ರಾಜ್ಯ

ರೈತರ ಆತ್ಮಹತ್ಯೆ ಬೆದರಿಕೆ ತಂತ್ರಗಳನ್ನು ಸರ್ಕಾರ ಸಹಿಸುವುದಿಲ್ಲ: ಸಚಿವ ಡಿಕೆ ಶಿವಕುಮಾರ್ ಎಚ್ಚರಿಕೆ

ರೈತರ ಆತ್ಮಹತ್ಯೆ ಬೆದರಿಕೆಗೆ ತಮ್ಮ ಸರ್ಕಾರ ಹೆದರುವುದಿಲ್ಲ ಎಂದು ಭಾರೀ ನೀರಾವರಿ ಹಾಗೂ ...

ರೈತರ ಆತ್ಮಹತ್ಯೆ ಬೆದರಿಕೆ ತಂತ್ರಗಳನ್ನು ಸರ್ಕಾರ ಸಹಿಸುವುದಿಲ್ಲ: ಸಚಿವ ಡಿಕೆ ಶಿವಕುಮಾರ್ ಎಚ್ಚರಿಕೆ
ಡಿ ಕೆ ಶಿವಕುಮಾರ್
Published On :

ಬೆಂಗಳೂರು:ರೈತರ ಆತ್ಮಹತ್ಯೆ ಬೆದರಿಕೆಗೆ ತಮ್ಮ ಸರ್ಕಾರ ಹೆದರುವುದಿಲ್ಲ ಎಂದು ಭಾರೀ ನೀರಾವರಿ ಹಾಗೂ ವೈದ್ಯಕೀಯ ಶಿಕ್ಷಣ ಖಾತೆ ಸಚಿವ ಡಿ ಕೆ ಶಿವಕುಮಾರ್ ಎಚ್ಚರಿಕೆ ನೀಡಿದ್ದಾರೆ.

ನಂಜನಗೂಡು ತಾಲ್ಲೂಕಿನಲ್ಲಿ ರೈತರೊಬ್ಬರ ಆತ್ಮಹತ್ಯೆ ಯತ್ನವನ್ನು ಬೆದರಿಕೆ ತಂತ್ರ ಎಂದು ಆರೋಪಿಸಿರುವ ಸಚಿವ ಡಿ ಕೆ ಶಿವಕುಮಾರ್, ಸರ್ಕಾರದಿಂದ ಹಣ ಸುಲಿಗೆ ಮಾಡಲು ಯಾರಾದರೂ ಪ್ರಯತ್ನಿಸಿದರೆ ಅಂತವರ ವಿರುದ್ಧ ಕ್ರಮ ತೆಗೆದುಕೊಳ್ಳಲಾಗುವುದು ಎಂದರು.

ಅವ್ಯಾಹತ ಮಳೆಯಿಂದಾಗಿ ಬೆಳೆ ನಾಶವಾಗಿದೆ ಎಂದು ಕಬಿನಿ ಜಲಾಶಯಕ್ಕೆ ಹಾರಿ ಆತ್ಮಹತ್ಯೆ ಮಾಡಿಕೊಳ್ಳಲು ಇತ್ತೀಚೆಗೆ ಭತ್ತ ಬೆಳೆಯುವ ರೈತರೊಬ್ಬರು ಪ್ರಯತ್ನಿಸಿದ್ದರು. ಇದಕ್ಕೆ ಡಿಕೆಶಿ ಪ್ರತಿಕ್ರಿಯೆ ನೀಡಿದ್ದಾರೆ. ಅವರು ನಿನ್ನೆ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಈ ವಿಷಯ ಹೇಳಿದರು.

ಈ ಸಮ್ಮಿಶ್ರ ಸರ್ಕಾರ ರೈತರ ಆತ್ಮಹತ್ಯೆಗೆ ಪ್ರೇರಣೆ ನೀಡುವುದಿಲ್ಲ. ಆತ್ಮಹತ್ಯೆಯ ಬೆದರಿಕೆ ತಂತ್ರಗಳಿಗೆ ಬಗ್ಗುವುದೂ ಇಲ್ಲ. ಬೆದರಿಕೆಯೊಡ್ಡುವ ತಂತ್ರಗಳನ್ನು ಸರ್ಕಾರ ಮನ್ನಿಸುವುದಿಲ್ಲ ಮತ್ತು ಅಂತಹ ಚಟುವಟಿಕೆಗಳಲ್ಲಿ ಯಾರಾದರೂ ತೊಡಗಿದರೆ ಅಂತವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಎಚ್ಚರಿಸಿದರು.

ಈ ವರ್ಷ ರಾಜ್ಯದಲ್ಲಿ ಉತ್ತಮ ಮಳೆಯಾಗಿದೆ. ಅತಿಯಾದ ಮಳೆಯಿಂದ ಬೆಳೆ ನಾಶಗೊಂಡ ರೈತರಿಗೆ ಮುಂದಿನ ದಿನಗಳಲ್ಲಿ ಪರಿಹಾರ ನೀಡಲಾಗುವುದು. ಮುನ್ನೆಚ್ಚರಿಕೆ ಕ್ರಮವಾಗಿ ಕಬಿನಿ ಜಲಾಶಯದಿಂದ 6 ಟಿಎಂಸಿ ಅಡಿ ನೀರನ್ನು ಹೊರಗೆ ಬಿಡಲಾಗಿದೆ ಎಂದರು.

ರೈತರ ಸಾಲ ಮನ್ನಾ ಮಾಡಬೇಕೆಂದು ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರು ಮಾಡುತ್ತಿರುವ ಟೀಕೆಗಳಿಗೆ ಪ್ರತಿಕ್ರಿಯಿಸಿದ ಡಿಕೆಶಿ, ರೈತರ ಸಾಲಮನ್ನಾ ವಿಷಯಕ್ಕೆ ಸ್ವಲ್ಪ ಸಮಯ ಹಿಡಿಯುತ್ತದೆ, ಸ್ವಲ್ಪ ಸಮಯ ತಾಳ್ಮೆಯಿಂದ ಕಾಯಬೇಕು ಎಂದು ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.