ಹಿರಿಯೂರು: ನಿಂತಿದ್ದ ಲಾರಿಗೆ ಕಾರು ಡಿಕ್ಕಿ, ಐವರ ದಾರುಣ ಸಾವು
ನಿಂತಿದ್ದ ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಐವರು ಮೃತಪಟ್ಟ ಘಟನೆ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಜವಗೊಂಡನಹಳ್ಳಿ ...

Published On :
ಹಿರಿಯೂರು: ನಿಂತಿದ್ದ ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಐವರು ಮೃತಪಟ್ಟ ಘಟನೆ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಜವಗೊಂಡನಹಳ್ಳಿ ಬಳಿ ನಡೆದಿದೆ.
ಸದ್ಧಾಂ ಹುಸೇನ್(22), ಸದ್ಧಾಂ(21), ತೌಸಿಫ್ ಅಹಮ್ಮದ್(24), ಶಾರೂಕ್ (20) ಮೃತರು. ಮತ್ತೊಬ್ಬ ಆಸೀಫ್ ಎಂಬಾತ ಚಿತ್ರದುರ್ಗ ಆಸ್ರತ್ರೆಯಲ್ಲಿ ಸಾವನ್ನಪ್ಪಿದ್ದಾನೆ.ನಾಲ್ಕರು ಗಾಯಗೊಂಡಿದ್ದು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಗೋವಾ ಪ್ರವಾಸ ಮುಗಿಸಿದ ಯುವಕರು ತಮಿಳುನಾಡಿಗೆ ಕಾರಿನಲ್ಲಿ ಮರಳುತ್ತಿದ್ದರು. ಬುಧವಾರ ನಸುಕಿನ 1.30ರ ಸುಮಾರಿನಲ್ಲಿ ಈ ಅಪಘಾತ ಸಂಭವಿಸಿದೆ. ಸ್ಥಳಕ್ಕೆ ಹಿರಿಯೂರು ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಮೃತರು ತಮಿಳುನಾಡು ರಾಜ್ಯದ ಮೂಲದವರಾಗಿದ್ದು ಹಿರಿಯೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


