ರಾಜ್ಯ

ಗೌರಿ ಲಂಕೇಶ್ ಹತ್ಯೆ ಪ್ರಕರಣದಲ್ಲಿ ಶಂಕಿತ ನವೀನ್ ಕುಮಾರ್ ಎಸ್ಐಟಿ ವಶಕ್ಕೆ; ಮಂಪರು ಪರೀಕ್ಷೆಗೆ ಮನವಿ

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣ ಸಂಬಂಧ ವಿಶೇಷ ತನಿಖಾ ದಳ(ಎಸ್ಐಟಿ) ಯಿಂದ ಬಂಧಿಸಲ್ಪಟ್ಟಿರುವ ಆರೋಪಿ ಕೆ.ಟಿ. ನವೀನ್ ಕುಮಾರ್ ಅವರನ್ನು ತೀವ್ರತರದ ತನಿಖೆಗೆ ಒಳಪಡಿಸಲಾಗಿದೆ.

ಗೌರಿ ಲಂಕೇಶ್ ಹತ್ಯೆ ಪ್ರಕರಣದಲ್ಲಿ ಶಂಕಿತ ನವೀನ್ ಕುಮಾರ್ ಎಸ್ಐಟಿ ವಶಕ್ಕೆ; ಮಂಪರು ಪರೀಕ್ಷೆಗೆ ಮನವಿ
ಗೌರಿ ಲಂಕೇಶ್
Published On :
ಬೆಂಗಳೂರು: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣ ಸಂಬಂಧ ವಿಶೇಷ ತನಿಖಾ ದಳ(ಎಸ್ಐಟಿ) ಯಿಂದ ಬಂಧಿಸಲ್ಪಟ್ಟಿರುವ ಆರೋಪಿ ಕೆ.ಟಿ. ನವೀನ್ ಕುಮಾರ್ ಅವರನ್ನು ತೀವ್ರತರದ ತನಿಖೆಗೆ ಒಳಪಡಿಸಲಾಗಿದೆ. 
ಹೀಗೆ ತನಿಖೆ ನಡೆಸಿದ್ದ ವೇಳೆ ಆರೋಪಿಯು ಗೌರಿ ಲಂಕೇಶ್ ಹತ್ಯೆಗೆ ಕೆಲ ಗಂಟೆಗಳು ಬಾಕಿ ಇರುವಾಗಲೇ ಆಕೆಯ ಮನೆಯ ಸುತ್ತಲಿನ ಪ್ರದೇಶಗಳಲ್ಲಿ ಸ್ಥಳ ಪರಿಶೀಲನೆ ನಡೆಸಿದ್ದ ಎನ್ನುವುದು ತಿಳಿದುಬಂದಿದೆ.
ಆರೋಪಿ ನವೀನ್ ನನ್ನು ಮೂರನೇ ಎಸಿಎಂಎಂ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದ ಎಸ್ಐಟಿ ತಮ್ಮ ತನಿಖೆಗೆ ಅನುಕೂಲವಾಗುವಂತೆ ಆರೋಪಿಗೆ ಮಂಪರು ಪರೀಕ್ಷೆ ನಡೆಸಲು ಅವಕಾಶವನ್ನು ಕೋರಿದೆ. ಎಸ್ಐಟಿ ಮನವಿಯನ್ನು ಆಲಿಸಿದ ನ್ಯಾಯಾಲಯ  ಈ ಸಂಬಂಧದ ತನ್ನ ಆದೇಶವನ್ನು ಮಾರ್ಚ್ 12ರವರೆಗೆ ಕಾಯ್ದಿರಿಸಿದೆ. 
ಇದಕ್ಕೂ ಮುನ್ನ ಎಸ್ಐಟಿ ತನ್ನ ತನಿಖಾ ವರದಿಗಳನ್ನು ಮೊಹರು ಮಾಡಿದ್ದ ಕವರ್ ನಲ್ಲಿ ನ್ಯಾಯಾಲಯಕ್ಕೆ ಸಲ್ಲಿಸಿತ್ತು. 
ಆರೋಪಿಯನ್ನು ಇನ್ನಷ್ಟು ವಿವರವಾಗಿ ತನಿಖೆಗೆ ಒಳಪಡಿಸುವ ಸಲುವಾಗಿ ಈತನನ್ನು ಹಲವು ಸ್ಥಳಗಳಿಗೆ ಕರೆದೊಯ್ಯಬೇಕಾಗಿದೆ. ಹೀಗಾಗಿ ಆರೋಪಿಯ ನ್ಯಾಯಾಂಗ ಬಂಧನ ಅವಧಿಯನ್ನು ಇನ್ನೂ ಐದು ದಿನಗಳವರೆಗೆ ವಿಸ್ತರಿಸಬೇಕೆಂದು ಪಬ್ಲಿಕ್ ಪ್ರಾಸಿಕ್ಯೂಟರ್ ನ್ಯಾಯಾಲಯಕ್ಕೆ ಮನವಿ ಸಲ್ಲಿಸಿದ್ದರು. ಆದರೆ ಪ್ರಕರಣದಲ್ಲಿ ಯಾವುದೇ ಹೊಸ ಬೆಳವಣಿಗೆ ಕಂಡುಬಂದಿಲ್ಲ. ಎಸ್ಐಟಿ ವಿನಾಕಾರಣ ಈ ರೀತಿಯಾಗಿ ಆರೋಪಿಯ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆಗೆ ಮನವಿ ಮಾಡುತ್ತಿದೆ ಎಂದು ಪ್ರತಿವಾದಿ ವಕೀಲರು ವಾದಿಸಿದ್ದಾರೆ.
ಕಡೆಗೆ ಎರಡೂ ಪಕ್ಷದವರ ವಾದವನ್ನು ಆಲಿಸಿದ ನ್ಯಾಯಾಲಯ ಆರೋಪಿ ನವೀನ್ ನ್ಯಾಯಾಂಗ ಬಂಧನ ಅವಧಿಯನ್ನು ಮಾ.13ರವರೆಗೆ ವಿಸ್ತರಿಸಿ ಆದೇಶ ನೀಡಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.