ಟಿಪ್ಪು ಬದಲು ಹಜ್ ಭವನಕ್ಕೆ ಅಬ್ದುಲ್ ಕಲಾಂ ಹೆಸರಿಡಲಿ: ಯಡಿಯೂರಪ್ಪ
ಹಜ್ ಭವನಕ್ಕೆ ಟಿಪ್ಪು ಸುಲ್ತಾನ್ ಘರ್ ಎಂಬ ಹೆಸರಿಡುವ ಬದಲು ಮಾಜಿ ರಾಷ್ಟ್ರಪತಿ ದಿವಂಗತ ಎಪಿಜೆ ಅಬ್ದುಲ್ ಕಲಾಂ ಹೆಸರಿಡಲಿ ಎಂದು ಮಾಜಿ ಸಿಎಂ ಬಿ.ಎಸ್ ...

Published On :
ಬೆಂಗಳೂರು: ಹಜ್ ಭವನಕ್ಕೆ ಟಿಪ್ಪು ಸುಲ್ತಾನ್ ಘರ್ ಎಂಬ ಹೆಸರಿಡುವ ಬದಲು ಮಾಜಿ ರಾಷ್ಟ್ರಪತಿ ದಿವಂಗತ ಎಪಿಜೆ ಅಬ್ದುಲ್ ಕಲಾಂ ಹೆಸರಿಡಲಿ ಎಂದು ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಸಲಹೆ ನೀಡಿದ್ದಾರೆ.
ಹಜ್ ಭವನಕ್ಕೆ ಟಿಪು ಸುಲ್ತಾನ್ ಹೆಸರಿಡುವಂತೆ ಪ್ರಸ್ತಾವನೆ ಬಂದಿದೆ ಎಂದು ಸಚಿವ ಜಮೀರ್ ಖಾನ್ ಹೇಳಿಕೆ ಪ್ರತಿಕ್ರಿಯಿಸಿರುವ ಯಡಿಯೂರಪ್ಪ ಈ ಸಂಬಂದ ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿಗಳೊಂದಿಗೆ ಮಾತನಾಡುವುದಾಗಿ ಹೇಳಿದ್ದಾರೆ.
ಹಜ್ ಭವನಕ್ಕೆ ಟಿಪ್ಪು ಸುಲ್ತಾನ್ ಹೆಸರು ನಾಮಕರಣ ಮಾಡುವ ಪ್ರಸ್ತಾವನೆ ಬಂದಿದೆ. ಈ ಸಂಬಂಧ ಸಿಎಂ ಕುಮಾರ ಸ್ವಾಮಿ ಹಾಗೂ ಹಿರಿಯ ಕಾಂಗ್ರೆಸ್ ಮುಖಂಡರ ಜೊತೆ ಚರ್ಚಿಸಬೇಕು ಎಂದು ಜಮೀರ್ ಹೇಳಿದ್ದರು. ಇದೊಂದು ಸ್ವತಂತ್ರ್ಯ ಸಂಸ್ಥೆಯಾಗಿದ್ದು, ಟಿಪ್ಪು ಹೆಸರಿಡಬೇಕೆಂಬ ಪ್ರಸ್ತಾವನೆ ಬಂದಿದೆ. ಟಿಪ್ಪು ಸುಲ್ತಾನ್ ಘರ್ ಎಂದು ಹೆಸರಿಡುವುದರಿಂದ ಯಾವುದೇ ತಪ್ಪಿಲ್ಲ ಎಂದು ಜಮೀರ್ ಹೇಳಿದ್ದರು. ಇದಕ್ಕೆ ಬಿಜೆಪಿ ತೀವ್ರ ವಿರೋಧ ವ್ಯಕ್ತ ಪಡಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


