ಮಾಜಿ ಸಿಎಂ ಸಿದ್ದರಾಮಯ್ಯಗೆ ಬೆಳ್ತಂಗಡಿಯಲ್ಲಿ 12 ದಿನಗಳ ಕಾಲ ಯೋಗ, ಪ್ರಕೃತಿ ಚಿಕಿತ್ಸೆ
ಯೋಗ ಮತ್ತು ಪ್ರಕೃತಿ ಚಿಕಿತ್ಸೆಗಾಗಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಳ್ತಂಗಡಿಗೆ ಭಾನುವಾರ ಭೇಟಿ ನೀಡಿದ್ದಾರೆ...

Published On :
ಮಂಗಳೂರು; ಯೋಗ ಮತ್ತು ಪ್ರಕೃತಿ ಚಿಕಿತ್ಸೆಗಾಗಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಳ್ತಂಗಡಿಗೆ ಭಾನುವಾರ ಭೇಟಿ ನೀಡಿದ್ದಾರೆ.
ಧರ್ಮಸ್ಥಳದ ಶಾಂತಿವನದಲ್ಲಿನ ಎಸ್'ಡಿಎಂ ಪ್ರಕೃತಿ ಚಿಕಿತ್ಸಾಲಕ್ಕೆ ಸಿದ್ದರಾಮಯ್ಯ ಅವರು ದಾಖಲಾಗಿದ್ದು, 12 ದಿನಗಳ ಕಾಲ ಯೋಗ ಮತ್ತು ಪ್ರಕೃತಿ ಚಿಕಿತ್ಸೆ ಪಡೆಯಲಿದ್ದಾರೆ.
ವಿವಿಧ ಚಿಕಿತ್ಸೆಯನ್ನು ಪಡೆಯಲು ಸಿದ್ದರಾಮಯ್ಯ ಅವರು ಬೆಂಗಳೂರಿನಿಂದ ಮಂಗಳೂರಿಗೆ ವಿಮಾನದಲ್ಲಿ ಬಂದು ಅಲ್ಲಿಂದ ರಸ್ತೆ ಮಾರ್ಗವಾಗಿ ಶಾಂತಿವನಕ್ಕೆ ಶನಿವಾರ ರಾತ್ರಿ 10 ಗಂಟೆಗೆ ತಲುಪಿದರು. ಶಾಂತಿವನದಲ್ಲಿ ಅವರು ಸುಮಾರು 10-15 ದಿನಗಳ ಕಾಲ ಉಳಿಕೊಳ್ಳಲಿದ್ದಾರೆಂದು ಹೇಳಲಾಗುತ್ತಿದೆ.
ಈ ವೇಳೆ ಸಿದ್ದರಾಮಯ್ಯ ಅವರು ಅಲ್ಲಿನ ಎಣ್ಣೆಮರ್ದನ, ಪೃಥ್ವಿ (ಮಡ್) ಚಿಕಿತ್ಸೆ, ಹಬೆ ಸ್ನಾನ, ಫಿಸಿಯೋಥೆರಪಿ, ಆ್ಯಂಕ್ಚುಪಂಕ್ಚರ್, ಜಲ ಚಿಕಿತ್ಸೆ, ಆಕಾಶ ಚಿಕಿತ್ಸೆ, ವಾಯು ಚಿಕಿತ್ಸೆ, ಸೂರ್ಯ/ಅಗ್ನಿ ಚಿಕಿತ್ಸೆ, ಅಯಸ್ತಾಂಕ ಚಿಕಿತ್ಸೆ, ಯೋಗ ಥೆರಪಿ, ಡಯಟ್ ಥೆರಪಿ, ಧ್ಯಾನ ಪ್ರಾಣಾಯಾಮ ಮೊದಲಾದ ಚಿಕಿತ್ಸೆಗಳನ್ನು ಪಡೆಯಲಿದ್ದಾರೆ.
ಜೂನ್.21ರಂದು ಧರ್ಮಸ್ಥಳದಲ್ಲಿ ನಡೆಯುವ ವಿಶ್ವಯೋಗ ದಿನಾಚರಣೆಯಂದು ಅವರು ಅತಿಥಿಗಳಾಗಿರುತ್ತಾರೆಂದು ಹೇಳಲಾಗುತ್ತಿದೆ. ಚಿಕಿತ್ಸೆ ಪಡೆದು ಮತ್ತೆ ಮರಳಿ ಬೆಂಗಳೂರಿಗೆ ಹೋಗುವ ಮುನ್ನಾದಿನ ಅವರು ಮಾಧ್ಯಮಗಳೊಂದಿಗೆ ಮಾತುಕತೆ ನಡೆಸಲಿದ್ದಾರೆಂದು ಮೂಲಗಳು ಮಾಹಿತಿ ನೀಡಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


