ಕಾವೇರಿ ವಿವಾದ: ಕೇಂದ್ರ ಸರ್ಕಾರ ಏಕಮುಖ ನಿರ್ಧಾರ ಕೈಗೊಂಡಿದೆ; ಡಿಕೆ.ಶಿವಕುಮಾರ್
ಕೇಂದ್ರ ಸರ್ಕಾರ ರಚಿಸಿರುವ ಕಾವೇರಿ ನಿರ್ವಹಣಾ ಸಮಿತಿಯ ಬಗ್ಗೆ ರಾಜ್ಯ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಅವರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ...

Published On :
ಹುಬ್ಬಳ್ಳಿ: ಕೇಂದ್ರ ಸರ್ಕಾರ ರಚಿಸಿರುವ ಕಾವೇರಿ ನಿರ್ವಹಣಾ ಸಮಿತಿಯ ಬಗ್ಗೆ ರಾಜ್ಯ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಅವರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಕಾವೇರಿ ನದಿ ನೀರು ಹಂಚಿಕೆ ಸಂಬಂಧ ಕಾವೇರಿ ಜಲ ನಿರ್ವಹಣಾ ಪ್ರಾಧಿಕಾರ ಹಾಗೂ ಕಾವೇರಿ ನೀರು ನಿರ್ವಹಣಾ ಸಮಿತಿ ರಚನೆ ಮಾಡಿರುವ ಕೇಂದ್ರ ಸರ್ಕಾರದ ನಿರ್ಧಾರ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಅವರು, ನೆರೆ ರಾಜ್ಯದ ಒತ್ತಡಕ್ಕೆ ಮಣಿದಿರುವ ಕೇಂದ್ರ ಸರ್ಕಾರ ರಾಜ್ಯದ ಹಿತವನ್ನು ಕಡೆಗಣಿಸಿ ಏಕಮುಖ ತೀರ್ಮಾನವನ್ನು ಕೈಗೊಂಡಿದೆ ಎಂದು ಆರೋಪಿಸಿದ್ದಾರೆ.
ನಮಗೆ ರಾಜ್ಯದ ರೈತರ ಹಾಗೂ ಬೆಂಗಳೂರಿನ ಹಿತ ಮುಖ್ಯವಾಗಿದ್ದು, ಕೇಂದ್ರದ ಈ ನಡೆಯ ಬಗ್ಗೆ ಶೀಘ್ರದಲ್ಲಿಯೇ ಚರ್ಚೆ ನಡೆಸಿ ನಮ್ಮ ಮುಂದಿನ ನಡೆಯನ್ನು ತಿಳಿಸುತ್ತೇವೆ ಎಂದು ಹೇಳಿದ್ದಾರೆ.
ಸಮಿತಿ ರಚನೆ ಮಾಡುವಂತೆ ನ್ಯಾಯಾಲಯದ ಆದೇಶಕ್ಕೆ ನಾವು ತಲೆ ಬಾಗುತ್ತೇವೆ. ಆದರೆ, ಸಮಿತಿ ರಚನೆಗೂ ಮುನ್ನ ನಮಗೆ ಮಾಹಿತಿ ನೀಡಬೇಕಿತ್ತು. ಆ ಕೆಲಸವನ್ನು ಕೇಂದ್ರ ಸರ್ಕಾರ ಮಾಡಿಯೇ ಇಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Karnatakaಕರ್ನಾಟಕಕೇಂದ್ರ ಸರ್ಕಾರCentreಡಿಕೆ ಶಿವಕುಮಾರ್ಕಾವೇರಿ ವಿವಾದManagement boardನಿರ್ವಹಣಾ ಮಂಡಳಿDK. Shivakumar Cauvery dispute
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


