ರಾಜ್ಯ

ಕಟ್ಟಡ ಕಾರ್ಮಿಕರಿಗೆ ಪರಿಹಾರ ನೀಡುವಂತೆ ರಾಜ್ಯಸರ್ಕಾರ, ಬಿಬಿಎಂಪಿಗೆ ಹೈಕೋರ್ಟ್ ನೋಟಿಸ್

ಕಳೆದ ವರ್ಷ ವರ್ತೂರನ ಶೋಭಾ ಡ್ರಿಮ್ ಅಕ್ರೀಸ್ ಕಟ್ಟಡ ನಿರ್ಮಾಣದ ವೇಳೆ ಮೃತಪಟ್ಟಿದ್ದ ಮೂವರು ಕಟ್ಟಡ ಕಾರ್ಮಿಕರ ಕುಟುಂಬಕ್ಕೆ ಪರಿಹಾರ ನೀಡುವಂತೆ ರಾಜ್ಯಸರ್ಕಾರ, ಬಿಬಿಎಂಪಿ, ಕಾರ್ಮಿಕರ ಕಲ್ಯಾಣ ಮಂಡಳಿ ಹಾಗೂ ಕ್ರೇಡಾಯ್ ಗೆ ಹೈಕೋರ್ಟ್ ಸೂಚನೆ ನೀಡಿದೆ.

ಕಟ್ಟಡ ಕಾರ್ಮಿಕರಿಗೆ ಪರಿಹಾರ ನೀಡುವಂತೆ  ರಾಜ್ಯಸರ್ಕಾರ, ಬಿಬಿಎಂಪಿಗೆ ಹೈಕೋರ್ಟ್ ನೋಟಿಸ್
ಹೈಕೋರ್ಟ್
Published On :

ಬೆಂಗಳೂರು:  ಕಳೆದ ವರ್ಷ ವರ್ತೂರನ ಶೋಭಾ ಡ್ರಿಮ್ ಅಕ್ರೀಸ್ ಕಟ್ಟಡ ನಿರ್ಮಾಣದ ವೇಳೆ ಮೃತಪಟ್ಟಿದ್ದ ಮೂವರು  ಕಟ್ಟಡ ಕಾರ್ಮಿಕರ ಕುಟುಂಬಕ್ಕೆ  ಪರಿಹಾರ ನೀಡುವಂತೆ ರಾಜ್ಯಸರ್ಕಾರ, ಬಿಬಿಎಂಪಿ, ಕಾರ್ಮಿಕರ ಕಲ್ಯಾಣ ಮಂಡಳಿ ಹಾಗೂ ಕ್ರೇಡಾಯ್ ಗೆ  ಹೈಕೋರ್ಟ್ ಸೂಚನೆ ನೀಡಿದೆ.

ಈ ಸಂಬಂಧ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಾಧೀಶ ದಿನೇಶ್ ಮಹೇಶ್ವರಿ ಮತ್ತು ಎಸ್. ಸುನೀಲ್ ದತ್ತ್ ಯಾದವ್ ಅವರಿದ್ದ ದ್ವಿಸದಸ್ಯ ಪೀಠ, ಕಟ್ಟಡ ಕಾರ್ಮಿಕರ ಸಂತ್ರಸ್ಥ ಕುಟುಂಬಗಳಿಗೆ ಪರಿಹಾರ ನೀಡಬೇಕು.ಈ ಬಗ್ಗೆ ನಾಲ್ಕು ವಾರಗಳಲ್ಲಿ ಪ್ರತಿಕ್ರಿಯೆ ನೀಡುವಂತೆ ಸೂಚಿಸಿದೆ.

ಕಟ್ಟಡ ಕಾರ್ಮಿಕರ ಕುಟುಂಬ ಸುರಕ್ಷಿತವಾಗಿ ಬದುಕಲು 25 ಲಕ್ಷ ರೂಪಾಯಿ ಮಧ್ಯಂತರ ಪರಿಹಾರ ನೀಡುವಂತೆ  ಅರ್ಜಿದಾರರ ಪರ ವಕೀಲರಾದ ಕ್ರಿಪ್ಟಾನ್ ರೊಜಾರಿಯಾ ಒತ್ತಾಯಿಸಿದ್ದರು.

  ಮೃತಪಟ್ಟ ಕುಟುಂಬ ಸದಸ್ಯರಿಗೆ 25 ಲಕ್ಷ ಹಾಗೂ ಕಟ್ಟಡ ನಿರ್ಮಾಣದ ವೇಳೆ ಗಾಯಗೊಂಡ ಕುಟುಂಬ ವರ್ಗಕ್ಕೆ 10 ಲಕ್ಷ ರೂಪಾಯಿ ಪರಿಹಾರ ನೀಡುವಂತೆ ರಾಜ್ಯಸರ್ಕಾರಕ್ಕೆ  ನ್ಯಾಯಾಲಯ ಸೂಚಿಸಬೇಕೆಂದು ಅವರು ಮನವಿ ಮಾಡಿಕೊಂಡಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.