ಕುಷ್ಠರೋಗಿಗಳ ಆಧಾರ್ ಸಮಸ್ಯೆ: ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಪತ್ರಕರ್ತೆಗೆ ಚಮೇಲಿ ದೇವಿ ಜೈನ್ ಪ್ರಶಸ್ತಿ
ಕುಷ್ಠರೋಗದಿಂದ ಆಧಾರ್ ನೋಂದಣಿಗೆ ತೊಡಕುಂಟಾಗಿ ಸೌಲಭ್ಯ ವಂಚಿತರ ಬಗ್ಗೆ ಸರಣಿ ವರದಿಗಳನ್ನು ಪ್ರಕಟಿಸಿದ್ದ ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ನ ಹಿರಿಯ ವರದಿಗಾರ್ತಿ ಸುರಕ್ಷಾ.ಪಿ ಅವರಿಗೆ ಚಮೇಲಿ ದೇವಿ

Published On :
ಬೆಂಗಳೂರು: ಕುಷ್ಠರೋಗದಿಂದ ಆಧಾರ್ ನೋಂದಣಿಗೆ ತೊಡಕುಂಟಾಗಿ ಸೌಲಭ್ಯ ವಂಚಿತರ ಬಗ್ಗೆ ಸರಣಿ ವರದಿಗಳನ್ನು ಪ್ರಕಟಿಸಿದ್ದ ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ನ ಹಿರಿಯ ವರದಿಗಾರ್ತಿ ಸುರಕ್ಷಾ.ಪಿ ಅವರಿಗೆ ಚಮೇಲಿ ದೇವಿ ಜೈನ್ ಪ್ರಶಸ್ತಿ ಲಭಿಸಿದೆ.
ಚಮೇಲಿ ದೇವಿ ಜೈನ್ ಅಪ್ರತಿಮ ಮಹಿಳಾ ಪತ್ರಕರ್ತರಿಗೆ ನೀಡಲಾಗುವ ಪ್ರತಿಷ್ಠಿತ ಪ್ರಶಸ್ತಿಯಾಗಿದ್ದು, ತೀರ್ಪುಗಾರರು ಸುರಕ್ಷಾ ಅವರ ವರದಿಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದು, ಮಾ.09 ರಂದು ನವದೆಹಲಿಯಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ. ಡಿ.02 ರಿಂದ ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಕುಷ್ಠರೋಗಿಗಳು ಆಧಾರ್ ನೋಂದಣಿ ಹಾಗೂ ಅದರಿಂದ ಸಿಗಬೇಕಾಗಿದ್ದ ಸೌಲಭ್ಯಗಳನ್ನು ಪಡೆಯಲು ಸಾಧ್ಯವಾಗದೇ ಎದುರಿಸುತ್ತಿದ್ದ ಬಗ್ಗೆ ಸರಣಿ ವರದಿಗಳನ್ನು ಪ್ರಕಟಿಸಿತ್ತು. ಇದೇ ಸಮಸ್ಯೆ ಎದುರಿಸುತ್ತಿದ್ದ ಸಜೀದಾ ಬೇಗಂ (65) ಅವರ ಬಗ್ಗೆಯೂ ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ನಲ್ಲಿ ವರದಿ ಪ್ರಕಟವಾಗಿತ್ತು.
ಎಕ್ಸ್ ಪ್ರೆಸ್ ವರದಿಯ ಬೆನ್ನಲ್ಲೆ ಎಚ್ಚೆತ್ತುಕೊಂಡಿದ್ದ ರಾಷ್ಟ್ರೀಯ ಹೆಲ್ತ್ ಮಿಷನ್ ನ ನಿರ್ದೇಶಕ ರಥನ್ ಕೇಲ್ಕರ್, ಸಜೀದಾ ಬೇಗಂ ಪ್ರಕರಣವನ್ನು ಸೆಂಟರ್ ಫಾರ್ ಇ-ಕಾಮರ್ಸ್ ನ ಗಮನಕ್ಕೆ ತಂದು, ಆ ರೀತಿಯ ಪ್ರಕರಣಗಳಿಗೆ ಪರಿಹಾರ ಕಂಡುಕೊಳ್ಳುವುದಕ್ಕೆ ಕ್ರಮ ಕೈಗೊಂಡಿದ್ದರು. ಸಜೀದಾ ಬೇಗಂಗೆ ನೆಟಿಜನ್ ಗಳ ನೆರವು ಸಹ ಲಭಿಸಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Aadhaar Numberleprosy patientNew Indian Express journalistಕುಷ್ಠರೋಗಿಆಧಾರ್ ಸಮಸ್ಯೆದಿ ನ್ಯೂ ಇಂಡಿಯನ್
ಎಕ್ಸ್ ಪ್ರೆಸ್ ವರದಿಗಾರ್ತಿ
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.
ಬ್ರೇಕಿಂಗ್ ನ್ಯೂಸ್
ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಹೆಚ್ಚಿದ ಒತ್ತಡ: ಮುಖ್ಯ ಚುನಾವಣಾ ಆಯುಕ್ತರನ್ನ ವಜಾ ಮಾಡೊದು ಅಷ್ಟು ಸುಲಭನಾ? ಯಾರಿಗಿದೆ ಆ ಪವರ್? ಸಂವಿಧಾನ ಹೇಳುವುದೇನು?ರಾಹುಕಾಲ ಎಂದರೇನು? ಮದುವೆಗೆ ಅನ್ವಯಿಸುತ್ತದೆಯೇ? ರಾಹು ಶಾಂತಿಗಾಗಿ ನಿಂಬೆ ಹಣ್ಣು ದೀಪ ಹಚ್ಚುವುದು ಸೂಕ್ತವೇ?ಗೌರಿಬಿದನೂರಿನ ಮಣ್ಣಲ್ಲಿ ಅರಳಿದ ಮರುಭೂಮಿ ಹಣ್ಣು: ಅಸಾಧ್ಯವನ್ನು ಸಾಧ್ಯವಾಗಿಸಿದ ಹಠವಾದಿ; ಸ್ವಾವಲಂಬಿ ಕೃಷಿಗೆ ಹೊಸ ಭಾಷ್ಯ ಬರೆದ ದಿವಾಕರ್ ಚನ್ನಪ್ಪ..!ಕರ್ನಾಟಕದ ನಂ.1 ಶ್ರೀಮಂತ ಯಾರು ಗೊತ್ತಾ? ಅಂಬಾನಿ, ಅದಾನಿ ಬಿಡಿ; ಇಲ್ಲಿದೆ ನಮ್ಮ ಕರುನಾಡ ಸಿರಿವಂತರ ಟಾಪ್ ಲಿಸ್ಟ್!ಫ್ಯಾಟ್ ನಿಂದ ಫಿಟ್ ವರೆಗೆ: ಸಾಹೇಬಲಾಲ್ ಛಪ್ಪರ್ಬಂದ್ ಸ್ಫೂರ್ತಿದಾಯಕ ಪಯಣವಿದೇಶಿ ಪ್ರವಾಸದ ಪ್ಲ್ಯಾನ್ ಇದೆಯೇ? ಒಂದು ಸಣ್ಣ ತಪ್ಪು ಭಾರೀ ದಂಡಕ್ಕೆ ಕಾರಣವಾಗಬಹುದು; ಪ್ರವಾಸಿಗರು ತಿಳಿದಿರಲೇಬೇಕಾದ ನಿಯಮಗಳಿವು...!ಮನಸ್ಸಿದ್ದರೆ ಮಾರ್ಗ ಎಂಬುದನ್ನು ರುಜುವಾತು ಮಾಡಿದ ಛಲವಾದಿ; 27 ವರ್ಷಗಳ ಹೋರಾಟದಲ್ಲಿ 26 ಬಾರಿ ಸೋತು 59ನೇ ವಯಸ್ಸಿನಲ್ಲಿ ಸರ್ಕಾರಿ ಶಿಕ್ಷಕರಾದ ವಿಜಯ್ಪಶ್ಚಿಮ ಘಟ್ಟಗಳ ESA - ಕಸ್ತೂರಿರಂಗನ್ ವರದಿ ಇನ್ನೂ ಏಕೆ ಜಾರಿಗೆ ಬಂದಿಲ್ಲ?


