ರಾಜ್ಯ

ಗೌರಿ ಲಂಕೇಶ್ ಹತ್ಯೆ ಪ್ರಕರಣ: ವಾಗ್ಮೋರೆಗೆ 2 ದಿನ ನ್ಯಾಯಾಂಗ ಬಂಧನ

ಹಿರಿಯ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ಪರಶುರಾಮ್ ವಾಗ್ಮೋರೆಯನ್ನು 2 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ನೀಡಿ ನಗರದ ಮೂರನೇ ಎಸಿಎಂಎಂ ನ್ಯಾಯಾಲಯ ಸೋಮವಾರ...

ಗೌರಿ ಲಂಕೇಶ್ ಹತ್ಯೆ ಪ್ರಕರಣ: ವಾಗ್ಮೋರೆಗೆ 2 ದಿನ ನ್ಯಾಯಾಂಗ ಬಂಧನ
ಸಂಗ್ರಹ ಚಿತ್ರ
Published On :
ಬೆಂಗಳೂರು: ಹಿರಿಯ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ಪರಶುರಾಮ್ ವಾಗ್ಮೋರೆಯನ್ನು 2 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ನೀಡಿ ನಗರದ ಮೂರನೇ ಎಸಿಎಂಎಂ ನ್ಯಾಯಾಲಯ ಸೋಮವಾರ ಆದೇಶಿಸಿದೆ. 
ಈ ಹಿಂದೆ ಎಸ್ಐಟಿ ಅಧಿಕಾರಿಗಳು ಪಡೆದಿದ್ದ 14 ದಿನಗಳ ಪೊಲೀಸ್ ಕಸ್ಟಡಿ ಅವಧಿ ನಿನ್ನೆ ಅಂತ್ಯವಾದ ಹಿನ್ನಲೆಯಲ್ಲಿ ಆರೋಪಿ ಪರಶುರಾಮ್ ನನ್ನು ಅಧಿಕಾರಿಗಳು ಸೋಮವಾರ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದರು. 
ವಿಚಾರಣೆ ನಡೆಸಿದ ನ್ಯಾಯಾಧೀಶರಾದ ವಿ.ಪ್ರಕಾಶ್ ಅವರು, ಆರೋಪಿಯನ್ನು ನ್ಯಾಯಾಂಗ ವಶಕ್ಕೆ ನೀಡಿ ಆದೇಶಿಸಿದ್ದಾರೆ. 
ಕಳೆದ 14 ದಿನಗಳಿಂದ ಗೌರಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ಅಧಿಕಾರಿಗಳು ಪರಶುರಾಮ್ ನನ್ನು ಸುದೀರ್ಘ ವಿಚಾರಣೆಗೆ ಒಳಪಡಿಸಿ ಹಲವು ಮಾಹಿತಿಗಳನ್ನು ಕಲೆ ಹಾಕಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.