ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಯಾಗಿ ವಿಜಯ್ ಭಾಸ್ಕರ್ ನೇಮಕ
ರಾಜ್ಯ ಸರ್ಕಾರದ ನೂತನ ಮುಖ್ಯ ಕಾರ್ಯದರ್ಶಿಯಾಗಿ ಹಿರಿಯ ಐಎಎಸ್ ಅಧಿಕಾರಿ ಟಿಎಂ ವಿಜಯ್ ಭಾಸ್ಕರ್...

Published On :
ಬೆಂಗಳೂರು: ರಾಜ್ಯ ಸರ್ಕಾರದ ನೂತನ ಮುಖ್ಯ ಕಾರ್ಯದರ್ಶಿಯಾಗಿ ಹಿರಿಯ ಐಎಎಸ್ ಅಧಿಕಾರಿ ಟಿಎಂ ವಿಜಯ್ ಭಾಸ್ಕರ್ ಅವರನ್ನು ನೇಮಕ ಮಾಡಲಾಗಿದೆ.
ಹಾಲಿ ಮುಖ್ಯ ಕಾರ್ಯದರ್ಶಿ ಕೆ. ರತ್ನಪ್ರಭಾ ಅವರ ಸೇವಾ ಅವಧಿ ಇಂದು ಅಂತ್ಯಗೊಳ್ಳಲಿದ್ದು, ಅವರ ಸ್ಥಾನಕ್ಕೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿದ್ದ ವಿಜಯ್ ಭಾಸ್ಕರ್ ಅವರನ್ನು ನೇಮಕಗೊಳಿಸಿ ರಾಜ್ಯ ಸರಕಾರ ಶನಿವಾರ ಆದೇಶ ಹೊರಡಿಸಿದೆ.
ಬೆಂಗಳೂರು ಮೂಲದ ವಿಜಯ್ ಭಾಸ್ಕರ್ ಅವರು 1983ನೇ ಬ್ಯಾಚ್ ಐಎಎಸ್ ಅಧಿಕಾರಿಯಾಗಿದ್ದು, ಬಿಬಿಎಂಪಿಯ ಆಯುಕ್ತರಾಗಿಯೂ ಅವರು ಸೇವೆ ಸಲ್ಲಿಸಿದ್ದಾರೆ.
2017ರ ನವೆಂಬರ್‌ನಲ್ಲಿ 1981ನೇ ಬ್ಯಾಚ್ ಐಎಎಸ್ ಅಧಿಕಾರಿ ಕೆ.ರತ್ನಪ್ರಭಾ ಅವರನ್ನು ಮುಖ್ಯಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿತ್ತು. ಆಗಲೇ ವಿಜಯಭಾಸ್ಕರ್ ಅವರ ಹೆಸರು ಮುಖ್ಯಕಾರ್ಯದರ್ಶಿ ಹುದ್ದೆಗೆ ಕೇಳಿಬಂದಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


