ರಾಜ್ಯ

ಹೊಸದುರ್ಗ: ಮರಕ್ಕೆ ಕಾರು ಡಿಕ್ಕಿ; ತಂದೆ, ಮಗಳು ಸಾವು

ಕಾರೊಂದು ಮರಕ್ಕೆ ಡಿಕ್ಕಿಯಾಗಿ ತಂದೆ, ಮಗಳು ಸಾವನ್ನಪ್ಪಿರುವ ದುರಂತ ಘಟನೆ ಚಿತ್ರದುರ್ಗ ಜಿಲ್ಲೆ ಹೊಸದುರ್ಗದಲ್ಲಿ ನಡೆದಿದೆ.

ಹೊಸದುರ್ಗ: ಮರಕ್ಕೆ ಕಾರು ಡಿಕ್ಕಿ; ತಂದೆ, ಮಗಳು ಸಾವು
ಹೊಸದುರ್ಗ: ಮರಕ್ಕೆ ಕಾರು ಡಿಕ್ಕಿ, ತಂದೆ, ಮಗಳು ಸಾವು
Published On :
ಹೊಸದುರ್ಗ: ಕಾರೊಂದು ಮರಕ್ಕೆ ಡಿಕ್ಕಿಯಾಗಿ ತಂದೆ, ಮಗಳು ಸಾವನ್ನಪ್ಪಿರುವ ದುರಂತ ಘಟನೆ ಚಿತ್ರದುರ್ಗ ಜಿಲ್ಲೆ ಹೊಸದುರ್ಗದಲ್ಲಿ ನಡೆದಿದೆ.
ಹೊಸದುರ್ಗದ ಎನ್.ಜಿ. ಹಳ್ಳಿ ಗೇಟ್ ಬಳಿ ಸಂಭವಿಸಿದ ದುರಂತದಲ್ಲಿ ಜವಳಿ ಉದ್ಯಮಿ ಮಂಜುನಾಥ್ (40) ಮತ್ತು ಅವರ ಒಂದು ವರ್ಷದ ಮಗಳು ರಾಜೇಶ್ವರಿ ಮೃತಪಟ್ಟಿದ್ದಾರೆ. ಮಂಜುನಾಥ್ ಸೋಮವಾರ ಬೆಳಗಿನ ಜಾವ ದಾವಣಗೆರೆಯಿಂದ ಹೊಸದುರ್ಗಕ್ಕೆ ಕುಟುಂಬದೊಡನೆ ತೆರಳುತ್ತಿದ್ದರು. 
ಘಟನೆ ವೇಳೆ ಕಾರಿನಲ್ಲಿದ್ದ ಮಂಜುನಾಥ್ ಅವರ ಪತ್ನಿ  ಶಿಲ್ಪಾ, ಮಗಳು ಶಾರದಾ, ಸನ್ವಿತಾ ಹಾಗೂ ಆಕೆಯ ಸ್ನೇಹಿತ ರಂಗನಾಥ್ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಕಾರು ಚಾಲನೆ ಮಾಡುತ್ತಿದ್ದ ಮಂಜುನಾಥ್ ನಿಯಂತ್ರಣ ತಪ್ಪಿ ಕಾರು ರಸ್ತೆ ಪಕ್ಕದ ಮರಕ್ಕೆ ಡಿಕ್ಕಿಯಾಗಿದೆ ಎಂದು ಪೋಲೀಸರು ತಿಳಿಸಿದ್ದಾರೆ.
ಹೊಳಲ್ಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.