ರಾಜ್ಯ

ಕ್ರಿಕೆಟ್ ಪಂದ್ಯದ ವೇಳೆ ಯುವಕನ ಕೊಲೆ, ಆರು ಆರೋಪಿಗಳ ಬಂಧನ

ಕ್ರಿಕೆಟ್ ಪಂದ್ಯದ ವೇಳೆ ಉಂಟಾದ ಜಗಳದಿಂದ ಯುವಕನೊಬ್ಬನನ್ನು ಕೊಲೆ ಮಾಡಿ ತಲೆಮರೆಸಿಕೊಂಡಿದ್ದ ಆರು ಆರೋಪಿಗಳನ್ನು ಮಹಾಲಕ್ಷ್ಮಿ ಲೇಔಟ್ ಪೊಲೀಸರು ಬಂಧಿಸಿದ್ದಾರೆ.

ಕ್ರಿಕೆಟ್ ಪಂದ್ಯದ ವೇಳೆ ಯುವಕನ ಕೊಲೆ,  ಆರು ಆರೋಪಿಗಳ  ಬಂಧನ
ಸಾಂದರ್ಭಿಕ ಚಿತ್ರ
Published On :
ಬೆಂಗಳೂರು: ಕ್ರಿಕೆಟ್ ಪಂದ್ಯದ ವೇಳೆ  ಉಂಟಾದ ಜಗಳದಿಂದ ಯುವಕನೊಬ್ಬನನ್ನು ಕೊಲೆ ಮಾಡಿ ತಲೆಮರೆಸಿಕೊಂಡಿದ್ದ  ಆರು ಆರೋಪಿಗಳನ್ನು ಮಹಾಲಕ್ಷ್ಮಿ ಲೇಔಟ್ ಪೊಲೀಸರು  ಬಂಧಿಸಿದ್ದಾರೆ.
ಶಿವಾಜಿ (30) ಪುನೀತ್ ( 23)  ವಿನೋದ್ (30)  ಭರತ್ ( 22) ಚೇತನ್ ( 23 ) ಮತ್ತು ಭಾಸ್ಕರ್ (23) ಬಂಧಿತ ಆರೋಪಿಗಳು. ಇವರೆಲ್ಲರೂ ಮಹಾಲಕ್ಷ್ಮಿ ಲೇಔಟ್ ಹಾಗೂ ನಂದಿನಿ ಲೇಔಟ್ ನ ನಿವಾಸಿಯಾಗಿದ್ದಾರೆ.
ಕಮಲಾನಗರದ 22 ವರ್ಷದ  ಯುವಕ ಮಣಿಕಾಂತ್  ನನ್ನು ಕೊಲೆ ಮಾಡಿದ್ದರು.
ಗೆಳೆಯರ ಬಳಗ ಸ್ಕೆಟಿಂಗ್ ಮೈದಾನದಲ್ಲಿ ಕ್ರಿಕೆಟ್ ಪಂದ್ಯ ಆಡುವಾಗ ಮಣಿಕಾಂತ್ ಹಾಗೂ ಶಿವಾಜಿ ನಡುವೆ ಜಗಳ ನಡೆದಿತ್ತು. ನಂತರ   ಶಿವಾಜಿ ತನ್ನ ಗೆಳೆಯರೊಂದಿಗೆ ಜೆ, ಸಿ. ನಗರಕ್ಕೆ ಹೋಗಿ ಮಣಿಕಾಂತನನ್ನು ಹುಡುಕಿ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಕೊಲೆ ಮಾಡಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.