ಬಿಜಿಎಸ್ ಆಸ್ಪತ್ರೆಗೆ ಸಿದ್ದಗಂಗಾ ಶ್ರೀಗಳು ದಾಖಲು: ಸಿಎಂ ಭೇಟಿ ಆರೋಗ್ಯ ವಿಚಾರಣೆ
ಸಿದ್ಧಗಂಗಾಮಠದ ಡಾ.ಶಿವಕುಮಾರ ಸ್ವಾಮೀಜಿ ಅವರು ಗುರುವಾರ ಬೆಳಿಗ್ಗೆ ಸಾಮಾನ್ಯ ಆರೋಗ್ಯ ತಪಾಸಣೆಗೆ ಬೆಂಗಳೂರಿನ ಬಿಜಿಎಸ್ ಆಸ್ಪತ್ರೆಗೆ ಆಗಮಿಸಿದ್ದಾರೆ...

Published On :
ಬೆಂಗಳೂರು: ಸಿದ್ಧಗಂಗಾಮಠದ ಡಾ.ಶಿವಕುಮಾರ ಸ್ವಾಮೀಜಿ ಅವರು ಗುರುವಾರ ಬೆಳಿಗ್ಗೆ ಸಾಮಾನ್ಯ ಆರೋಗ್ಯ ತಪಾಸಣೆಗೆ ಬೆಂಗಳೂರಿನ ಬಿಜಿಎಸ್ ಆಸ್ಪತ್ರೆಗೆ ಆಗಮಿಸಿದ್ದಾರೆ.
ಸ್ವಾಮೀಜಿಯವರು ಆರೋಗ್ಯವಾಗಿದ್ದಾರೆ. ಈ ಹಿಂದೆ ಸ್ಟಂಟ್ ಅಳವಡಿಸಿರುವುದರಿಂದ ವೈದ್ಯರ ಸಲಹೆ ಮೇರೆಗೆ ಸಾಮಾನ್ಯ ಆರೋಗ್ಯ ತಪಾಸಣೆಗೆ ತೆರಳಿದ್ದಾರೆ ಎಂದು ಮಠದ ಮೂಲಗಳು ತಿಳಿಸಿವೆ.
ಇನ್ನೂ ಶ್ರೀಗಳು ಆಸ್ಪತ್ರೆಗೆ ದಾಖಲಾಗಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಕುಮಾರ ಸ್ವಾಮಿ ಬಿಜಿಎಸ್ ಆಸ್ಪತ್ರೆಗೆ ತೆರಳಿ ಶ್ರೀಗಳ ಆರೋಗ್ಯ ವಿಚಾರಿಸಿದ್ದಾರೆ.
ಶ್ರೀಗಳಿಗೆ ಯಾವುದೇ ತೊಂದರೆಯಿಲ್ಲ, ನಿಯಮಿತ ಆರೋಗ್ಯ ತಪಾಸಣೆಗಾಗಿ ಆಸ್ಪತ್ರೆಗೆ ಬಂದಿದ್ದಾರೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
BGS Hospitalಆರೋಗ್ಯ ತಪಾಸಣೆಎಚ್.ಡಿ ಕುಮಾರ ಸ್ವಾಮಿH.D Kumara swamyಸಿದ್ದಗಂಗಾ ಶ್ರೀHealth CheckupSiddaganga Shriಬಿಜಎಸ್ ಆಸ್ಪತ್ರೆ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


