ರಾಜ್ಯ

ಗಂಗಾವತಿ: ಹೋಳಿ ಆಚರಣೆ ವೇಳೆ ನದಿಯಲ್ಲಿ ಮುಳುಗಿ ಯುವಕ ಸಾವು

ನಾಡಿನೆಲ್ಲೆಡೆ ಹೋಳಿ ಹಬ್ಬದ ಸಡಗರ ಮನೆ ಮಾಡಿದೆ. ಆದರೆ ಇದೇ ಸಂಭ್ರಮಾಚರಣೆಗಾಗಿ ಬೆಂಗಳೂರಿನಿಂದ ತನ್ನ ಊರಿಗೆ ಬಂದಿದ್ದ ಯುವಕನೊಬ್ಬ ನದಿಯಲ್ಲಿ ಮುಳುಗಿ ಸಾವನ್ನಪ್ಪಿರುವ...........

ಗಂಗಾವತಿ: ಹೋಳಿ ಆಚರಣೆ ವೇಳೆ ನದಿಯಲ್ಲಿ ಮುಳುಗಿ ಯುವಕ ಸಾವು
ಗಂಗಾವತಿ: ಹೋಳಿ ಆಚರಣೆ ವೇಳೆ ನದಿಯಲ್ಲಿ ಮುಳುಗಿ ಯುವಕ ಸಾವು
Published On :
ಗಂಗಾವತಿ: ನಾಡಿನೆಲ್ಲೆಡೆ ಹೋಳಿ ಹಬ್ಬದ ಸಡಗರ ಮನೆ ಮಾಡಿದೆ. ಆದರೆ ಇದೇ ಸಂಭ್ರಮಾಚರಣೆಗಾಗಿ ಬೆಂಗಳೂರಿನಿಂದ ತನ್ನ ಊರಿಗೆ ಬಂದಿದ್ದ ಯುವಕನೊಬ್ಬ ನದಿಯಲ್ಲಿ ಮುಳುಗಿ ಸಾವನ್ನಪ್ಪಿರುವ ದಾರುಣ ಘಟನೆ ಕೊಪ್ಪಳ ಜಿಲ್ಲೆ ಗಂಗಾವತಿಯಲ್ಲಿ ನಡೆದಿದೆ.
ಗಂಗಾವತಿ ನಗರದ  13ನೇ ವಾರ್ಡ್ ನಿವಾಸಿ ಸಾಗರ್ ಕುಮಾರ್ (21) ಮೃತ ದುರ್ದೈವಿಯಾಗಿದ್ದು ಬೆಂಗಳೂರಿನಲ್ಲಿ ಇಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿದ್ದ. ಹೋಳಿ ಹಬ್ಬಕ್ಕೆಂದು ಮಾ.1ರಂದು ಗಂಗಾವತಿಗೆ ಬಂದಿದ್ದ. 
ಮಾ.2ರಂದು ಸ್ನೇಹಿತರೊಡನೆ ಹೋಳಿ ಆಚರಣೆಯಲ್ಲಿ ತೊಡಗಿದ್ದು ಬಣ್ಣದ ನೀರೆರಚಿ ಸಂಭ್ರಮಿಸಿದ್ದ. ಆ ನಂತರ ಸ್ನೇಹಿತರೊಡನೆ ಕಂಪ್ಲಿ ಬಳಿಯ ತುಂಗಭದ್ರಾ ನದಿಗೆ ಸ್ನಾನಕ್ಕೆಂದು ಇಳಿದಿದ್ದ ಸಾಗರ್ ಸ್ನಾನ ಮಾಡುತ್ತಿದ್ದಾಗಲೇ ಕಾಲು ಜಾರಿ ಮುಳುಗಿದ್ದಾನೆ.  
ಇದನ್ನು ನೋಡಿದ ಸ್ಥಳೀಯ ಮೀನುಗಾರರು ಯುವಕನನ್ನು ನೀರಿನೆಂದೆತ್ತಿ ಸ್ಥಳೀಯ ಆಸ್ಪತ್ರೆಗೆ ದಾಕಲಿಸಲು ಮುಂದಾಗಿದ್ದಾರೆ. ಆದರೆ ಹೀಗೆ ಆಸ್ಪತ್ರೆಗೆ ಸಾಗಿಸುವ ಸಮಯದಲ್ಲಿ ಮಾರ್ಗ ಮಧ್ಯೆಯೇ ಸಾಗರ್ ಪ್ರಾಣ ಬಿಟ್ಟಿದ್ದಾನೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.