ಶಾಲಾ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆಗೆ ಹೈಕೋರ್ಟ್ ಹಸಿರು ನಿಶಾನೆ
ರಾಜ್ಯಾದ್ಯಂತ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷ ಕರ ವರ್ಗಾವಣೆ ಪ್ರಕ್ರಿಯೆಗೆ ನೀಡಿದ್ದ ತಡೆಯಾಜ್ಞೆಯನ್ನು ಹೈಕೋರ್ಟ್ ಗುರುವಾರ ತೆರವುಗೊಳಿಸಿದ್ದು ...

Published On :
ಬೆಂಗಳೂರು: ರಾಜ್ಯಾದ್ಯಂತ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷ ಕರ ವರ್ಗಾವಣೆ ಪ್ರಕ್ರಿಯೆಗೆ ನೀಡಿದ್ದ ತಡೆಯಾಜ್ಞೆಯನ್ನು ಹೈಕೋರ್ಟ್ ಗುರುವಾರ ತೆರವುಗೊಳಿಸಿದ್ದು ಇದರೊಂದಿಗೆ ಶಿಕ್ಷಕರ ವರ್ಗಾವಣೆಗೆ ಇದ್ದ ಕಾನೂನು ತೊಡಕು ನಿವಾರಣೆಯಾಗಿದೆ.
ಸರಕಾರ ಸಲ್ಲಿಸಿದ್ದ ತಡೆಯಾಜ್ಞೆ ತೆರವು ಕುರಿತ ಮಧ್ಯಾಂತರ ಅರ್ಜಿಯನ್ನು ಮಾನ್ಯ ಮಾಡಿದ ನ್ಯಾ. ಎಚ್.ಜಿ.ರಮೇಶ್ ಮತ್ತು ನ್ಯಾ.ಪಿ.ಎಂ.ನವಾಜ್ ಅವರಿದ್ದ ವಿಭಾಗೀಯ ಪೀಠ ಈ ಆದೇಶ ಹೊರಡಿಸಿದೆ. 2018ರ ಜನವರಿ 1 ಮತ್ತು6 ರಂದು ಶಿಕ್ಷಕಿ ಪ್ರಭಾ ಅಡಿಗಲ್ ಸಲ್ಲಿಸಿದ್ದ ಅರ್ಜಿ ಸಂಬಂಧ ಹೈಕೋರ್ಟ್ ಕಳೆದ ಮೇ 8ರಂದು ಶಿಕ್ಷಕರ ವರ್ಗಾವಣೆ ಪ್ರಕ್ರಿಯೆಗೆ ತಡೆಯಾಜ್ಞೆ ನೀಡಿತ್ತು.
ಕರ್ನಾಟಕ ರಾಜ್ಯ ನಾಗರಿಕ ಸೇವಾ ಶಿಕ್ಷಕರ ವರ್ಗಾವಣೆ ನಿಯಮದ ಪ್ರಕಾರ ಒಂದು ವಲಯದಿಂದ ಇನ್ನೊಂದು ವಲಯಕ್ಕೆ ವರ್ಗಾವಣೆ ಮಾಡುವಂತಿಲ್ಲ. ಆದರೆ, ಸರಕಾರ 2018ರ ಜ.1ರಂದು ಹೊರಡಿಸಿರುವ ಶಿಕ್ಷಕರ ವರ್ಗಾವಣೆ ಮಾರ್ಗಸೂಚಿ ಅನ್ವಯ, ಒಂದು ವಲಯದಿಂದ ಇನ್ನೊಂದು ವಲಯಕ್ಕೆ ವರ್ಗಾವಣೆಗೆ ಅವಕಾಶ ಕಲ್ಪಿಸಲಾಗಿದೆ. ಇದು ಕಾನೂನು ಬಾಹಿರ' ಎಂದು ನ್ಯಾಯಪೀಠಕ್ಕೆ ವಿವರಿಸಲಾಗಿತ್ತು.
ಸರ್ಕಾರದ ಪರ ವಾದ ಮಂಡಿಸಿದ ತಾರಾನಾಥ ಪೂಜಾರಿ, ಸರ್ಕಾರ ಶಿಕ್ಷಕರ ವರ್ಗಾವಣೆ ನಿಯಮ ಸೆಕ್ಷನ್ 5ಕ್ಕೆ 2017ರ ಏ.18ರಂದೇ ತಿದ್ದುಪಡಿ ಮಾಡಿ, ಅಂತರ ವಲಯ ವರ್ಗಾವಣೆಗೆ ಅವಕಾಶ ಕಲ್ಪಿಸಿದೆ. ಹಾಗಾಗಿ ಅರ್ಜಿದಾರರ ವಾದದಲ್ಲಿ ಯಾವುದೇ ಹುರುಳಿಲ್ಲ, ಹಿಂದೆ ನೀಡಿರುವ ತಡೆಯಾಜ್ಞೆಯನ್ನು ತೆರವುಗೊಳಿಸಬೇಕು ಎಂದು ಮನವಿ ಮಾಡಿದರು. ನ್ಯಾಯಾಲಯ ಅವರ ವಾದವನ್ನು ಪುರಸ್ಕರಿಸಿ ತಡೆಯಾಜ್ಞೆ ತೆರವುಗೊಳಿಸಿತಲ್ಲದೆ, ತಿದ್ದುಪಡಿಯನ್ನು ಪ್ರಶ್ನಿಸಲು ಅರ್ಜಿದಾರರಿಗೆ ಅವಕಾಶ ಕಲ್ಪಿಸಿತು.
2017ರ ಏ.18ರಂದು ಆಗಿರುವ ತಿದ್ದುಪಡಿ ಕರ್ನಾಟಕ ಆಡಳಿತ ನ್ಯಾಯಮಂಡಳಿ(ಕೆಎಟಿ) ಮುಂದೆ ವಾದ ಮಂಡಿಸಿದ ವಕೀಲರಿಗೆ ತಿಳಿದಿರಲಿಲ್ಲವೇ? ಹಾಗಿದ್ದರೆ ಅವರು ಏಕೆ ಈ ಅಂಶವನ್ನು ನ್ಯಾಯಾಲಯಕ್ಕೆ ತಿಳಿಸಲಿಲ್ಲ ಎಂದು ತರಾಟೆಗೆ ತೆಗೆದುಕೊಂಡಿತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


