ಸ್ನಾತಕೋತ್ತರ ಪದವಿಗೆ ಆನ್'ಲೈನ್ ಮೂಲಕ ಬೆಂಗಳೂರು ವಿವಿ ಅರ್ಜಿ ಆಹ್ವಾನ
ಸಾಲಿನಲ್ಲಿ ನಿಂತು ಸ್ನಾತಕೋತ್ತರ ಪದವಿಗೆ ಅರ್ಜಿ ಸಲ್ಲಿಸುತ್ತಿದ್ದ ವಿದ್ಯಾರ್ಥಿಗಳಿಗೆ ಕೊಂಚ ನಿರಾಳ ಎದುರಾಗಿತ್ತು, ಆನ್ ಲೈನ್ ಮೂಲಕವೇ ಅರ್ಜಿ ಸಲ್ಲಿಸುವ ಅವಕಾಶವನ್ನು ಬೆಂಗಳೂರು...

Published On :
ಬೆಂಗಳೂರು: ಸಾಲಿನಲ್ಲಿ ನಿಂತು ಸ್ನಾತಕೋತ್ತರ ಪದವಿಗೆ ಅರ್ಜಿ ಸಲ್ಲಿಸುತ್ತಿದ್ದ ವಿದ್ಯಾರ್ಥಿಗಳಿಗೆ ಕೊಂಚ ನಿರಾಳ ಎದುರಾಗಿತ್ತು, ಆನ್ ಲೈನ್ ಮೂಲಕವೇ ಅರ್ಜಿ ಸಲ್ಲಿಸುವ ಅವಕಾಶವನ್ನು ಬೆಂಗಳೂರು ವಿಶ್ವವಿದ್ಯಾಲಯ ಕಲ್ಪಿಸಿದೆ.
ಪಾರದರ್ಶಕತೆಯನ್ನು ಕಾಪಾಡುವ ಸಲುವಾಗಿ ಹಾಗೂ ಅರ್ಜಿ ಸಲ್ಲಿಕೆ ವೇಳೆ ಎದುರಾಗುತ್ತಿದ್ದ ಸಮಸ್ಯೆಗಳನ್ನು ದೂರಾಗಿರುವ ಸಲುವಾಗಿ ವಿಶ್ವವಿದ್ಯಾಲಯ ಕ್ರಮಗಳನ್ನು ಕೈಗೊಂಡಿದ್ದು, ಅರ್ಜಿ ಸಲ್ಲಿಸುವುದರ ಜೊತೆಗೆ ವಿದ್ಯಾರ್ಥಿಗಳ ಹಣ ಪಾವತಿ ಹಾಗೂ ಆಯ್ಕೆ ಪಟ್ಟಿಗಳೂ ಕೂಡ ಆನ್'ಲೈನ್ ನಲ್ಲಿಯೇ ಲಭ್ಯವಾಗಲಿದೆ ಎಂದು ತಿಳಿದುಬಂದಿದೆ.
ಪ್ರಸಕ್ತ ಸಾಲಿನಲ್ಲಿ ಸ್ನಾತಕೋತ್ತರ ಕಾನೂನು ಪದವಿಗಳಿಗೆ ಆನ್ ಲೈನ್ ಪ್ರಕ್ರಿಯೆಗಳನ್ನು ನಡೆಸಲಾಗಿತ್ತು. ಈ ವೇಳೆ ಉತ್ತಮ ಪ್ರತಿಕ್ರಿಯೆಗಳು ವ್ಯಕ್ತವಾಗಿರುವ ಹಿನ್ನಲೆಯಲ್ಲಿ ಎಲ್ಲಾ ಸ್ನಾತಕೋತ್ತರ ಪದವಿಗಳಿಗೂ ಆನ್'ಲೈನ್ ಪ್ರಕ್ರಿಯೆ ಅಳವಡಿಸಿಕೊಳ್ಳಲು ವಿವಿ ಮುಂದಾಗಿದೆ.
ಈ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಬೆಂಗಳೂರು ವಿಶ್ವವಿದ್ಯಾಲಯದ ಉಪ ಕುಲಪತಿ ಪ್ರೊ.ಕೆ.ಆರ್.ವೇಣುಗೋಪಾಲ್ ಅವರು, ಆನ್'ಲೈನ್ ವ್ಯವಸ್ಥೆಯನ್ನು ಸಂಪೂರ್ಣವಾಗಿ ಅಳವಡಿಸಿಕೊಳ್ಳಲು ನಿರ್ಧರಿಸಲಾಗಿದೆ. ತಾಂತ್ರಿಕ ದೋಷಗಳು ಎದುರಾಗಾದ ಆಫ್ ಲೈನ್ ಆಯ್ಕೆಯನ್ನೂ ಕೂಡ ಇರಿಸಿಕೊಳ್ಳಲಾಗಿದೆ. ಆನ್ ಲೈನ್ ವ್ಯವಸ್ಥೆಯನ್ನು ಅಳವಡಿಸಿಕೊಳ್ಳುತ್ತಿರುವುದರಿಂದ ವಿದ್ಯಾರ್ಥಿಗಳಿಗೆ ಯಾವುದೇ ರೀತಿಯ ಸಮಸ್ಯೆಗಳಾಗುವುದಿಲ್ಲ ಎಂಬ ವಿಶ್ವಾಸವಿದೆ ಎಂದು ಹೇಳಿದ್ದಾರೆ.
ಕೆಲ ವರ್ಷಗಳ ಹಿಂದೆಯೇ ಈ ರೀತಿಯ ಪ್ರಯತ್ನಗಳನ್ನು ಮಾಡಲಾಗಿತ್ತು. ಕಾಲೇಜುಗಳ ಸಂಖ್ಯೆ ಹೆಚ್ಚಾಗಿದ್ದರಿಂದಾಗಿ ಇದು ಸಾಧ್ಯವಾಗಿರಲಿಲ್ಲ. ಈ ಬಾರಿ ನಾವು ಸಂಪೂರ್ಣವಾಗಿ ಎಲ್ಲಾ ರೀತಿಯಲ್ಲಿಯೂ ಸಿದ್ಧತೆಗಳನ್ನು ನಡೆಸಲಾಗಿದೆ. ಸ್ನಾತಕೋತ್ತರ ಕಾನೂನು ಪದವಿ ಪ್ರವೇಶದ ವೇಳೆ ಆನ್'ಲೈನ್ ವ್ಯವಸ್ಥೆಯನ್ನು ಅಳವಡಿಸಿಕೊಳ್ಳಲಾಗಿತ್ತು. ಇದಕ್ಕೆ ವಿದ್ಯಾರ್ಥಿಗಳಿಂದ ಉತ್ತಮ ಪ್ರತಿಕ್ರಿಯೆಗಳು ಬಂದಿದ್ದವು. ವಿದ್ಯಾರ್ಥಿಗಳ ಪ್ರತಿಕ್ರಿಯೆಗಳನ್ನು ಪಡೆದ ಬಳಿಕ ನಾವು ಈ ರೀತಿಯ ನಿರ್ಧಾರ ಕೈಗೊಂಡಿದ್ದೇವೆಂದು ರೆಜಿಸ್ಟ್ರಾರ್ ಪ್ರೊ.ಶಿವರಾಜು ತಿಳಿಸಿದ್ದಾರೆ.
ವಿವಿ ವೆಬ್'ಸೈಟ್'ನಲ್ಲಿಯೇ ಲಭ್ಯವಾಗಲಿದೆ ಮೆರಿಟ್ ಪಟ್ಟಿ
ಆನ್ ಲೈನ್ ಮೂಲಕ ಸ್ನಾತಕೋತ್ತರ ಪದವಿಗೆ ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗಳಿಗೆ ಮೆರಿಟ್ ಪಟ್ಟಿ ಕೂಡ ಆನ್'ಲೈನ್ ನಲ್ಲಿಯೇ ಲಭ್ಯವಾಗಲಿದೆ.
ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳು ದಾಖಲಾತಿಗಳ ಹಾರ್ಡ್ ಕಾಪಿಗಳನ್ನು ಸಲ್ಲಿಕೆ ಮಾಡಬೇಕು. ಈ ದಾಖಲಾತಿಗಲನ್ನು ಇಲಾಖೆ ಪರಿಶೀಲನೆ ನಡೆಸಿ ಮೆರಿಟ್ ಪಟ್ಟಿ ನೀಡಲು ಸಹಾಯಕವಾಗುತ್ತವೆ.
ದಾಖಲಾತಿಗಳನ್ನು ಪರಿಶೀಲನೆ ನಡೆಸಿದ ಬಳಿಕ ವಿವಿ ಮೆರಿಟ್ ಪಟ್ಟಿಯನ್ನು ತನ್ನ ವೆಬ್ ಸೈಟ್ ನಲ್ಲಿಯೇ ಪ್ರಕಟಿಸಲಿದೆ. ಬಳಿಕ ಜ್ಞಾನಭಾರತಿ ಕ್ಯಾಂಪಸ್ ನಲ್ಲಿಯೇ ವಿಶ್ವವಿದ್ಯಾಲಯ ಕೌನ್ಸಿಲಿಂಗ್ ನಡೆಸಲಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


