ಬಳ್ಳಾರಿ: ಪೊಲೀಸ್ ಇನ್‌ಸ್ಪೆಕ್ಟರ್ ಪತಿ ಮೇಲೆ ಕಾಂಗ್ರೆಸ್ ಮುಖಂಡನಿಂದ ಹಲ್ಲೆ; ದೂರು ದಾಖಲು
ಕಾಂಗ್ರೆಸ್ ಮುಖಂಡ ಫರ್ಹಾನ್ ಅಹ್ಮದ್ ಅವರು ಜಿಲ್ಲಾ ಆಸ್ಪತ್ರೆಯಲ್ಲಿ ಬುಧವಾರ ತಮ್ಮಮೇಲೆ ಹಲ್ಲೆ ನಡೆಸಿದ್ದಾರೆ ಎಂದು.....

Published On :
ಬಳ್ಳಾರಿ: ಕಾಂಗ್ರೆಸ್ ಮುಖಂಡ ಫರ್ಹಾನ್ ಅಹ್ಮದ್ ಅವರು ಜಿಲ್ಲಾ ಆಸ್ಪತ್ರೆಯಲ್ಲಿ ಬುಧವಾರ ತಮ್ಮಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ ರೇಡಿಯಾಲಜಿ ವಿಭಾಗದ ವೈದ್ಯ ವಿನೋದ್ ಹಾಗೂ ಬಳ್ಳಾರಿ ಮಹಿಳಾ ಪೊಲೀಸ್ ಠಾಣೆಯ ಇನ್‌ಸ್ಪೆಕ್ಟರ್ ಗಾಯತ್ರಿ ಅವರ ಪತಿ, ಡಾ.ವಿನೋದ್ ಅವರು ಶುಕ್ರವಾರ ಪೊಲೀಸರಿಗೆ ದೂರು ನೀಡಿದ್ದಾರೆ.
ಜಿಲ್ಲಾ ಕಾಂಗ್ರೆಸ್ ಸಮಿತಿ ನಗರ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷರಾಗಿರುವ ಅಹ್ಮದ್ ತಮ್ಮ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ವಿನೋದ್ ಅವರು ಇಂದು ಗಾಂಧಿನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ವೈದ್ಯರನ್ನು ಬೆಂಬಲಿಸಿ ಭಾರತೀಯ ವೈದ್ಯಕೀಯ ಸಂಘ, ರೇಡಿಯಾಲಜಿಸ್ಟರ ಸಂಘ ಮತ್ತು ಸರ್ಕಾರಿ ವೈದ್ಯಾಧಿಕಾರಿಗಳ ಸಂಘದ ಪ್ರಮುಖರು ಠಾಣೆಯಲ್ಲಿ ಹಾಜರಿದ್ದರು.
ಇನ್ನು ಈ ಬಗ್ಗೆ ಪ್ರತಿಕ್ರಿಯಿಸಿರುವ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಚೇತನ್ ಅವರು, ಹಲ್ಲೆ ಘಟನೆಗೆ ಸಂಬಂಧಿಸಿ ಸಮಗ್ರ ವರದಿ ನೀಡಲು ನಗರ ಉಪ ವಿಭಾಗದ ಡಿವೈಎಸ್ಪಿಗೆ ಸೂಚಿಸಿರುವುದಾಗಿ ಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Bellaryಬಳ್ಳಾರಿLocal politicianassaults lady police inspector\'s husbandಸ್ಥಳೀಯ ರಾಜಕಾರಣಿಪೊಲೀಸ್ ಇನ್ಸ್ ಪೆಕ್ಟರ್ ಪತಿ ಮೇಲೆ ಹಲ್ಲೆ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


