ಅರಣ್ಯ ಇಲಾಖೆಗೆ ಹೆಚ್ಚಿನ ಅನುದಾನದ ಅಗತ್ಯವಿದೆ- ಸಚಿವರು
ಕಾಫಿನಾಡು ಕೊಡಗು ಜಿಲ್ಲೆಗೆ ಇಂದು ಭೇಟಿ ನೀಡಿದ ಪರಿಸರ ಮತ್ತು ಅರಣ್ಯ ಸಚಿವ ಆರ್. ಶಂಕರ್ , ಜಿಲ್ಲೆಯಲ್ಲಿ ನಿರಂತರ ತೊಂದರೆಯಾಗಿರುವ ಮಾನವ- ವನ್ಯಜೀವಿ ಸಂಘರ್ಘ ಕುರಿತು ಚರ್ಚೆ ನಡೆಸಿದರು

Published On :
ಕೊಡಗು : ಕಾಫಿನಾಡು ಕೊಡಗು ಜಿಲ್ಲೆಗೆ ಇಂದು ಭೇಟಿ ನೀಡಿದ ಪರಿಸರ ಮತ್ತು ಅರಣ್ಯ ಸಚಿವ ಆರ್. ಶಂಕರ್ , ಜಿಲ್ಲೆಯಲ್ಲಿ ನಿರಂತರ ತೊಂದರೆಯಾಗಿರುವ ಮಾನವ- ವನ್ಯಜೀವಿ ಸಂಘರ್ಘ ಕುರಿತು ಚರ್ಚೆ ನಡೆಸಿದರು.
ಬಳಿಕ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಆನೆ, ಮನುಷ್ಯರ ನಡುವಿನ ಸಂಘರ್ಘ ಹೆಚ್ಚಾಗುತ್ತಿರುವ ವಿಷಯಕ್ಕೆ ಸಂಬಂಧಿಸಿದಂತೆ ಕೊಡಗು ಅರಣ್ಯ ಅಧಿಕಾರಿಗಳೊಂದಿಗೆ ಗಂಭೀರವಾಗಿ ಚರ್ಚೆ ನಡೆಸಿದ್ದೇನೆ. ಹೆಚ್ಚೆಚ್ಚು ರೈಲ್ವೆ ಬ್ಯಾರಿಕೇಡ್ ಅಳವಡಿಕೆ ಬಗ್ಗೆಯೂ ಚರ್ಚೆ ನಡೆಸಲಾಗಿದೆ. 1 ಕಿಲೋ ಮೀಟರ್ ವ್ಯಾಪ್ತಿಯಲ್ಲಿ ಇಂತಹ ಬ್ಯಾರಿಕೇಡ್ ಅಳವಡಿಸಲು 1 ರಿಂದ ಒಂದೂವರೆ ಕೋಟಿ ರೂಪಾಯಿ ವೆಚ್ಚ ಮಾಡಬೇಕಾಗುತ್ತದೆ ಎಂದರು.
ಸೌರ ವಿದ್ಯುತ್ ಬೇಲಿ ವೈಫಲ್ಯ ಕುರಿತು ಬೆಳಕು ಚೆಲ್ಲಿದ ಅವರು, ಹಾಸನ ಜಿಲ್ಲೆಯಲ್ಲಿ ಆನೆಗಳು ಗ್ರಾಮಕ್ಕೆ ಪ್ರವೇಶಿಸದಂತೆ ತಡೆಯಲು ಜೇನು ಮಡಿಕೆ ಅಳವಡಿಕೆಯ ಹೊಸ ತಂತ್ರಜ್ಞಾನ ಅಳವಡಿಸಲಾಗುತ್ತಿದೆ. ಅದನ್ನು ಇಲ್ಲಿಯೂ ಅನುಷ್ಠಾನ ಮಾಡಲಾಗುವುದು ಎಂದರು.
ರಾಜ್ಯದಾದ್ಯಂತ ಮೇವು ಸಸಿಗಳನ್ನು ನೆಡುವ ಸುಮಾರು 10 ಕೋಟಿ ರೂ ವೆಚ್ಚದ ಯೋಜನೆ ಕೈಗೊಳ್ಳಲು ಚಿಂತನೆ ನಡೆಸಲಾಗಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಹಸಿರು ಕ್ರಾಂತಿ ಯೋಜನೆಗೆ ಚಾಲನೆ ನೀಡಲಾಗುವುದು ಎಂದು ತಿಳಿಸಿದರು.
ಅರಣ್ಯ ಇಲಾಖೆ ಬಜೆಟ್ ನಲ್ಲಿ ಸಾಮಾನ್ಯವಾಗಿ ಕಡಿಮೆ ಅನುದಾನ ನೀಡಲಾಗುತ್ತದೆ. ಆದರೆ, ಈ ಬಾರಿಯ ಬಜೆಟ್ ನಲ್ಲಿ ಅರಣ್ಯ ಇಲಾಖೆಗೆ ಹೆಚ್ಚಿನ ಅನುದಾನ ನೀಡುವಂತೆ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಬಳಿ ಮನವಿ ಮಾಡಲಾಗಿದೆ ಎಂದು ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


