ಬೆಂಗಳೂರು ಉತ್ತರ ವಿಭಾಗದ ಡಿಡಿಪಿಐ ಅಮಾನತುಗೊಳಿಸಲು ಸಿಎಂ ಕುಮಾರಸ್ವಾಮಿ ಆದೇಶ
ಜನತಾ ದರ್ಶನದ ವೇಳೆ ಸಾರ್ವಜನಿಕರಿಂದ ಹಲವು ದೂರುಗಳು ಕೇಳಿ ಬಂದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಕುಮಾರ ಸ್ವಾಮಿ ಬೆಂಗಳೂರು ಉತ್ತರ....

Published On :
ಬೆಂಗಳೂರು: ಜನತಾ ದರ್ಶನದ ವೇಳೆ ಸಾರ್ವಜನಿಕರಿಂದ ಹಲವು ದೂರುಗಳು ಕೇಳಿ ಬಂದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಕುಮಾರ ಸ್ವಾಮಿ ಬೆಂಗಳೂರು ಉತ್ತರ ವಿಭಾಗದ ಡಿಡಿಪಿಐ ಅನ್ನು ಅಮಾನತುಗೊಳಿಸುವಂತೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆಗೆ ಅದೇಶಿಸಿದ್ದಾರೆ.
ಬೆಂಗಳೂರು ದಕ್ಷಿಣ ವಿಭಾಗದ ಡಿಡಿಪಿಐ ಅಬ್ದುಲ್ ವಜಿದ್ ಖಾಜಿ ತಮ್ಮ ಅಧಿಕಾರವನ್ನು ದುರುಪಯೋಗ ಪಡಿಸಿಕೊಳ್ಳುತ್ತಿದ್ದಾರೆ. ಕೆಂಪಾಪುರದಲ್ಲಿರುವ ಶಾಲೆಯೊಂದರಲ್ಲಿ ಆರ್ ಟಿ ಇ ಅಡಿಯಲ್ಲಿ ಮಕ್ಕಳಿಗೆ ಸೀಟು ನೀಡಲು ನಿರಾಕರಿಸುತ್ತಿದ್ದಾರೆ ಎಂದು ದೂರು ನೀಡಿದ್ದರೂ ಯಾವುದೇ ಕ್ರಮವನ್ನು ಕೈಗೊಳ್ಳುತ್ತಿಲ್ಲ ಎಂದು ಆರೋಪಿಸಲಾಗಿತ್ತು.
ಪದೇ ಪದೇ ದೂರು ನೀಡಿದ್ದರೂ ಡಿಡಿಪಿಐ ಈ ಶಾಲೆಯ ವಿರುದ್ಧ ಯಾವುದೇ ಕ್ರಮ ಕೈಗೊಂಡಿರಲಿಲ್ಲ, ಹೀಗಾಗಿ ಹಲವು ಪೋಷಕರು ಕೋರ್ಟ್ ಮೊರೆ ಹೋಗಿದ್ದರು. ಈ ಅರ್ಜಿಯ ವಿಚಾರಣೆಯನ್ನು ಜೂನ್ 18ಕ್ಕೆ ನಿಗದಿ ಪಡಿಸಲಾಗಿದೆ.
ಡಿಡಿಪಿಐ ಅನ್ನು ಅಮಾನತುಗೊಳಿಸಿ ಇಲಾಖೆ ತನಿಖೆಗೆ ಸೂಚಿಸುವಂತೆ ಸಿಎಂ ಕುಮಾರ ಸ್ವಾಮಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆಯ ಅಧೀನ ಕಾರ್ಯದರ್ಶಿಗೆ ಸೂಚಿಸಿದ್ದರು. ಈ ಸಂಬಂಧ ಇಲಾಖೆ ಹಲವು ಬಾರಿ ಖಾಜಿಗೆ ಎಚ್ಚರಿಕೆ ನೀಡಿದ್ದರೂ ಆತ ಎಚ್ಚೆತ್ತುಕೊಂಡಿರಲಿಲ್ಲ, ಆತನ ವಿರುದ್ಧ ಕರ್ತವ್ಯ ಲೋಪದ ಆರೋಪಗಳು ಕೇಳಿ ಬಂದಿವೆ.
ಖಾಜಿಗೆ ಅಮಾನತು ಆದೇಶವಿದ್ದರೂ ಆತನನ್ನು ಬೀದರ್ ಡಿಡಿಪಿಐ ಆಗಿ ವರ್ಗಾವಣೆ ಮಾಡಲಾಗಿದೆ. ಅಮಾನತಿನಲ್ಲಿರುವ ಖಾಜಿಗೆ ಭತ್ಯೆ ನೀಡಲಾಗುತ್ತದೆ ಎಂದು ಇಲಾಖೆ ಪ್ರಧಾನ ಕಾರ್ಯದರ್ಶಿ ಶಾಲಿನಿ ರಜನೀಶ್ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ದೂರುcomplaintH.D Kumaraswamysuspendedಅಮಾನತುಎಚ್.ಡಿ ಕುಮಾರ ಸ್ವಾಮಿddpiBengaluru Northಡಿಡಿಪಿಐಬೆಂಗಳೂರು ಉತ್ತರ
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


