ರಾಜ್ಯ

ಕರ್ನಾಟಕ ವಿಧಾನಸಭೆ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಗಳ ಆಯ್ಕೆಗೆ ದೆಹಲಿಯಲ್ಲಿ ಮೂರು ದಿನಗಳ ಸಭೆ

ರಾಜ್ಯ ವಿಧಾನಸಭಾ ಚುನಾವಣೆ ಹತ್ತಿರ ಬರುತ್ತಿರುವ ಹಿನ್ನಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಸಲುವಾಗಿ ಕಾಂಗ್ರೆಸ್, ರಾಜಧಾನಿ ದೆಹಲಿಯಲ್ಲಿ ಮೂರು ದಿನಗಳ ಕಾಲ ಸಭೆ ನಡೆಸಲಿದೆ...

ಕರ್ನಾಟಕ ವಿಧಾನಸಭೆ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಗಳ ಆಯ್ಕೆಗೆ ದೆಹಲಿಯಲ್ಲಿ ಮೂರು ದಿನಗಳ ಸಭೆ
ಮುಖ್ಯಮಂತ್ರಿ ಸಿದ್ದರಾಮಯ್ಯ
Published On :
ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆ ಹತ್ತಿರ ಬರುತ್ತಿರುವ ಹಿನ್ನಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಸಲುವಾಗಿ ಕಾಂಗ್ರೆಸ್, ರಾಜಧಾನಿ ದೆಹಲಿಯಲ್ಲಿ ಮೂರು ದಿನಗಳ ಕಾಲ ಸಭೆ ನಡೆಸಲಿದೆ.
ಕಾಂಗ್ರೆಸ್ ಅಭ್ಯರ್ಥಿಗಳ ಆಯ್ಕೆ ಕುರಿತು ಸ್ಕ್ರೀನಿಂಗ್ ಸಮಿತಿ ಸಭೆ ಮಾ.27, 28, 29 ರಂದು ನಡೆಯಲಿದ್ದು, ಸ್ಕ್ರೀನಿಂಗ್ ಸಮಿತಿಯ ನೇತೃತ್ವವನನ್ನು ಎಐಸಿಸಿ ಪ್ರಧಾನ ಕಾರ್ಯದರ್ಶಿ ಮಧುಸೂದನ್ ಮಿಸ್ತ್ರಿ ಅವರು ವಹಿಸಿದ್ದಾರೆ. 
ಚುನಾವಣೆಗೆ ಸ್ಪರ್ಧಿಸುವ ಅಭ್ಯರ್ಥಿಗಳ ವಿಚಾರಕ್ಕೆ ಸಂಬಂಧಿಸಿದಂತೆ ದೆಹಲಿಯಲ್ಲಿ ಮಂಗಳವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಹುಲ್ ಗಾಂಧಿಯವರೊಂದಿಗೆ ಮಾತುಕತೆ ನಡೆಸಿದ್ದರು. ರಾಹುಲ್ ಗಾಂಧಿ ಭೇಟಿಯಾದ ಬಳಿಕ ರಾಜ್ಯಕ್ಕೆ ಆಗಮಿಸಿದ ಸಿದ್ದರಾಮಯ್ಯ ಅವರು, ಜಿ. ಪರಮೇಶ್ವರ್, ಕೆ.ಸಿ. ವೇಣುಗೋಪಾಲ್ ಸೇರಿದಂತೆ ಇನ್ನಿತರೆ ನಾಯಕರೊಂದಿಗೆ ಸಭೆ ನಡೆಸಿದ್ದರು. ಈ ಸಭೆ ಬಳಿಕ ದೆಹಲಿಯಲ್ಲಿ ದೆಹಲಿಯಲ್ಲಿ ಮೂರು ದಿನಗಳ ಸಭೆ ನಡೆಸಲು ನಿರ್ಧಾರ ಕೈಗೊಂಡಿದ್ದಾರೆಂದು ತಿಳಿದುಬಂದಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.