕಾರ ಕಂಪೆನಿಗೆ ಬೇರೆ ಕಡೆಯಲ್ಲಿ ಸ್ಥಳ ಒದಗಿಸಲು ಒಪ್ಪಿಕೊಂಡಿದೆ. ಅಧಿಕಾರಿಗಳೊಂದಿಗೆ ನಡೆದ ಚರ್ಚೆ ವೇಳೆ ಎರಡು ಬದಲಿ ಸ್ಥಳಗಳನ್ನು ಗುರುತಿಸಲಾಗಿದೆ. ಸರಿಯಾದ ಸ್ಥಳ ಇನ್ನೂ ನಿಗದಿಯಾಗಿಲ್ಲ ಎಂದು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


