ಶೇ.4ರಷ್ಟು ಸರ್ಕಾರಿ ನೌಕರರ ವರ್ಗಾವಣೆಗೆ ಸಂಪುಟ ನಿರ್ಧಾರ; ಪ್ರಕ್ರಿಯೆ ಜುಲೈ ಅಂತ್ಯಕ್ಕೆ ಪೂರ್ಣ
ಜುಲೈ ಅಂತ್ಯದೊಳಗೆ ಶೇ. 4 ರಷ್ಟು ಮಂದಿ ಸರ್ಕಾರಿ ಅಧಿಕಾರಿಗಳ ವರ್ಗಾವಣೆ ಮಾಡಲು ರಾಜ್ಯ ಸಮ್ಮಿಶ್ರ ಸರ್ಕಾರದ ಸಚಿವ ಸಂಪುಟ ಸಭೆ ನಿರ್ಧರಿಸಿದೆ. ...

Published On :
ಬೆಂಗಳೂರು: ಜುಲೈ ಅಂತ್ಯದೊಳಗೆ ಶೇ. 4 ರಷ್ಟು ಮಂದಿ ಸರ್ಕಾರಿ ಅಧಿಕಾರಿಗಳ ವರ್ಗಾವಣೆ ಮಾಡಲು ರಾಜ್ಯ ಸಮ್ಮಿಶ್ರ ಸರ್ಕಾರದ ಸಚಿವ ಸಂಪುಟ ಸಭೆ ನಿರ್ಧರಿಸಿದೆ.
ವಿಧಾನಸಭೆ ಚುನಾವಣೆ, ಸರ್ಕಾರ ರಚನೆ ಗೊಂದಲದಿಂದಾಗಿ ಈ ಬಾರಿ ವಿಳಂಬವಾಗಿದ್ದ ಸರ್ಕಾರಿ ನೌಕರರ ವರ್ಗಾವಣೆಗೆ ಚಾಲನೆ ಸಿಕ್ಕಿದೆ. ತಕ್ಷಣದಿಂದಲೇ ವರ್ಗಾವಣೆ ಪ್ರಕ್ರಿಯೆ ಆರಂಭಿಸಿ ಜುಲೈ 31ರೊಳಗೆ ಪೂರ್ಣಗೊಳಿಸಬೇಕು ಎಂದು ನಿರ್ಧಾರ ಕೈಗೊಳ್ಳಲಾಗಿದೆ.
ರಾಜ್ಯದಲ್ಲಿ 2013ರಿಂದ ಜಾರಿಯಲ್ಲಿರುವ ವರ್ಗಾವಣೆ ಮಾರ್ಗಸೂಚಿಯಂತೆ ಈ ಬಾರಿಯೂ ವರ್ಗಾವಣೆ ನಡೆಯಲಿದೆ. ಆದರೆ, ಮಾರ್ಗಸೂಚಿಯಲ್ಲಿರುವ ವರ್ಗಾವಣೆ ಮಿತಿಯನ್ನು ಒಟ್ಟು ಇರುವ ಹುದ್ದೆಗಳ ಶೇ. 6ರ ಬದಲು ಶೇ.4ಕ್ಕೆ ಇಳಿಸಲಾಗಿದೆ.
ಹೊಸ ಸರ್ಕಾರ ಅಧಿಕಾರಕ್ಕೆ ಬಂದಿರುವುದರಿಂದ ಭಾರೀ ಪ್ರಮಾಣದಲ್ಲಿ ವರ್ಗಾವಣೆ ಬೇಡ. ಆದರೆ, ವರ್ಗಾವಣೆ ನಿರೀಕ್ಷೆಯಲ್ಲಿದ್ದ ನೌಕರರಿಗೆ ನಿರಾಶೆ ಉಂಟಾಗಬಾರದು ಮತ್ತು ಅಗತ್ಯ ಇರುವವರಿಗೆ ಅನ್ಯಾಯ ಆಗಬಾರದು ಎಂಬ ಕಾರಣಕ್ಕೆ ವರ್ಗಾವಣೆ ಪ್ರಮಾಣವನ್ನು ಈ ಬಾರಿ ಶೇ. 6ರಿಂದ ಶೇ. 4ಕ್ಕೆ ಇಳಿಸಿ ಪ್ರಕ್ರಿಯೆ ನಡೆಸಲು ತೀರ್ಮಾನಿಸಲಾಗಿದೆ'' ಎಂದು ಹೇಳಿದರು.
ಸಾರ್ವತ್ರಿಕ ವರ್ಗಾವಣೆಗಳನ್ನು ಪ್ರತಿ ವರ್ಷ ಮೇ ಮತ್ತು ಜೂನ್ ತಿಂಗಳಲ್ಲಿ ಮಾಡಬೇಕು ಎಂಬ ನಿಯಮ ಇದೆಯಾದರೂ ಈ ಬಾರಿ ವಿಧಾನಸಭೆ ಚುನಾವಣೆ, ನಂತರ ಸರ್ಕಾರ ರಚನೆಯಲ್ಲಿ ಉಂಟಾದ ಗೊಂದಲದಿಂದಾಗಿ ಇದುವರೆಗೆ ವರ್ಗಾವಣೆಗೆ ಅವಕಾಶ ನೀಡಿರಲಿಲ್ಲ. ಈ ಮಧ್ಯೆ ಚುನಾವಣಾ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದ ಅಧಿಕಾರಿಗಳು ಮತ್ತೆ ಮಾತೃಸಂಸ್ಥೆಯಲ್ಲಿ ಕೆಲಸ ಆರಂಭಿಸಬೇಕಿತ್ತು. ಈ ಎಲ್ಲಾ ಕಾರಣಗಳಿಂದಾಗಿ ವಿಳಂಬವಾದ ವರ್ಗಾವಣೆ ಪ್ರಕ್ರಿಯೆಯನ್ನು ಇದೀಗ ಆರಂಭಿಸಲಾಗುತ್ತಿದೆ ಎಂದು ತಿಳಿಸಿದರು.
ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್‌ಬಿಮಾ ಯೋಜನೆಯಡಿ 2018-19 ರ ಆರ್ಥಿಕ ವರ್ಷಕ್ಕೆ ರಾಜ್ಯದ ಪಾಲಿನ 655 ಕೋಟಿ ರೂ. ಒದಗಿಸಲು ಸಚಿವ ಸಂಪುಟ ಸಭೆ ಅನುಮೋದನೆ ನೀಡಿದ್ದ್ದು, ರೈತರ ಸಾಲ ಮನ್ನಾ ಸಂಬಂಧ ಚರ್ಚೆಯಾಗಿಲ್ಲ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


