ಹೊಸ ಖಾಸಗಿ ಪಿಯು ಕಾಲೇಜು ಅನುಮೋದನೆ ವಿವಾದ: ತನಿಖೆಗೆ ಸಚಿವರ ಆದೇಶ
ರಾಜ್ಯದಲ್ಲಿ ಹೊಸ ಖಾಸಗಿ ಪದವಿ ಪೂರ್ವ ಕಾಲೇಜುಗಳ ಸ್ಥಾಪನೆಗೆ ಅನುಮೋದನೆ ವಿವಾದಕ್ಕೆ ಸಂಬಂಧಿಸಿದಂತೆ ತನಿಖೆಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎನ್. ಮಹೇಶ್ ಆದೇಶಿಸಿದ್ದಾರೆ.

ಬೆಂಗಳೂರು: ರಾಜ್ಯದಲ್ಲಿ ಹೊಸ ಖಾಸಗಿ ಪದವಿ ಪೂರ್ವ ಕಾಲೇಜುಗಳ ಸ್ಥಾಪನೆಗೆ ಅನುಮೋದನೆ ವಿವಾದಕ್ಕೆ ಸಂಬಂಧಿಸಿದಂತೆ ತನಿಖೆಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎನ್. ಮಹೇಶ್ ಆದೇಶಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಸಚಿವರು, ಶಿಕ್ಷಣ ಇಲಾಖೆ ವಿರುದ್ಧ ಕೇಳಿಬಂದಿರುವ ಎರಡು ಆರೋಪಗಳ ತನಿಖೆಗಾಗಿ ಸಮಿತಿಯನ್ನು ರಚಿಸಲಾಗಿದೆ ಎಂದು ತಿಳಿಸಿದರು.
ನೀತಿ ಸಂಹಿತೆ ಉಲ್ಲಂಘಿಸಿ ಖಾಸಗಿ ಕಾಲೇಜುಗಳ ಸ್ಥಾಪನೆಗೆ ಅನುಮೋದನೆ ನೀಡಿರುವುದು ಒಂದು ಆರೋಪವಾದರೆ, ಸರ್ಕಾರಿ ಕಾಲೇಜುಗಳ ಮೂರು ಕಿಲೋ ಮೀಟರ್ ವ್ಯಾಪ್ತಿಯಲ್ಲಿ ಖಾಸಗಿ ಕಾಲೇಜುಗಳ ಸ್ಥಾಪನೆಗೆ ಅನುಮೋದನೆ ನೀಡಬಾರದು ಎಂಬ ನಿಯಮವನ್ನು ಉಲ್ಲಂಘಿಸಿರುವುದು ಮತ್ತೊಂದು ಆರೋಪವಾಗಿದೆ.
ಆದಾಗ್ಯೂ, ಬಾಹ್ಯಾವಾಗಿ ತನಿಖೆ ನಡೆಸಲಾಗುತ್ತದೆಯೇ ಅಥವಾ ಆತಂಕರಿಕ ಏಜೆನ್ಸಿಯಿಂದ ತನಿಖೆ ನಡೆಯುತ್ತದೆಯೇ ಎಂಬ ಬಗ್ಗೆ ಸಚಿವರು ಸ್ಪಷ್ಪಪಡಿಸಿಲ್ಲ. ತನಿಖೆ ಮಾದರಿಯನ್ನು ಶೀಘ್ರದಲ್ಲಿಯೇ ನಿರ್ಧಾರ ಮಾಡಲಾಗುವುದು ಎಂದು ಅವರು ಹೇಳಿದ್ದಾರೆ.ಬಾಹ್ಯ ತನಿಖೆಗೆ ಒಪ್ಪಿಕೊಳ್ಳುತ್ತೇನೆ ಆದರೆ, ಸಮಿತಿ ಮುಂದೆ ಕಾನೂನು ಮತ್ತು ನಿಯಮಗಳನ್ನು ಗಮನಿಸಬೇಕಾಗಿದೆ ಎಂದರು.
84 ಹೊಸ ಪದವಿ ಪೂರ್ವ ಕಾಲೇಜುಗಳ ಸ್ಥಾಪನೆಗೆ ಅನುಮೋದನೆ ನೀಡಲಾಗಿದ್ದು, ಸರ್ಕಾರದ ಮಟ್ಟದಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ವಿಧಾನಪರಿಷತ್ ಸದಸ್ಯ ಅರುಣ್ ಶಹಾಪೂರ ಆರೋಪಿಸಿದ್ದರು.
ಮೂಲಸೌಕರ್ಯ ಕೊರತೆ ಹಾಗೂ ನಿಯಮ ಉಲ್ಲಂಘನೆ ಹಿನ್ನೆಲೆಯಲ್ಲಿ 84 ಕಾಲೇಜುಗಳ ಸ್ಥಾಪನೆಗೆ ಪದವಿ ಪೂರ್ವ ಶಿಕ್ಷಣ ಇಲಾಖೆಯ ನಿರ್ದೇಶಕರು ಅನುಮೋದನೆ ನೀಡಿರಲಿಲ್ಲ. ಆದರೆ, ವಿಧಾನಪರಿಷತ್ ಚುನಾವಣೆ ಸಂದರ್ಭದಲ್ಲಿ ನೀತಿ ಸಂಹಿತೆ ಉಲ್ಲಂಘಿಸಿ ಪ್ರಧಾನ ಕಾರ್ಯದರ್ಶಿ ಆದೇಶ ಮೇರೆಗೆ ಅನುಮೋದನೆ ನೀಡಲಾಗಿದೆ ಎಂದು ಶಹಾಪೂರ ಆರೋಪಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


