ಸುಳ್ಯದಲ್ಲಿ ಮಹಿಳೆ ಅಪಹರಣ; ಮೂವರು ಕಾಮುಕರಿಂದ ಸಾಮೂಹಿಕ ಅತ್ಯಾಚಾರ
25 ವರ್ಷದ ಮಹಿಳೆಯೊಬ್ಬರನ್ನು ಅಪಹರಣ ಮಾಡಿದ ಕಾಮುಕರ ಗುಂಪೊಂದು ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿರುವ ಘಟನೆಯೊಂದು ಸುಳ್ಯದ ರಬ್ಬರ್ ತೋಟದಲ್ಲಿ ನಡೆದಿದೆ...

Published On :
ಕೋಲಾರ: 25 ವರ್ಷದ ಮಹಿಳೆಯೊಬ್ಬರನ್ನು ಅಪಹರಣ ಮಾಡಿದ ಕಾಮುಕರ ಗುಂಪೊಂದು ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿರುವ ಘಟನೆಯೊಂದು ಸುಳ್ಯದ ರಬ್ಬರ್ ತೋಟದಲ್ಲಿ ನಡೆದಿದೆ.
ಬೀಡಿ ಕಾರ್ಮಿಕಳಾಗಿ ಕಾರ್ಯನಿರ್ವಹಿಸುತ್ತಿದ್ದ ಸಂತ್ರಸ್ತ ಮಹಿಳೆ ಗ್ರಾಮ ಸ್ಥಳೀಯ ಡೈರಿಗಳಿಗೆ ಹಾಲನ್ನು ಪೂರೈಸುತ್ತಿದ್ದರು. ಎಂದಿನಂತೆ ಮಂಗಳವಾರ ಕೂಡ ಮಹಿಳೆ ಡೈರಿಯೊಂದಕ್ಕೆ ಹಾಲನ್ನು ಹಾಕಲು ಹೊರಟಿದ್ದಳು. ಈ ವೇಳೆ ಆಟೋದಲ್ಲಿ ಬಂದಿರುವ ದುಷ್ಕರ್ಮಿಗಳು ಮಹಿಳೆಯನ್ನು ಅಪಹರಿಸಿದ್ದಾರೆ.
ಬಳಿಕ ಯೆನಾರಾ ಬಳಿಯಿರುವ ರಬ್ಬರ್ ತೋಟಕ್ಕೆ ಕರೆದೊಯ್ದು ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರ ಮಾಡಿದ್ದಾರೆ. ಬಳಿಕ ಮಹಿಳೆಯನ್ನು ಆಕೆಯ ಗ್ರಾಮದ ಬಳಿ ಬಿಟ್ಟು ಸ್ಥಳದಿಂದ ಕಾಲ್ಕಿತ್ತಿದ್ದಾರೆ.
ಘಟನೆ ಬಳಿಕ ಮಹಿಳೆಯ ಪೊಲೀಸರಿಗೆ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಇದೀಗ ಓರ್ವ ಆರೋಪಿಯನ್ನು ಗುರ್ತಿಸಿದ್ದಾರೆ. ಪ್ರಕರಣ ಸಂಬಂಧ ತನಿಖೆ ಪ್ರಗತಿಯಲ್ಲಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


