ನಮ್ಮ ಮೆಟ್ರೋ ಪ್ರಯಾಣಿಕರಿಗೆ ಸಿಹಿ ಸುದ್ದಿ: ನೇರಳೆ ಮಾರ್ಗದಲ್ಲಿ 6 ಬೋಗಿಗಳ ರೈಲಿಗೆ ಚಾಲನೆ
ಮೆಟ್ರೋ ಪ್ರಯಾಣಿಕರ ಬಹುದಿನಗಳ ಕನಸು ನನಸಾಗಿದ್ದು ನೇರಳೆ ಮಾರ್ಗದಲ್ಲಿ ಸಂಚರಿಸುವ ರೈಲಿಗೆ ಹೆಚ್ಚುವರಿಯಾಗಿ ಮೂರು ಬೋಗಿಗಳನ್ನು ಅಳವಡಿಸಿದ್ದು...

Published On :
ಬೆಂಗಳೂರು: ಮೆಟ್ರೋ ಪ್ರಯಾಣಿಕರ ಬಹುದಿನಗಳ ಕನಸು ನನಸಾಗಿದ್ದು ನೇರಳೆ ಮಾರ್ಗದಲ್ಲಿ ಸಂಚರಿಸುವ ರೈಲಿಗೆ ಹೆಚ್ಚುವರಿಯಾಗಿ ಮೂರು ಬೋಗಿಗಳನ್ನು ಅಳವಡಿಸಿದ್ದು ಈ ರೈಲಿಗೆ ಬೈಯಪ್ಪನಹಳ್ಳಿಯಿಂದ ಚಾಲನೆ ನೀಡಲಾಗಿದೆ.
ಪಿಕ್ ಟೈಂನಲ್ಲಿ ಮೆಟ್ರೋ ಪ್ರಯಾಣ ದುಸ್ತರವಾಗಿತ್ತು. ಹೆಚ್ಚು ಸಂಖ್ಯೆಯಲ್ಲಿ ಜನರು ಪ್ರಯಾಣ ಮಾಡುತ್ತಿದ್ದರಿಂದ ಪ್ರಯಾಣಿಕರು ಕಿರಿಕಿರಿ ಅನುಭವಿಸಬೇಕಿತ್ತು. ಈ ಎಲ್ಲಾ ಸಮಸ್ಯೆಗಳಿಗೆ ಕಂಚ ಪರಿಹಾರ ಸಿಕ್ಕಿದ್ದು ನೇರಳೆ ಮಾರ್ಗದಲ್ಲಿ ಆರು ಬೋಗಿಗಳ ಮೆಟ್ರೋ ರೈಲು ಸಂಚಾರ ಆರಂಭಿಸಲಿದೆ.
ಬೈಯಪ್ಪನಹಳ್ಳಿ ನಾಯಂಡಹಳ್ಳಿವರೆಗೂ ಆರು ಬೋಗಿಗಳು ಮೆಟ್ರೋ ರೈಲಿಗೆ ಕೇಂದ್ರ ನಗರಾಭಿವೃದ್ಧಿ ಸಚಿವ ಹರ್ದೀಪ್ ಸಿಂಗ್ ಪುರಿ ಅವರು ಚಾಲನೆ ನೀಡಿದರು. ಈ ವೇಳೆ ಮುಖ್ಯಮಂತ್ರಿ ಕುಮಾರಸ್ವಾಮಿ ಹಾಗೂ ಉಪಮುಖ್ಯಮಂತ್ರಿ ಡಾ.ಜಿ ಪರಮೇಶ್ವರ್ ಅವರು ಬೈಯಪ್ಪನಹಳ್ಳಿಯಿಂದ ಮೆಜೆಸ್ಟಿಕ್ ವರೆಗೂ ಸಂಚಾರ ಮಾಡಿದರು.
ಮೊದಲಿಗೆ ಮೂರು ಬೋಗಿಗಳಲ್ಲಿ 900 ಮಂದಿ ಮಾತ್ರ ಪ್ರಯಾಣಿಸಬಹುದಿತ್ತು. ಇದೀಗ ಮೂರು ಬೋಗಿಗಳನ್ನು ಹೆಚ್ಚುವರಿಯಾಗಿ ಜೋಡಿಸಿರುವುದರಿಂದ ಒಟ್ಟಾರೆ 1800 ಪ್ರಯಾಣಿಕರು ಏಕಕಾಲಕ್ಕೆ ಪ್ರಯಾಣ ಮಾಡಬಹುದು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


