ಕಾವೇರಿ ವಿವಾದ: 'ಸುಪ್ರೀಂ' ತೀರ್ಪು ಕುರಿತು ಮರುಪರಿಶೀಲನೆ ಅರ್ಜಿ ಸಲ್ಲಿಸಲು ಗಡ್ಕರಿ ಸಲಹೆ- ದೇವೇಗೌಡ
ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ನೀಡಿರುವ ತೀರ್ಪು ಕುರಿತು ಮರುಪರಿಶೀಲನಾ ಅರ್ಜಿ ಸಲ್ಲಿಸುವಂತೆ ಕೇಂದ್ರ ನೀರಾವರಿ ಸಚಿವ ನಿತಿನ್ ಗಡ್ಕರಿಯವರು ಸಲಹೆ ನೀಡಿದ್ದಾರೆಂದು...

Published On :
ಬೆಂಗಳೂರು: ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ನೀಡಿರುವ ತೀರ್ಪು ಕುರಿತು ಮರುಪರಿಶೀಲನಾ ಅರ್ಜಿ ಸಲ್ಲಿಸುವಂತೆ ಕೇಂದ್ರ ನೀರಾವರಿ ಸಚಿವ ನಿತಿನ್ ಗಡ್ಕರಿಯವರು ಸಲಹೆ ನೀಡಿದ್ದಾರೆಂದು ಮಾಜಿ ಪ್ರಧಾನಮಂತ್ರಿ ಹೆಚ್.ಡಿ.ದೇವೇಗೌಡ ಅವರು ಗುರುವಾರ ಹೇಳಿದ್ದಾರೆ.
ನಿನ್ನೆಯಷ್ಟೇ ರಾಜಧಾನಿ ದೆಹಲಿಯಲ್ಲಿ ನಿತಿನ್ ಗಡ್ಕರಿಯವರನ್ನು ಭೇಟಿ ಮಾಡಿದ ದೇವೇಗೌಡ ಅವರು ಮಾತುಕತೆ ನಡೆಸಿದ್ದಾರೆ.
ಮಾತುಕತೆ ಕುರಿತಂತೆ ಸುದ್ದಿಗಾರರೊಂದಿಗೆ ಪ್ರತಿಕ್ರಿಯೆ ನೀಡಿರುವ ದೇವೇಗೌಡ ಅವರು, ಕಾವೇರಿ ವಿವಾದ ಕುರಿತಂತೆ ರಾಜ್ಯಕ್ಕೆ ಆಗಿರುವ ಅನ್ಯಾಯದ ಕುರಿತು ಗಡ್ಕರಿಯವರಿಗೆ ವಿವರಿಸಿದ್ದೇನೆ. ಚರ್ಚೆ ವೇಳೆ ತೀರ್ಪು ಕುರಿತು ಮರುಪರಿಶೀಲನೆ ಅರ್ಜಿ ಸಲ್ಲಿಸುವಂತೆ ಗಡ್ಕರಿಯವರು ಸಲಹೆ ನೀಡಿದ್ದಾರೆ. ನಾನು ಕೇಂದ್ರವೇ ಈ ಬಗ್ಗೆ ಮರು ಪರಿಶೀಲನಾ ಅರ್ಜಿ ಸಲ್ಲಿಸಲಿ ಎಂದು ಸಲಹೆ ನೀಡದ್ದೇನೆಂದು ಮಾಹಿತಿ ನೀಡಿದರು.
ಕಾವೇರಿ ನದಿ ಹಂಚಿಕೆ ವಿವಾದ ಕುರಿತಂತೆ ಸುಪ್ರೀಂಕೋರ್ಟ್ ತೀರ್ಪು ಕುರಿತು ಮರುಪರಿಶೀಲನಾ ಅರ್ಜಿ ಸಲ್ಲಿಕೆ ಕುರಿತಂತೆ ನಿನ್ನೆಯಷ್ಟೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸರ್ವಪಕ್ಷ ಸಭೆಯನ್ನು ಕರೆದಿದ್ದರು. ಸಭೆಗೆ ದೇವೇಗೌಡ ಅವರು ಗೈರು ಹಾಜರಾಗಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ದೇವೇಗೌಡKarnatakaಕರ್ನಾಟಕNitin Gadkariನಿತಿನ್ ಗಡ್ಕರಿDevegowdaCauvery water Disputeಕಾವೇರಿ ನದಿ ನೀರು ವಿವಾದ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


