ಮಡಿಕೇರಿ: ಸೈನಿಕ ಶಾಲೆ ವಿದ್ಯಾರ್ಥಿ ಅನುಮಾನಾಸ್ಪದ ಸಾವು
ಸೈನಿಕ ಶಾಲೆಯ ವಿದ್ಯಾರ್ಥಿಯೊಬ್ಬ ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟ ಘಟನೆ ಕೊಡಗಿನ ಸೋಮವಾರಪೇಟೆ ತಾಲೂಕಿನ ಕೂಡಿಗೆ ಸೈನಿಕ ಶಾಲೆಯಲ್ಲಿ ನಡೆದಿದೆ.

Published On :
ಮಡಿಕೇರಿ: ಸೈನಿಕ ಶಾಲೆಯ ವಿದ್ಯಾರ್ಥಿಯೊಬ್ಬ ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟ ಘಟನೆ ಕೊಡಗಿನ ಸೋಮವಾರಪೇಟೆ ತಾಲೂಕಿನ ಕೂಡಿಗೆ ಸೈನಿಕ ಶಾಲೆಯಲ್ಲಿ ನಡೆದಿದೆ.
ಮಾದಾಪುರ ಗ್ರಾಮದ ನಿವಾಸಿ ಚಿಂಗಪ್ಪ (14) ಸಾವನ್ನಪ್ಪಿದ್ದು ಈತ ಒಂಭತ್ತನೇ ತರಗತಿ ವ್ಯಾಸಂಗ ಮಾಡುತ್ತಿದ್ದನೆನ್ನಲಾಗಿದೆ. ಈತ ಸೋಮವಾರಪೇಟೆ ತಾಲೂಕಿನ ಮಾದಾಪುರ ಗ್ರಾಮದ ನಿವಾಸಿ ಪೂವಯ್ಯ ಎಂಬವರ ಪುತ್ರನಾಗಿದ್ದು ಶನಿವಾರ ಶಾಲೆಗೆ ತೆರಳಿದ್ದಾಗ ಅಸ್ವಸ್ಥಗೊಂಡು ಸಾವನ್ನಪ್ಪಿದ್ದಾನೆ..
ಅನಾರೋಗ್ಯಕ್ಕೀಡಾದ ಚಿಂಗಪ್ಪ ನನ್ನು ಶಾಲಾ ಸಿಬ್ಬಂದಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ, ಆದರೆ ವೈದ್ಯರು ಪರೀಕ್ಷೆ ನಡೆಸಿ ವಿದ್ಯಾರ್ಥಿ ಸಾವನ್ನಪ್ಪಿದ್ದಾನೆ ಎಂದು ತಿಳಿಸಿದ್ದು ಶಾಲಾ ವಿದ್ಯಾರ್ಥಿಗಳು, ಶಿಕ್ಷಕರಿಗೆ ಆತಂಕಕ್ಕೆ ಕಾರಣವಾಗಿದೆ.
ದಿಢೀರ್ ಪ್ರತಿಭಟನೆ
ವಿದ್ಯಾರ್ಥಿ ಸಾವಿನ ವಿಚಾರ ತಿಳಿಯುತ್ತಿದ್ದಂತೆ ಆತನ ಪೋಷಕರು, ಗ್ರಾಮಸ್ಥರು ಹಾಗೂ ಕೆಲ ಸಂಘಟನೆಗಳು ಆಸ್ಪತ್ರೆ ಎದುರು ದಿಢೀರ್ ಪ್ರತಿಭಟನೆ ನಡೆಸಿದ್ದಾರೆ. ಜಿಲ್ಲಾಧಿಕಾರಿ ಹಾಗೂ ಸೈನಿಕ ಶಾಲೆಯ ಪ್ರಾಂಶುಪಾಲರು ಸ್ಥಳಕ್ಕೆ ಆಗಮಿಸಿ ಘಟನೆಗೆ ಕಾರಣವನ್ನು ಬಹಿರಂಗಪಡಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.
ತನ್ನ ಮಗನನ್ನು ಕೊಲೆ ಮಾಡಲಾಗಿದೆ ಎಂದು ಆರೋಪಿಸಿರುವ ಪೂವಯ್ಯ ಕುಶಾಲನಗರ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
ವಿದ್ಯಾರ್ಥಿಯ ಸಹಪಾಠಿಗಳು ಸ್ನೇಹಿತನನ್ನು ಕಳೆದುಕೊಂಡು ಕಂಬನಿ ಮಿಡಿಯುತ್ತಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
madikeriಮಡಿಕೇರಿSuspicious deathಅನುಮಾನಾಸ್ಪದ ಸಾವುSainik schoolKushalanagara Policeಸೈನಿಕ ಶಾಲೆಕುಶಾಲನಗರ ಪೊಲೀಸ್
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


