ಬೆಳಗಾವಿಯಲ್ಲಿ ಭೀಕರ ರಸ್ತೆ ಅಪಘಾತ: ಬೈಕ್-ಕಾರು ಡಿಕ್ಕಿ, 3 ವಿದ್ಯಾರ್ಥಿಗಳ ದುರ್ಮರಣ
ಬೆಳಗಾವಿಯಲ್ಲಿ ಭೀಕರ ರಸ್ತೆ ಅಪಘಾತವೊಂದು ಸಂಭವಿಸಿದ್ದು, ಬೈಕ್-ಕಾರು ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಮೂವರು ವಿದ್ಯಾರ್ಥಿಗಳು ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಭಾನುವಾರ ನಡೆದಿದೆ...

Published On :
ಬೆಳಗಾವಿ: ಬೆಳಗಾವಿಯಲ್ಲಿ ಭೀಕರ ರಸ್ತೆ ಅಪಘಾತವೊಂದು ಸಂಭವಿಸಿದ್ದು, ಬೈಕ್-ಕಾರು ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಮೂವರು ವಿದ್ಯಾರ್ಥಿಗಳು ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಭಾನುವಾರ ನಡೆದಿದೆ.
ಅಥರ್ವ ಜಾಧವ್ (16), ಹರ್ಷ ಸಾವ್ಗಾವ್ಕರ್ (17) ಮತ್ತು ಅಮನ್ ಕಪಿಲೇಶ್ವರಿ (17) ಮೃತ ದುರ್ದೈವಿಗಳಾಗಿದ್ದಾರೆ.
ಬೆಳಗಾವಿ ಜಿಲ್ಲೆ ನಿವಾಸಿಗಳಾಗಿರುವ ಮೂವರು ವಿದ್ಯಾರ್ಥಿಗಳು ವಿಭಿನ್ನ ಕಾಲೇಜುಗಳಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದರು.
ಮೃತ ವಿದ್ಯಾರ್ಥಿಗಳು ಗಣಿಬೈಲ್ ನಲ್ಲಿರುವ ಭೂತನಾಥ ದೇಗುಲಕ್ಕೆ ಹೋಗಿದ್ದರು. ದರ್ಶನದ ಬಳಿಕ ಮೂವರು ಬೈಕ್ ನಲ್ಲಿ ಹಿಂತಿರುಗುತ್ತಿದ್ದರು. ಬೈಕ್ ನಲ್ಲಿ ಬರುತ್ತಿದ್ದ ವಿದ್ಯಾರ್ಥಿಗಳು ವಿರುದ್ಧ ಕಾರನ್ನು ಓವರ್ ಟೇಕ್ ಮಾಡಲು ಹೋಗಿದ್ದಾರೆ. ಈ ವೇಳೆ ಕಾರು-ಬೈಕ್ ಡಿಕ್ಕಿ ಹೊಡೆದು ಮೂವರು ವಿದ್ಯಾರ್ಥಿಗಳು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ.
ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಘಟನೆ ಬಳಿಕ ಕಾರು ಚಾಲಕ ಪರಾರಿಯಾಗಿದ್ದು, ಕಾರಿನ ಚಾಲಕನಿಗಾಗಿ ಪೊಲೀಸರು ಹುಡುಕಾಟ ಆರಂಭಿಸಿದ್ದಾರೆ.
ಮರಣೋತ್ತರ ಪರೀಕ್ಷೆ ಬಳಿಕ ವಿದ್ಯಾರ್ಥಿಗಳ ಮೃತದೇಹಗಳನ್ನು ಪೊಲೀಸರು ಪೋಷಕರ ವಶಕ್ಕೆ ನೀಡಿದ್ದಾರೆ.
ಬೈಕ್ ನಲ್ಲಿ ಮೂವರು ವ್ಯಕ್ತಿಗಳು ಪ್ರಯಾಣ ಮಾಡುವುದು ಅತ್ಯಂತ ಅಪಾಯಕಾರಿ. ಬೈಕ್ ಚಲಾಯಿಸುವಾಗ ಹಲವು ವಿದ್ಯಾರ್ಥಿಗಳು ರ್ಯಾಶ್ ಡ್ರೈವಿಂಗ್ ಮಾಡುತ್ತಾರೆ. ಇದರಿಂದ ಅಪಘಾತಗಳು ಸಂಭವಿಸುತ್ತವೆ. ವಿದ್ಯಾರ್ಥಿಗಳಿಗೆ ನೀಡುವ ಪೋಷಕರು ಮೊದಲು ಯೋಜನೆ ಮಾಡಬೇಕು ಎಂದು ಪೊಲೀಸ್ ಅಧಿಕಾರಿಗಳು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ವಿದ್ಯಾರ್ಥಿಗಳುCrimeKarnatakaಕರ್ನಾಟಕdiedBelagaviಬೆಳಗಾವಿಅಪಘಾತaccidentStudentsಸಾವುಅಪರಾಧBike-car collisionಬೈಕ್-ಕಾರು ಅಪಘಾತ
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


