ಪ್ರಯಾಣ ದರ ಹೆಚ್ಚಳದಿಂದ ಮೆಟ್ರೋ ಕಾರ್ಯಕ್ಷಮತೆಗೆ ನೆರವು- ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ
ಮೆಟ್ರೋ ರೈಲು ಪ್ರಯಾಣ ದರವನ್ನು ಕೇಂದ್ರ ವಸತಿ ಮತ್ತು ನಗರಾಭಿವೃದ್ದಿ ಸಚಿವ ಹರ್ದೀಪ್ ಸಿಂಗ್ ಪುರಿ ಸಮರ್ಥಿಸಿಕೊಂಡಿದ್ದು, ಪ್ರಯಾಣದರ ಹೆಚ್ಚಳದಿಂದ ಸಾರ್ವಜನಿಕ ಸಂಚಾರ ವ್ಯವಸ್ಥೆ ಕಾರ್ಯಕ್ಷಮತೆ ಹಾಗೂ ಸುರಕ್ಷತೆಗೆ ನೆರವಾಗಲಿದೆ ಎಂದು ಅವರು ಹೇಳಿದ್ದಾರೆ.

Published On :
ಬೆಂಗಳೂರು: ಮೆಟ್ರೋ ರೈಲು ಪ್ರಯಾಣ ದರವನ್ನು ಕೇಂದ್ರ ವಸತಿ ಮತ್ತು ನಗರಾಭಿವೃದ್ದಿ ಸಚಿವ ಹರ್ದೀಪ್ ಸಿಂಗ್ ಪುರಿ ಸಮರ್ಥಿಸಿಕೊಂಡಿದ್ದು, ಪ್ರಯಾಣದರ ಹೆಚ್ಚಳದಿಂದ ಸಾರ್ವಜನಿಕ ಸಂಚಾರ ವ್ಯವಸ್ಥೆ ಕಾರ್ಯಕ್ಷಮತೆ ಹಾಗೂ ಸುರಕ್ಷತೆಗೆ ನೆರವಾಗಲಿದೆ ಎಂದು ಅವರು ಹೇಳಿದ್ದಾರೆ.
ಮೆಟ್ರೋ ರೈಲಿಗೆ ಆರು ಕಾರು ಅಳವಡಿಕೆ ಕಾರ್ಯಕ್ರಮದ ಅಂಗವಾಗಿ ಕೆಂಪೇಗೌಡ ನಿಲ್ದಾಣದಲ್ಲಿ ಆಯೋಜಿಸಿದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ದೇಶದಲ್ಲಿನ ಮೆಟ್ರೋ ಸೇವೆ ವಿಶ್ವ ಗುಣಮಟ್ಟದ ಸೌಕರ್ಯಗಳನ್ನು ಹೊಂದಿರುವುದಾಗಿ ತಿಳಿಸಿದರು.
280 ಕಿಲೋ ಮೀಟರ್ ದೂರ ವ್ಯಾಪಿಸಿರುವ ದೆಹಲಿ ಮೆಟ್ರೋ ಇಡೀ ವಿಶ್ವದಲ್ಲಿಯೇ ನಾಲ್ಕನೇಯದಾಗಿದೆ . ಬೆಂಗಳೂರಿನಲ್ಲಿ ಮೆಟ್ರೋ ರೈಲಿನಲ್ಲಿ ಸಂಚರಿಸಲು ಪ್ರಯಾಣಿಕರ ಸಂಖ್ಯೆ 2 ಲಕ್ಷಕ್ಕಿಂತಲೂ ಹೆಚ್ಚಿದೆ ಎಂದರು.
ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಮಾತನಾಡಿ, ಮೆಟ್ರೋ ಎರಡನೇ ಹಂತ ಪೂರ್ಣಗೊಂಡ ಬಳಿಕ ರೈಲಿನಲ್ಲಿ ಸಂಚರಿಸುವ ಪ್ರಯಾಣಿಕರ ಸಂಖ್ಯೆ 20 ಲಕ್ಷ ದಾಟಲಿದೆ ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಬೆಂಗಳೂರುBengaluruMetroಮೆಟ್ರೋದರ ಹೆಚ್ಚಳfare hikeUnion Minister Hardeep Singh Puriಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


