ಮುಂದುವರಿದ ಬೆಂಗಳೂರು ಕಿಮ್ಸ್ ವೈದ್ಯರ ಮುಷ್ಕರ: 5ನೇ ದಿನವೂ ಒಪಿಡಿ ಬಂದ್
ಕಿಮ್ಸ್ ಸೇರಿದಂತೆ ಒಕ್ಕಲಿಗರ ಸಂಘದ ಅಧೀನದಲ್ಲಿರುವ ಎಲ್ಲಾ 18 ವಿದ್ಯಾಸಂಸ್ಥೆಗಳಲ್ಲಿ ಬೋಧಕೇತರ ಸಿಬ್ಬಂದಿಯನ್ನು ಅನಗತ್ಯವಾ...

Published On :
ಬೆಂಗಳೂರು: ಕಿಮ್ಸ್ ಸೇರಿದಂತೆ ಒಕ್ಕಲಿಗರ ಸಂಘದ ಅಧೀನದಲ್ಲಿರುವ ಎಲ್ಲಾ 18 ವಿದ್ಯಾಸಂಸ್ಥೆಗಳಲ್ಲಿ ಬೋಧಕೇತರ ಸಿಬ್ಬಂದಿಯನ್ನು ಅನಗತ್ಯವಾಗಿ ನೇಮಕ ಮಾಡಿಕೊಳ್ಳಲಾಗುತ್ತಿದೆ’ ಎಂದು ವೈದ್ಯರು ನಡೆಸುತ್ತಿರುವ ಪ್ರತಿಭಟನೆ ದಿನೇ ದಿನೇ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದು 5ನೇ ದಿನವೂ ಒಪಿಡಿ ಮುಚ್ಚಿದೆ.
2014 ರಿಂದೀಚೆಗೆ ಕಾನೂನು ಬಾಹಿರವಾಗಿ ನೇಮಕವಾಗಿರುವ ಅಧಿಕ ಸಂಖ್ಯೆಯ ಸಿಬ್ಬಂದಿಯನ್ನು ತೆಗೆದು ಹಾಕಬೇಕು. 200 ಹುದ್ದೆಗಳಿಗೆ 670 ಸಿಬ್ಬಂದಿಯನ್ನು ರಾಜ್ಯ ಒಕ್ಕಲಿಗರ ಸಂಘ ನೇಮಿಸಿಕೊಂಡಿದೆ ಎಂದು ರಾಜ್ಯ ಒಕ್ಕಲಿಗರ ಸಂಘ ಸಿಬ್ಬಂದಿ ಅಸೋಸಿಯೇಷನ್ ಅಧ್ಯಕ್ಷ ವಸಂತ್ ಕುಮಾರ್ ಹೇಳಿದ್ದಾರೆ.
ಆಡಳಿತ ಮಂಡಳಿ ಖಾಯಂ ಸಿಬ್ಬಂದಿಗೆ ವೇತನ ನೀಡಲು ಪರದಾಡುತ್ತಿದೆ. ಹೆಚ್ಚಿನ ಸಿಬ್ಬಂದಿ ನೇಮಕ ಮಾಡಿರುವುದೇ ಈ ಎಲ್ಲಾ ಹಣಕಾಸು ಸಮಸ್ಯೆಗೆ ಕಾರಣ ಎಂದು ವಿನೋದ್ ಎಂಬುವರು ಆರೋಪಿಸಿದ್ದಾರೆ
ಪ್ರತಿ ಹುದ್ದೆಗೆ 5 ಲಕ್ಷ ರು ಹಣ ಪಡೆಯಲಾಗಿದೆ ಇದರಿಂದ ಸುಮಾರು 30 ಕೋಟಿ ರು ಹಣ ಸಂಗ್ರಹವಾಗಿದೆ, ಎಂದು ಆರೋಪಿಸಿದ್ದಾರೆ. 2014 ರಿಂದಿಚೇಗೆ ನೇಮಿಸಿಕೊಂಡಿರುವ ಸಿಬ್ಬಂದಿಯನ್ನು ವಜಾ ಮಾಡುವರೆಗೂ ಹೋರಾಟ ಮುಂದುವರಿಸಲಾಗುವುದು ಎಂದು ಹೇಳಿದ್ದಾರೆ,ನಮ್ಮ ಬೇಡಿಕೆ ಈಡೇರದಿದ್ದರೆ ಇನ್ನೂ ಉಗ್ರ ಸ್ವರೂಪದಲ್ಲಿ ಪ್ರತಿಭಟನೆ ಮಾಡುತ್ತೇವೆ’ ಎಂದು ಎಚ್ಚರಿಕೆ ನೀಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


