ನೂತನ ಸರ್ಕಾರದಿಂದ ಸಿಹಿ ಸುದ್ದಿ: ರಾಜ್ಯ ಸರ್ಕಾರಿ ನೌಕರರ ತುಟ್ಟಿ ಭತ್ಯೆ ಹೆಚ್ಚಳ
ಮುಖ್ಯಮಂತ್ರಿ ಕುಮಾರಸ್ವಾಮಿಯವ ನೇತೃತ್ವದ ನೂತನ ಸಮ್ಮಿಶ್ರ ಸರ್ಕಾರದಿಂದ ರಾಜ್ಯದ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ ಸಿಕ್ಕಿದೆ.

Published On :
ಬೆಂಗಳೂರು: ಮುಖ್ಯಮಂತ್ರಿ ಕುಮಾರಸ್ವಾಮಿಯವ ನೇತೃತ್ವದ ನೂತನ ಸಮ್ಮಿಶ್ರ ಸರ್ಕಾರದಿಂದ ರಾಜ್ಯದ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ ಸಿಕ್ಕಿದೆ. ರಾಜ್ಯದ ಆರು ಲಕ್ಷ ನೌಕರರ ಮೂಲ ವೇತನದಲ್ಲಿ ಶೇ 1.75ರಷ್ಟು ಹೆಚ್ಚಳ ಶಿಫಾರಸಿಗೆ ಸಮ್ಮತಿ ಸಿಕ್ಕಿದೆ
ಹಣಕಾಸು ಖಾತೆ ಉಸ್ತುವಾರಿ ಹೊಂದಿರುವ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಇಂದು ಬಜೆಟ್ ಪೂರ್ವಭಾವಿ ಸಭೆ ಕರೆದಿದ್ದು ಆ ವೇಳೆ ಸರ್ಕಾರಿ ನೌಕರರ ತುಟ್ಟಿ ಭತ್ಯೆ ಹೆಚ್ಚಳಕ್ಕೆ ಒಪ್ಪಿಗೆ ಸೂಚಿಸಿದ್ದಾರೆ.
ಈ ಹೆಚ್ಚಳವು ಜನವರಿ 1, 2018ರಿಂದ ಪೂರ್ವಾನ್ವಯವಾಗಲಿದೆ. ಈ ಸೌಲಭ್ಯವು ರಾಜ್ಯ ಸರ್ಕಾರಿ ನೌಕರರು, ಜಿಲ್ಲಾಪಂಚಾಯತ್ ಪೂರ್ನಾವಧಿ ನೌಕರರು, ಸರ್ಕಾರಿ ಸಹಾಯಧನ ಪಡೆಯುವ ಶಿಕ್ಷಣ ಸಂಸ್ಥೆ, ಪೂರ್ಣಾವಧಿ ನೌಕರರುಗಳಿಗೆ ಅನ್ವಯಿಸಲಿದೆ.
ಈ ತುಟ್ಟಿ ಭತ್ಯೆ ಹೆಚ್ಚಳದ ಕಾರಣ ಬೊಕ್ಕಸಕ್ಕೆ ಸುಮಾರು 560 ಕೋಟಿ ಹೊರೆ ಬೀಳುತ್ತದೆ ಎನ್ನಲಾಗಿದೆ.
`
ಏತನ್ಮಧ್ಯೆ ರಾಜ್ಯ ಸರ್ಕಾರಿ ನೌಕರರ ಸಂಘವು ಶೇ.4.25ರ ಮೂಲ ವೇತನ ಹೆಚ್ಚಳಕ್ಕೆ ಸಲ್ಲಿಸಿದ್ದ ಮನವಿಯನ್ನು ಸರ್ಕಾರ ತಿರಸ್ಕರಿಸಿದೆ.
ಇದಕ್ಕೂ ಹಿಂದೆ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಕಳೆದ ವರ್ಷ ದೀಪಾವಳಿ ಸಮಯದಲ್ಲಿ ಸರ್ಕಾರಿ ನೌಕರರ ತುಟ್ಟಿ ಭತ್ಯೆ (ಡಿಎ) ಪ್ರಮಾಣದಲ್ಲಿ ಶೇ 2ರಷ್ಟು ಹೆಚ್ಚಳ ಮಾಡಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Karnataka GovernmentHD Kumaraswamyಎಚ್ ಡಿ ಕುಮಾರಸ್ವಾಮಿಕರ್ನಾಟಕ ಸರ್ಕಾರಸರ್ಕಾರಿ ನೌಕರರುGovernment employeesDAಡಿ.ಎ.
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


